Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:1 - ಕನ್ನಡ ಸಮಕಾಲಿಕ ಅನುವಾದ

1 “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು,” ಎಂದು ಯೆಹೋವ ದೇವರು ಸಾರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು, “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಕಾಲ ಬರಲಿದೆ, ಆಗ ಇಸ್ರಯೇಲಿನ ಸಕಲ ಗೋತ್ರಗಳಿಗೆ ನಾನೇ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಈ ವಿಷಯಗಳನ್ನು ಹೇಳಿದನು: “ಆ ಸಮಯದಲ್ಲಿ ನಾನು ಇಸ್ರೇಲಿನ ಎಲ್ಲಾ ಗೋತ್ರಗಳ ದೇವರಾಗಿರುವೆನು; ಅವರು ನನ್ನ ಪ್ರಜೆಗಳಾಗಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:1
34 ತಿಳಿವುಗಳ ಹೋಲಿಕೆ  

‘ನೀವು ನನಗೆ ಪ್ರಜೆಯಾಗಿರುವಿರಿ. ನಾನು ನಿಮಗೆ ದೇವರಾಗಿರುವೆನು.’ ”


ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ಯೆಹೋವ ದೇವರು ತಮ್ಮ ಹೃದಯಾಲೋಚನೆಯನ್ನು ನಡಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.


ಆ ಕಾಲದಲ್ಲಿ ಯೆಹೂದದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತಗಳನ್ನು ಬಿಟ್ಟು, ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”


ಯಾವ ಕಾಮುಕರಾಗಲಿ, ಏಸಾವನಂಥ ಪ್ರಾಪಂಚಿಕರಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆಯಿಂದ ನೋಡಿಕೊಳ್ಳಿರಿ. ಅವನು ಒಂದು ತುತ್ತು ಅನ್ನಕ್ಕಾಗಿ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.


ಯೇಸು ಆಕೆಗೆ, “ನನ್ನನ್ನು ಹಿಡಿಯಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಹೋಗಲಿಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವ ತಂದೆಯ ಬಳಿಗೆ ನಾನು ಹೋಗುತ್ತೇನೆ’ ಎಂದು ತಿಳಿಸು,” ಎಂದರು.


ಹೀಗೆ ಇಸ್ರಾಯೇಲನ ಮನೆತನದವರು ಯೆಹೋವ ದೇವರಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವರಾಗಿರುವೆನು ಎಂದು ತಿಳಿಯುವರು.


ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿಸುವಿರಿ; ನೀವು ನನ್ನ ಜನರಾಗಿರುವಿರಿ. ನಾನು ನಿಮ್ಮ ದೇವರಾಗಿರುವೆನು.


ನೀವು ನನ್ನ ಕುರಿಗಳು, ನನ್ನ ಹುಲ್ಲುಗಾವಲಿನ ಕುರಿಗಳು, ಮತ್ತು ನಾನು ನಿಮ್ಮ ದೇವರು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಆಗ ಅವರು ನನ್ನ ನಿಯಮಗಳನ್ನು ಕೈಗೊಂಡು ಜಾಗರೂಕತೆಯಿಂದ ಪಾಲಿಸುವರು. ನನ್ನ ನಿಯಮಗಳನ್ನು ಕೈಗೊಳ್ಳುವರು. ಅವರು ನನ್ನ ಜನರಾಗುವರು, ನಾನು ಅವರ ದೇವರಾಗುವೆನು.


“ಆ ದಿವಸಗಳಲ್ಲಿಯೂ ಆ ಕಾಲದಲ್ಲಿಯೂ ಇಸ್ರಾಯೇಲರು ಬರುವರು; ಅವರೂ, ಯೆಹೂದ್ಯರೂ ಒಟ್ಟಾಗಿ ಕೂಡಿಕೊಳ್ಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಯೆಹೋವ ದೇವರನ್ನು ಹುಡುಕುವರು.


“ ‘ಇಗೋ, ದಿನಗಳು ಬರಲಿವೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ಇಸ್ರಾಯೇಲಿನ ಮತ್ತು ಯೆಹೂದದ ಮನೆಯವರ ಸಂಗಡ ಹೇಳಿದ ಒಳ್ಳೆಯ ವಾಗ್ದಾನವನ್ನು ನೆರವೇರಿಸುವೆನು.


ಯೆಹೂದದ ಸೆರೆಯನ್ನೂ, ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ, ಅವರನ್ನು ಮುಂಚಿನ ಹಾಗೆ ಕಟ್ಟುವೆನು.


ಅವರು ನನ್ನ ಜನರಾಗಿರುವರು. ನಾನು ಅವರಿಗೆ ದೇವರಾಗಿರುವೆನು.


“ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


“ ‘ಆದ್ದರಿಂದ ನನ್ನ ಸೇವಕನಾದ ಯಾಕೋಬನೇ ಭಯಪಡಬೇಡ, ಇಸ್ರಾಯೇಲೇ ಹೆದರಬೇಡ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೇ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ. ಯಾಕೋಬನು ತಿರುಗಿಬಂದು ವಿಶ್ರಾಂತಿಯಲ್ಲಿರುವನು. ಹೆದರಿಸುವವನಿಲ್ಲದೆ ಸುರಕ್ಷಿತವಾಗಿರುವನು.


ಏಕೆಂದರೆ, ದಿನಗಳು ಬರುವವು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ನನ್ನ ಜನರಾದ ಇಸ್ರಾಯೇಲ್ ಹಾಗು ಯೆಹೂದದ ಸೆರೆಯವರನ್ನು ತಿರುಗಿ ಬರಮಾಡುತ್ತೇನೆ. ಆಗ ನಾನು ಅವರ ಪಿತೃಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ. ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು,’ ಎಂದು ಯೆಹೋವ ದೇವರು ಹೇಳುತ್ತಾರೆ.”


ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.


ಹೀಗಿರುವ ಜನರು ಧನ್ಯರು; ಯೆಹೋವ ದೇವರು ಯಾರಿಗೆ ದೇವರಾಗಿದ್ದಾರೋ, ಅವರು ಧನ್ಯರು.


ಏಕೆಂದರೆ, ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವರಾಗಿದ್ದಾರೆ; ಅವರು ಅಂತ್ಯದವರೆಗೂ ನಮ್ಮ ಮಾರ್ಗದರ್ಶಿಯಾಗಿರುವರು.


ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವರಾಗಿರುವೆನು. ನೀವು ನನ್ನ ಜನರಾಗಿರುವಿರಿ.


ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು.


ದೇವರ ಆಲಯಕ್ಕೂ ವಿಗ್ರಹಗಳಿಗೂ ಏನು ಒಪ್ಪಂದ? ನಾವು ಜೀವಿಸುವ ದೇವರ ಆಲಯವಾಗಿದ್ದೇವೆ. ದೇವರು ಹೀಗೆ ಹೇಳಿದ್ದಾರೆ: “ನಾನು ಅವರೊಂದಿಗೆ ವಾಸಿಸುವೆನು, ಅವರ ಮಧ್ಯದಲ್ಲಿ ತಿರುಗಾಡುವೆನು. ನಾನು ಅವರಿಗೆ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.”


ಆ ದಿನದಲ್ಲಿ ಕರಾವಳಿಯ ನಿವಾಸಿಗಳು, ‘ಇಗೋ, ಅಸ್ಸೀರಿಯದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ, ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?’ ಎಂದುಕೊಳ್ಳುವರು.”


“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪವಿತ್ರ ನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಸಕ್ತನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರುವೆನು.


ದೇವರಾದ ಯೆಹೋವ ದೇವರೇ, ಇಸ್ರಾಯೇಲ್ ಜನರನ್ನು ಶಾಶ್ವತವಾಗಿ ನಿಮ್ಮ ಸ್ವಂತ ಜನರಾಗಿ ಇರುವ ಹಾಗೆ ಸ್ಥಿರಪಡಿಸಿದಿರಿ; ಯೆಹೋವ ದೇವರೇ, ನೀವೇ ಅವರಿಗೆ ದೇವರಾದಿರಿ.


ಯೆಹೋವ ದೇವರಾದ ನಾನೇ ಅವುಗಳಿಗೆ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವೆನೆಂದು ಯೆಹೋವ ದೇವರಾದ ನಾನೇ ಅದನ್ನು ಮಾತಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು