ಯೆರೆಮೀಯ 3:23 - ಕನ್ನಡ ಸಮಕಾಲಿಕ ಅನುವಾದ23 ನಿಶ್ಚಯವಾಗಿ ಗುಡ್ಡಗಳಿಂದಲೂ, ಬೆಟ್ಟಗಳ ಸಮೂಹದಿಂದಲೂ ನಮಗೆ ಮೋಸವಾಗಿದೆ. ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವ ದೇವರಲ್ಲಿಯೇ ಇದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಜನರು : “ಇಗೋ, ನಿಮಗೆ ಅಭಿಮುಖರಾಗಿ ಬಂದಿದ್ದೇವೆ. ನೀವೇ ನಮ್ಮ ಸರ್ವೇಶ್ವರ, ನಮ್ಮ ದೇವರು. ನಿಶ್ಚಯವಾಗಿ ಬೆಟ್ಟಗುಡ್ಡಗಳಿಂದಲೂ ಜಾತ್ರೆಜಂಗುಳಿಯಿಂದಲೂ ನಮಗೆ ಮೋಸವಾಯಿತು. ಇಸ್ರಯೇಲಿನ ಉದ್ಧಾರ ಇರುವುದು ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯ ಕೈಯಲ್ಲೇ, ಇದು ಸತ್ಯಕ್ಕೂ ಸತ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಬೆಟ್ಟದ ಮೇಲೆ ವಿಗ್ರಹಗಳ ಪೂಜೆ ಮಾಡಿದ್ದು ನಮ್ಮ ಮೂರ್ಖತನವಾಯಿತು. ಬೆಟ್ಟಗಳ ಮೇಲಿನ ಎಲ್ಲಾ ಉತ್ಸವಗಳು ಕೇವಲ ಸುಳ್ಳು. ಇಸ್ರೇಲಿನ ರಕ್ಷಣೆ ಖಚಿತವಾಗಿಯೂ ನಮ್ಮ ದೇವರಾದ ಯೆಹೋವನಿಂದ ಮಾತ್ರ ಸಾಧ್ಯ. ಅಧ್ಯಾಯವನ್ನು ನೋಡಿ |