“ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: “ಯೆಹೋವ ದೇವರು ಹೀಗೆನ್ನುತ್ತಾರೆ, “ ‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, ಇದು ನಿನ್ನ ಹಿತಕ್ಕಾಗಿಯೇ.