Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:11 - ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ ನಿನ್ನನ್ನು ರಕ್ಷಿಸುವುದಕ್ಕೆ ನಾನು ನಿನ್ನ ಸಂಗಡ ಇದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಿನ್ನನ್ನು ಎಲ್ಲಿ ಚದರಿಸಿದೆನೋ, ಆ ಎಲ್ಲಾ ಜನಾಂಗಗಳನ್ನು ನಾನು ಸಂಪೂರ್ಣವಾಗಿ ಮುಗಿಸಿಬಿಟ್ಟಾಗ್ಯೂ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ. ಮಿತಿಯಲ್ಲಿ ನಿನ್ನನ್ನು ಸರಿಪಡಿಸುವೆನು. ನಾನು ಶಿಕ್ಷಿಸದೆ ಬಿಡುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿನ್ನನ್ನು ರಕ್ಷಿಸಲು ನಿನ್ನೊಂದಿಗೆ ನಾನಿರುವೆನು ನಿನ್ನನ್ನು ಯಾವ ರಾಷ್ಟ್ರಗಳಿಗೆ ಅಟ್ಟಿ ಚದರಿಸಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನು ನಿರ್ಮೂಲ ಮಾಡೆನು, ಮಿತಿಮೀರಿ ಶಿಕ್ಷಿಸೆನು; ಆದರೆ ಶಿಕ್ಷಿಸದೆ ಮಾತ್ರ ಬಿಡೆನು - ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಾರೂ ಅದನ್ನು ಹೆದರಿಸರು. ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿ ಚದರಿಸಿದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು, ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ವಿುತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:11
29 ತಿಳಿವುಗಳ ಹೋಲಿಕೆ  

ಓ ಯೆಹೋವ ದೇವರೇ, ನನ್ನನ್ನು ಶಿಸ್ತುಪಡಿಸಿರಿ. ಆದರೆ ಮಿತಿಮೀರಿ ದಂಡಿಸಬೇಡಿರಿ, ನಿಮ್ಮ ಕೋಪದಲ್ಲಿ ಅಲ್ಲ. ಇಲ್ಲವಾದರೆ ನಾನು ಇಲ್ಲದೆಹೋಗುವೆನು.


ಅವರು ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಗೆಲ್ಲುವುದಿಲ್ಲ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಇದು ಯೆಹೋವ ದೇವರ ನುಡಿ.


ಏಕೆಂದರೆ ಯೆಹೋವ ದೇವರು ಹೀಗೆ ಹೇಳಿದ್ದಾರೆ: “ದೇಶವೆಲ್ಲಾ ಹಾಳಾಗುವುದು. ಆದರೂ ನಾನು ಅದನ್ನು ಪೂರ್ಣ ನಾಶ ಮಾಡಿಲ್ಲ.


ಅವರಿಗೆ ಭಯಪಡಬೇಡ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಎಂದು ಯೆಹೋವ ದೇವರಾದ ನಾನು ಹೇಳುತ್ತೇನೆ.


ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವುದು, ನಿಮ್ಮ ಯೋಜನೆಯನ್ನು ಪ್ರಸ್ತಾಪಿಸಿರಿ, ಆದರೆ ಅದು ನಿಲ್ಲುವುದಿಲ್ಲ, ಏಕೆಂದರೆ ದೇವರು ನಮ್ಮ ಸಂಗಡ ಇದ್ದಾರೆ.


ಕರ್ತ ಯೇಸು ನಿನ್ನ ಆತ್ಮದೊಂದಿಗೆ ಇರಲಿ. ಕೃಪೆಯು ನಿಮ್ಮೆಲ್ಲರೊಂದಿಗಿರಲಿ.


ನಾನೇ ನಿನ್ನೊಂದಿಗಿದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ನಿನಗೆ ಕೇಡನ್ನುಂಟುಮಾಡುವುದಿಲ್ಲ. ಏಕೆಂದರೆ ನನಗಾಗಿ ಈ ಪಟ್ಟಣದಲ್ಲಿ ಅನೇಕ ಜನರಿದ್ದಾರೆ,” ಎಂದರು.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ಕಂಚಿನ ಗೋಡೆಯಾಗಿ ಮಾಡುತ್ತೇನೆ. ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಜಯಿಸಲಾರರು. ಏಕೆಂದರೆ ನಾನೇ ನಿನ್ನನ್ನು ರಕ್ಷಿಸುವುದಕ್ಕೂ, ನಿನ್ನನ್ನು ತಪ್ಪಿಸುವುದಕ್ಕೂ ನಿನ್ನ ಸಂಗಡ ಇದ್ದೇನೆ, ಎಂದು ಯೆಹೋವ ದೇವರು ಹೇಳುತ್ತಾರೆ.


“ಆದರೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ಅಳಿಸಿಬಿಡುವುದಿಲ್ಲ,” ಎಂದು ಯೆಹೋವ ದೇವರು ಅನ್ನುತ್ತಾರೆ.


ಅವಳ ದ್ರಾಕ್ಷಿತೋಟಗಳ ಮೂಲಕ ಹೋಗಿ ಅವುಗಳನ್ನು ಹಾಳುಮಾಡಿರಿ. ಆದರೆ ಸಂಪೂರ್ಣವಾಗಿ ನಾಶಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ ಏಕೆಂದರೆ ಅವು ಯೆಹೋವ ದೇವರಿಗೆ ಸೇರಿದವುಗಳಲ್ಲ.


ಯೆಹೋವ ದೇವರೇ, ನೀವು ಬೇಸರದಿಂದ ನನ್ನನ್ನು ಗದರಿಸಬೇಡಿರಿ, ರೋಷದಿಂದಲೂ ನನ್ನನ್ನು ದಂಡಿಸಬೇಡಿರಿ.


“ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು.


ನಾನು ಪ್ರವಾದಿಸುತ್ತಿರುವಾಗ, ಬೆನಾಯನ ಮಗನಾದ ಪೆಲಟೀಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು, ಗಟ್ಟಿಯಾಗಿ ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನೀವು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀರೋ?” ಎಂದು ಹೇಳಿದನು.


“ನಾನಾಗಿ ನಾನೇ, ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ಆದರೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ಧಿಕ್ಕರಿಸದೆ, ಅವರನ್ನು ಅಸಹ್ಯಪಡದೆ, ಅವರನ್ನು ಸಂಪೂರ್ಣವಾಗಿ ನಾಶಮಾಡದೆಯೂ, ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು. ಏಕೆಂದರೆ ಅವರ ದೇವರಾಗಿರುವ ಯೆಹೋವ ದೇವರು ನಾನೇ.


ನಿಮ್ಮ ದೇವರಾದ ಯೆಹೋವ ದೇವರು ಕರುಣೆಯುಳ್ಳ ದೇವರು, ಅವರು ನಿಮ್ಮನ್ನು ಕೈಬಿಡುವುದಿಲ್ಲ, ನಾಶಮಾಡುವುದಿಲ್ಲ, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನು ಮರೆಯುವುದಿಲ್ಲ.


ನಾವು ನಾಶವಾಗದೇ ಉಳಿದಿರುವುದು ಯೆಹೋವ ದೇವರ ಮಹಾ ಪ್ರೀತಿಯಿಂದಲೇ. ಏಕೆಂದರೆ ಅವರ ಅನುಕಂಪಗಳು ಮುಗಿಯುವುದಿಲ್ಲ.


“ ‘ಆದರೆ ನಾನು ಕೆಲವರನ್ನು ಉಳಿಸುತ್ತೇನೆ; ಹೇಗೆಂದರೆ, ನೀವು ದೇಶಗಳ ಮತ್ತು ಜನಾಂಗಗಳ ನಡುವೆ ಚದರಿಹೋದಾಗ ನಿಮ್ಮಲ್ಲಿ ಕೆಲವರು ಖಡ್ಗದಿಂದ ತಪ್ಪಿಸಿಕೊಳ್ಳುವಿರಿ.


ನನ್ನ ಕೋಪದ ಉರಿಯನ್ನು ನಾನು ತೀರಿಸುವುದಿಲ್ಲ. ನಾನು ಎಫ್ರಾಯೀಮನ್ನು ತಿರುಗಿ ನಾಶಮಾಡುವುದಿಲ್ಲ. ಏಕೆಂದರೆ ನಾನು ಮನುಷ್ಯನಲ್ಲ, ದೇವರೇ. ನಿನ್ನ ಮಧ್ಯದಲ್ಲಿ ಪರಿಶುದ್ಧನಾಗಿದ್ದೇನೆ. ನಾನು ಅವರ ಪಟ್ಟಣಗಳ ವಿರುದ್ಧ ಬರುವುದಿಲ್ಲ.


ಸಾವಿರ ತಲೆಗಳವರೆಗೂ ಕರುಣೆ ತೋರಿಸುವಾತನು. ದೋಷವನ್ನು, ಅಪರಾಧವನ್ನು, ಪಾಪವನ್ನು ಕ್ಷಮಿಸುವಾತನು ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನು,” ಎಂದು ಪ್ರಕಟಿಸಿಕೊಂಡರು.


“ನೀನು ದಾವೀದನ ಬಳಿಗೆ ಹೋಗಿ, ಅವನ ಸಂಗಡ ಮಾತಾಡಿ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನಗೆ ವಿರೋಧವಾಗಿ ಬರಮಾಡಬೇಕೋ ಅದನ್ನು ಆಯ್ದುಕೋ, ಎಂದು ಯೆಹೋವ ದೇವರು ಹೇಳುತ್ತಾರೆ,’ ಎಂದು ಹೇಳು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು