ಯೆರೆಮೀಯ 3:5 - ಕನ್ನಡ ಸಮಕಾಲಿಕ ಅನುವಾದ5 ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ? ಇಗೋ, ನೀನು ಹೀಗೆ ಮಾತನಾಡಿದರೇನು? ಆದರೆ ನಿನ್ನಿಂದ ಸಾಧ್ಯವಾಗುವಷ್ಟು ದುಷ್ಕೃತ್ಯಗಳನ್ನು ಮಾಡಿದ್ದಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ‘ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ?’ ಎಂದು ಅಂದುಕೊಳ್ಳುತ್ತಿದ್ದಿ. ಇಗೋ, ನೀನು ಹೀಗೆ ಮಾತನಾಡಿದರೇನು? ಅನೇಕ ದುಷ್ಕೃತ್ಯಗಳನ್ನು ನಡೆಸಿ ಕೃತಾರ್ಥಳಾಗಿರುವೆ.” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿತ್ಯಕ್ಕೂ ಕೋಪ ಮಾಡಬೇಡಿ; ಕೊನೆಯತನಕ ಸಿಟ್ಟುಗೊಳ್ಳಬೇಡಿ’ ಎಂದು ಕೋರುತ್ತಿರುವೆ. ಹೀಗಲ್ಲ ನೀನು ಹೇಳುತ್ತಿರುವೆಯಾದರೂ ನಿನ್ನಿಂದ ಸಾಧ್ಯವಾಗುವಷ್ಟು ದುಷ್ಕೃತ್ಯಗಳನ್ನು ಮಾಡಿ ಕೃತಾರ್ಥಳಾಗಿರುವೆ!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆತನು ನಿತ್ಯವಾಗಿ ಕೋಪಮಾಡುವನೋ? ಕೊನೆಯ ತನಕ ಇಟ್ಟುಕೊಳ್ಳುವನೋ? ಅಂದುಕೊಳ್ಳುತ್ತಿದ್ದೀ. ಇಗೋ, ನೀನು ಹೀಗೆ ಮಾತಾಡಿದರೇನು? ದುಷ್ಕೃತ್ಯಗಳನ್ನು ನಡಿಸಿ ಕೃತಾರ್ಥಳಾಗಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇದಲ್ಲದೆ, ಯೆಹೂದವೇ, ‘ದೇವರು ಯಾವಾಗಲೂ ನನ್ನ ಮೇಲೆ ಕೋಪಿಷ್ಟನಾಗಿರುವುದಿಲ್ಲ. ದೇವರ ಕೋಪವು ಶಾಶ್ವತವಾಗಿರುವುದಿಲ್ಲ’ ಎಂದು ನೀನು ಹೇಳಿದೆಯಲ್ಲಾ. “ಯೆಹೂದ, ನೀನು ಹಾಗೆ ಹೇಳಿದರೂ, ನಿನ್ನಿಂದಾದಷ್ಟು ಕೆಡುಕನ್ನು ಮಾಡುತ್ತಿರುವೆ.” ಅಧ್ಯಾಯವನ್ನು ನೋಡಿ |