Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:10 - ಕನ್ನಡ ಸಮಕಾಲಿಕ ಅನುವಾದ

10 “ ‘ಆದ್ದರಿಂದ ನನ್ನ ಸೇವಕನಾದ ಯಾಕೋಬನೇ ಭಯಪಡಬೇಡ, ಇಸ್ರಾಯೇಲೇ ಹೆದರಬೇಡ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೇ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ. ಯಾಕೋಬನು ತಿರುಗಿಬಂದು ವಿಶ್ರಾಂತಿಯಲ್ಲಿರುವನು. ಹೆದರಿಸುವವನಿಲ್ಲದೆ ಸುರಕ್ಷಿತವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಇಂತೆನ್ನುತ್ತಾನೆ - ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ ಹಾಯಾಗಿಯೂ ಇರುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:10
40 ತಿಳಿವುಗಳ ಹೋಲಿಕೆ  

ಆ ದಿವಸದಲ್ಲಿ, ಅವರಿಗೋಸ್ಕರ ಅಡವಿಯ ಮೃಗಗಳ, ಆಕಾಶದ ಪಕ್ಷಿಗಳ ಮತ್ತು ಭೂಮಿಯ ಕ್ರಿಮಿಗಳ ಸಂಗಡ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ, ಖಡ್ಗವನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದುಹಾಕಿ, ಅವರೆಲ್ಲರೂ ಸುರಕ್ಷಿತರಾಗಿ ಮಲಗುವಂತೆ ಮಾಡುವೆನು.


ನಿಮಗೆ ದೊರೆಯುವೆನು. ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಿಂದಲೂ, ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನು. ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿದೆನೋ, ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.”


ಭಯಪಡಬೇಡ, ಏಕೆಂದರೆ ನಾನೇ ನಿನ್ನೊಂದಿಗೆ ಇದ್ದೇನೆ. ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು. ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.


ನಿನ್ನ ನಿರ್ಮಾಣ ಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು, ನಿನಗೆ ಸಹಾಯ ಮಾಡುವವರಾದ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಸೇವಕನಾದ ಯಾಕೋಬೇ, ನಾನು ಆಯ್ದುಕೊಂಡ ಯೆಶುರೂನೇ, ಭಯಪಡಬೇಡ.


ಸಿಂಹವು ಅಲ್ಲಿ ಇರದು, ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗವು. ಅದು ಅಲ್ಲಿ ಕಾಣುವುದೇ ಇಲ್ಲ. ಆದರೆ ಬಿಡುಗಡೆಯಾದವರೇ ಅಲ್ಲಿ ನಡೆಯುವರು.


“ಚೀಯೋನ್ ಪುತ್ರಿಯೇ, ಭಯಪಡಬೇಡ, ಇಗೋ, ನಿನ್ನ ಅರಸ ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾರೆ,” ಎಂಬ ಮಾತು ನೆರವೇರಿತು.


ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಯೆರೂಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಅಂದರೆ ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.’


ಆದರೆ, ‘ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವರು. ಅವರು ತಮ್ಮ ದೇಶದಲ್ಲಿಯೇ ವಾಸಮಾಡುವರು.”


“ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು.


ಆ ಕಾಲದಲ್ಲಿ ಯೆಹೂದದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತಗಳನ್ನು ಬಿಟ್ಟು, ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”


“ ‘ಆ ದಿವಸದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷಿಬಳ್ಳಿಯ ಕೆಳಗೂ, ಅಂಜೂರದ ಮರದ ಕೆಳಗೂ ಕರೆಯುವಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.”


ನೀವು ಹೇಳುವಿರಿ, “ಗೋಡೆಯಿಲ್ಲದ ಹಳ್ಳಿಗಳಿಲ್ಲದ ದೇಶದ ಮೇಲೆ ನಾನು ಆಕ್ರಮಣ ಮಾಡುತ್ತೇನೆ. ಪೌಳಿಗೋಡೆಗಳಿಲ್ಲದೆ ಇಲ್ಲವೆ ಬಾಗಿಲುಗಳು ಅಗುಳಿಗಳು ಇಲ್ಲದೆ ಅವರು ಶಾಂತಿಯುತ ಮತ್ತು ನಿರ್ಭಯವಾಗಿ ವಾಸಿಸುವವರ ಮೇಲೆ ದಾಳಿಮಾಡುತ್ತೇನೆ.


ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು. ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ. ಅವರು ನಿನಗಿಂತ ನೀತಿವಂತರು. ಹೌದು, ನೀನು ನಿನ್ನ ಸಹೋದರಿಯರನ್ನು ನೀತಿವಂತರೆಂದು ತೋರ್ಪಡಿಸಿದ್ದರಿಂದ ನೀನೇ ನಾಚಿಕೆಪಟ್ಟು, ನಿನ್ನ ನಿಂದೆಯನ್ನು ಹೊತ್ತುಕೋ.


ಏಕೆಂದರೆ, ದಿನಗಳು ಬರುವವು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ನನ್ನ ಜನರಾದ ಇಸ್ರಾಯೇಲ್ ಹಾಗು ಯೆಹೂದದ ಸೆರೆಯವರನ್ನು ತಿರುಗಿ ಬರಮಾಡುತ್ತೇನೆ. ಆಗ ನಾನು ಅವರ ಪಿತೃಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ. ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು,’ ಎಂದು ಯೆಹೋವ ದೇವರು ಹೇಳುತ್ತಾರೆ.”


ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.


“ಹೆದರಬೇಡ, ಏಕೆಂದರೆ ನಿನಗೆ ನಾಚಿಕೆಯಾಗುವುದಿಲ್ಲ. ಗಾಬರಿಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತುಬಿಡುವೆ. ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವುದಿಲ್ಲ.


ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.


ಪೂರ್ವದಿಂದ ಒಂದು ಕ್ರೂರವಾದ ಪಕ್ಷಿಯೂ, ದೂರದೇಶದಿಂದ ನನ್ನ ಆಜ್ಞೆಯನ್ನು ನಡೆಸುವ ಮನುಷ್ಯನೂ ಬರಲಿ, ಎಂದು ಕರೆದಿದ್ದೇನೆ. ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಮಾಡುವೆನು.


ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”


ಆದರೆ ಯೆಹೋವ ದೇವರು ಹೀಗೆನ್ನುತ್ತಾರೆ: “ಶೂರನ ಸೆರೆಯವರು ಅಪಹರಿಸಲಾಗುವರು. ಭೀಕರನ ಕೊಳ್ಳೆ ಕಸಿದುಕೊಳ್ಳಲಾಗುವುದು. ಏಕೆಂದರೆ ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ, ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.


ಯೆಹೋವ ದೇವರು ನಿಮ್ಮ ಸಂಕಟದಿಂದಲೂ, ಕಳವಳದಿಂದಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ


“ಈಗಲಾದರೋ ನನ್ನ ಸೇವಕನಾದ ಯಾಕೋಬೇ ಮತ್ತು ನಾನು ಆರಿಸಿಕೊಂಡ ಇಸ್ರಾಯೇಲೇ, ಕೇಳು:


ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ. ಅವರು ಇನ್ನು ಮೇಲೆ ಭಯಪಡುವುದೇ ಇಲ್ಲ, ಅಂಜುವುದಿಲ್ಲ, ಕೊರತೆ ಪಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.


ಅಯ್ಯೋ, ಈ ದಿನವು ಘೋರವಾದದ್ದು, ಅದಕ್ಕೆ ಎಣೆ ಇಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.’


ಯಹೂದ ದೇಶವೇ, ಭಯಪಡಬೇಡ; ಉಲ್ಲಾಸಿಸಿ, ಸಂತೋಷವಾಗಿರು. ಏಕೆಂದರೆ, ಯೆಹೋವ ದೇವರು ಮಹತ್ತಾದವುಗಳನ್ನು ಮಾಡಿದ್ದಾರೆ.


ಇವರು ದೂರದಿಂದ ಬರುತ್ತಾರೆ. ಇವರು ಉತ್ತರದಿಂದ ಮತ್ತು ಪಶ್ಚಿಮದಿಂದ ಇವರು ಸೀನಿಮ್ ದೇಶದಿಂದ ಬರುತ್ತಿದ್ದಾರೆ.”


“ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು.


ನಾನು ನಿನ್ನನ್ನು ನಂಬಿಗಸ್ತಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು. ಆಗ ನೀನು ಯೆಹೋವ ದೇವರನ್ನು ತಿಳಿದುಕೊಳ್ಳುವೆ.


“ಯೆಹೂದವೇ, ನಿನಗೂ ಸಹ, ತಕ್ಕ ಸುಗ್ಗಿಯು ನೇಮಕವಾಗಿದೆ. “ಸೆರೆಯಾದ ನನ್ನ ಜನರಿಗೆ, ಪುನಃಸ್ಥಾಪನೆಯಾಗುವುದು.


ಈಗ ಏಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಅಧಿಕಾರಿಯು ನಾಶವಾದನೋ? ಹೆರುವವಳಂತೆ ನಿನಗೆ ವೇದನೆ ಬಂದಿರುವುದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು