Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:3 - ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಮಳೆಗಳು ನಿಂತುಹೋದವು, ಹಿಂಗಾರೇ ಆಗಲಿಲ್ಲ. ವೇಶ್ಯೆಯ ನೋಟ ನಿನಗಿತ್ತು. ನಾಚುವುದನ್ನು ನಿರಾಕರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ವ್ಯಭಿಚಾರಿಯಾಗಿ ನಾಚಿಕೆಗೆಟ್ಟಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದಕಾರಣವೇ ಹದಮಳೆಗೆ ಅಡ್ಡಿಯಾಯಿತು. ವಸಂತಕಾಲದ ಮಳೆ ಬರದೆಹೋಯಿತು. ಇನ್ನೂ ನೀನು ವೇಶ್ಯೆ ಮುಖದವಳು, ಲಜ್ಜೆಗೆಟ್ಟವಳು !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ಸೂಳೆಯ ಮುಖವುಳ್ಳವಳಾಗಿ ನಾಚಿಕೆಗೆಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನು ಪಾಪ ಮಾಡಿದ್ದರಿಂದ ಮಳೆ ಬರಲಿಲ್ಲ; ಹಿಂಗಾರು ಮಳೆಯೂ ಆಗಲಿಲ್ಲ. ನಿನ್ನ ಮುಖದ ಮೇಲೆ ಇನ್ನೂ ವೇಶ್ಯೆಯ ಕಳೆಯೇ ಇದೆ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ನಾಚಿಕೆಯೂ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:3
28 ತಿಳಿವುಗಳ ಹೋಲಿಕೆ  

ನಿಮ್ಮ ಬಲದ ಗರ್ವವನ್ನು ಮುರಿದುಹಾಕಿ, ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಕಂಚಿನಂತೆಯೂ ಮಾಡುವೆನು.


ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಿರಾಶರಾಗಿ ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.


ಜನಾಂಗಗಳ ವ್ಯರ್ಥ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದ ಮಳೆಗಳನ್ನು ಕೊಟ್ಟೀತೇ? ಅಲ್ಲ, ನೀವೇ, ನಮ್ಮ ದೇವರಾದ ಯೆಹೋವ ದೇವರು, ನೀವೇ ವೃಷ್ಟಿದಾತರು, ನಾವು ನಿಮ್ಮನ್ನೇ ನಿರೀಕ್ಷಿಸುವೆವು, ನೀವು ಇವುಗಳನ್ನೆಲ್ಲಾ ನಡಿಸುವವರಾಗಿದ್ದೀರಷ್ಟೆ.


ತಮ್ಮ ಹೃದಯದಲ್ಲಿ, ‘ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡುವಂಥ ಸುಗ್ಗಿಗೆ ನೇಮಕವಾದ ವಾರಗಳನ್ನು ನಮಗೆ ಪ್ರತ್ಯೇಕಿಸುವಂಥ ನಮ್ಮ ದೇವರಾದ ಯೆಹೋವ ದೇವರಿಗೆ ಭಯಪಡೋಣ,’ ಎಂದುಕೊಳ್ಳುವುದಿಲ್ಲ.


ಅದನ್ನು ನಾನು ಹಾಳಾಗಲು ಬಿಡುವೆನು. ಅದರ ಕುಡಿ ಯಾರೂ ಕತ್ತರಿಸುವುದಿಲ್ಲ, ಅಗೆಯುವುದೂ ಇಲ್ಲ, ಅದರಲ್ಲಿ ಮುಳ್ಳು ಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾಪಿಸುವೆನು.”


ನಿಮ್ಮ ತಲೆಯ ಮೇಲಿರುವ ಆಕಾಶವು ಕಂಚಿನಂತೆಯೂ ಕೆಳಗಿರುವ ಭೂಮಿ ಬೆಳೆಕೊಡದೆ ಕಬ್ಬಿಣದಂತೆಯೂ ಇರುವವು.


ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆಯೂ ಎಣ್ಣೆಯ ಮೇಲೆಯೂ ಭೂಮಿಯ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕೈಕಸುಬುಗಳ ಮೇಲೆಯೂ ಬರಗಾಲವನ್ನು ತಂದಿದ್ದೇನೆ.”


“ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ, ಮಳೆಯನ್ನು ನಾನು ನಿಮ್ಮಿಂದ ಹಿಂದೆಗೆದಿದ್ದೇನೆ. ಒಂದು ಪಟ್ಟಣದ ಮೇಲೆ ಮಳೆ ಸುರಿಸಿ, ಇನ್ನೊಂದು ಪಟ್ಟಣದ ಮೇಲೆ ಮಳೆ ಸುರಿಸಲಿಲ್ಲ. ಒಂದು ಹೊಲದ ಮೇಲೆ ಮಳೆ ಸುರಿಸಿ, ಇನ್ನೊಂದು ಹೊಲದ ಮೇಲೆ ಮಳೆ ಸುರಿಸಲಿಲ್ಲ ಮತ್ತು ಅದು ಒಣಗಿ ಹೋಯಿತು.


ಇದನ್ನು ಗ್ರಹಿಸುವ ಜ್ಞಾನಿಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಯೆಹೋವ ದೇವರ ಬಾಯಿ ಯಾರ ಸಂಗಡ ಮಾತನಾಡಿತು? ದೇಶವು ಯಾವುದಕ್ಕಾಗಿ ನಾಶವಾಗಿ ಹಾದು ಹೋಗುವವನಿಲ್ಲದೆ ಮರುಭೂಮಿಯ ಹಾಗೆ ಹಾಳಾಯಿತು?


ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ, ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು, ಎಂದು ಯೆಹೋವ ದೇವರು ಹೇಳುತ್ತಾರೆ.


ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ. ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


ನೀತಿಯುಳ್ಳ ಯೆಹೋವ ದೇವರು ಅವಳ ಮಧ್ಯದಲ್ಲಿ ಇದ್ದಾರೆ. ಅವರು ಅನ್ಯಾಯ ಮಾಡುವುದಿಲ್ಲ; ಪ್ರತಿ ಬೆಳಿಗ್ಗೆ ತಮ್ಮ ನ್ಯಾಯತೀರ್ಪನ್ನು ಬೆಳಕಿಗೆ ತರುತ್ತಾರೆ; ಅವರು ತಪ್ಪುವವರಲ್ಲ. ಆದರೆ ಅನ್ಯಾಯವಂತನು ನಾಚಿಕೆಯನ್ನು ಅರಿಯನು.


ಆದರೆ ಇಸ್ರಾಯೇಲಿನ ಜನರೋ ನಿನ್ನ ಮಾತನ್ನು ಕೇಳಲು ಸಿದ್ಧರಿಲ್ಲ. ಏಕೆಂದರೆ ಅವರು ನನ್ನ ಮಾತನ್ನು ಕೇಳಲು ಸಿದ್ಧರಿಲ್ಲ. ಅವರೆಲ್ಲರು ಗರ್ವಿಗಳು ಹಾಗೂ ಹಟಮಾರಿಗಳು.


ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.


ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ. ಇವರು ಬಾವಿಗಳಿಗೆ ಬರುತ್ತಾರೆ. ಆದರೆ ನೀರು ಸಿಕ್ಕಲ್ಲ. ಬರೀ ಪಾತ್ರೆಗಳುಳ್ಳವರಾಗಿ ತಿರುಗಿಕೊಳ್ಳುತ್ತಾರೆ. ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ, ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.


“ಗ್ರಂಥದ ಸುರುಳಿಯನ್ನು ತೆಗೆದುಕೊಂಡು ನಾನು ಇಸ್ರಾಯೇಲ್, ಯೆಹೂದ ಮತ್ತು ಸಕಲ ಜನಾಂಗಗಳ ವಿರೋಧವಾಗಿಯೂ ನಿನ್ನ ಸಂಗಡ ಮಾತನಾಡಿದ ದಿನದಿಂದ, ಯೋಷೀಯನ ದಿವಸಗಳು ಮೊದಲುಗೊಂಡು ಈ ದಿವಸದವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.


ನಾಚಿಕೆ ಇಲ್ಲದ ಜನಾಂಗದವರೇ, ಒಟ್ಟಾಗಿ ಕೂಡಿಕೊಳ್ಳಿರಿ, ನೀವು ಒಟ್ಟಾಗಿ ಕೂಡಿಕೊಳ್ಳಿರಿ,


ಮರುದಿನ ಹಿರಿಯವಳು ಚಿಕ್ಕವಳಿಗೆ, “ಕಳೆದ ರಾತ್ರಿ ತಂದೆಯ ಸಂಗಡ ನಾನು ಮಲಗಿಕೊಂಡೆನು. ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ, ನೀನು ಹೋಗಿ ಅವನ ಸಂಗಡ ಮಲಗಿಕೋ. ಏಕೆಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು,” ಎಂದಳು.


ದುಷ್ಟನು ತನ್ನ ಮುಖವನ್ನು ಕಠಿಣ ಮಾಡಿಕೊಳ್ಳುತ್ತಾನೆ; ಯಥಾರ್ಥವಂತನಾದರೋ ತನ್ನ ಮಾರ್ಗಗಳನ್ನು ಯೋಚಿಸುತ್ತಾರೆ.


ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಇವೆ; ನಿಮ್ಮ ಪಾಪಗಳು ಒಳ್ಳೆಯವುಗಳನ್ನು ನಿಮ್ಮಿಂದ ಹಿಂದೆಗೆದಿವೆ.


ಕ್ಷಾಮವನ್ನು ಕುರಿತು ಯೆರೆಮೀಯನಿಗೆ ಉಂಟಾದ ಯೆಹೋವ ದೇವರ ವಾಕ್ಯವು:


ಎರಡು ಅಥವಾ ಮೂರು ಪಟ್ಟಣದವರು ಕುಡಿಯುವ ನೀರಿಗಾಗಿ ಒಂದು ಪಟ್ಟಣದಿಂದ ಇನ್ನೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ, ಅವರ ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು