ಯೆರೆಮೀಯ 30:8 - ಕನ್ನಡ ಸಮಕಾಲಿಕ ಅನುವಾದ8 “ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ, ‘ನಾನು ಆ ದಿನದಲ್ಲಿ ಅವನು ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದು ಬಿಟ್ಟು, ಬಂಧನಗಳನ್ನು ಕಿತ್ತು ಹಾಕುವೆನು; ಇನ್ನು ವಿದೇಶಿಯರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಆ ದಿನದಲ್ಲಿ ಅವರ ಮೇಲೆ ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು, ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 (ಸೇನಾಧೀಶ್ವರರಾದ ಸರ್ವೇಶ್ವರ ಹೇಳುವುದನ್ನು ಕೇಳು: “ಅವರ ಮೇಲೆ ಹೇರಲಾಗಿರುವ ನೊಗವನ್ನು ನಾನು ಆ ದಿನದಂದು ಮುರಿದುಬಿಡುವೆನು. ಕಣ್ಣಿಗಳನ್ನು ಕಿತ್ತುಹಾಕುವೆನು. ಅನ್ಯಕುಲದವರು ಇನ್ನು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ನಾನು ಆ ದಿನದಲ್ಲಿ ಅವನು ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಇದು ಸರ್ವಶಕ್ತನಾದ ಯೆಹೋವನ ನುಡಿ. “ಆ ಸಮಯದಲ್ಲಿ ನಾನು ಇಸ್ರೇಲರ ಮತ್ತು ಯೆಹೂದ್ಯರ ಹೆಗಲ ಮೇಲಿನ ನೊಗವನ್ನು ಮುರಿದುಬಿಡುವೆನು. ನಿಮಗೆ ಕಟ್ಟಿರುವ ಹಗ್ಗಗಳನ್ನು ಕಿತ್ತುಹಾಕುವೆನು. ಪರದೇಶದವರು ಮತ್ತೆಂದಿಗೂ ನನ್ನ ಜನರನ್ನು ದಾಸರನ್ನಾಗಿ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಅಧ್ಯಾಯವನ್ನು ನೋಡಿ |