ಯೆರೆಮೀಯ 3:22 - ಕನ್ನಡ ಸಮಕಾಲಿಕ ಅನುವಾದ22 “ಭ್ರಷ್ಟರಾದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಭ್ರಷ್ಟತನವನ್ನು ನಾನು ಸ್ವಸ್ಥ ಮಾಡುವೆನು.” “ಇಗೋ, ನಿಮ್ಮ ಬಳಿಗೆ ಬರುತ್ತೇವೆ, ಏಕೆಂದರೆ ನೀವು ಯೆಹೋವ ದೇವರು, ನಮ್ಮ ದೇವರಾಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸರ್ವೇಶ್ವರ : “ಭ್ರಷ್ಟರಾದ ಜನರೇ, ಹಿಂದಿರುಗಿ ಬನ್ನಿ, ನಾನು ನಿಮ್ಮ ಭ್ರಷ್ಟತನವನ್ನು ಪರಿಹರಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು [ಎಂದು ಯೆಹೋವನು ಅನ್ನುತ್ತಾನೆ. ಅದಕ್ಕೆ ಜನರು] - ಇಗೋ, ನಿನ್ನ ಬಳಿಗೆ ಬಂದೆವು. ನೀನು ಯೆಹೋವನು, ನಮ್ಮ ದೇವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಇದಲ್ಲದೆ ಯೆಹೋವನು, “ಅಪನಂಬಿಗಸ್ತರಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ. ನನಗೆ ವಿಶ್ವಾಸದ್ರೋಹ ಮಾಡಿದುದಕ್ಕೆ ನಾನು ಕ್ಷಮಿಸುವೆನು, ಹಿಂತಿರುಗಿ ಬನ್ನಿ” ಎಂದು ಹೇಳುತ್ತಾನೆ. “ಅದಕ್ಕೆ ಜನರು, ‘ಆಗಲಿ ನಿನ್ನಲ್ಲಿಗೆ ಬರುತ್ತೇವೆ. ನೀನೇ ನಮ್ಮ ದೇವರಾದ ಯೆಹೋವನು. ಅಧ್ಯಾಯವನ್ನು ನೋಡಿ |