Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:14 - ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ಯಾಜಕರನ್ನು ಹೇರಳವಾಗಿ ತೃಪ್ತಿಗೊಳಿಸುವೆನು. ನನ್ನ ಜನರು ನನ್ನ ಒಳ್ಳೆಯತನದಿಂದ ತೃಪ್ತಿಪಡುವರು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯಾಜಕರನ್ನು ಮೃಷ್ಟಾನ್ನಭೋಜನದಿಂದ ತೃಪ್ತಿಗೊಳಿಸುವೆನು; ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯಾಜಕರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸುವೆನು ನನ್ನ ಜನ ಸವಿಯುವರು ಯಥೇಚ್ಛವಾಗಿ ನನ್ನ ವರದಾನಗಳನ್ನು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯಾಜಕರನ್ನು ಮೃಷ್ಟಭೋಜನದಿಂದ ತಂಪುಗೊಳಿಸುವೆನು; ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯಾಜಕರು ತಮಗೆ ಬೇಕಾಗುವದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೈವೇದ್ಯಗಳನ್ನು ಪಡೆಯುವರು. ನಾನು ಅವರಿಗೆ ಕೊಡುವ ಉತ್ತಮ ವಸ್ತುಗಳನ್ನು ಮನದಣಿಯುವ ಹಾಗೆ ಅನುಭವಿಸಿ ನನ್ನ ಜನರು ತೃಪ್ತಿಪಡುವರು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:14
32 ತಿಳಿವುಗಳ ಹೋಲಿಕೆ  

ದಣಿದ ಪ್ರಾಣವನ್ನು ತೃಪ್ತಿಪಡಿಸಿದ್ದೇನೆ. ಕುಂದಿದ ಪ್ರಾಣಗಳನ್ನೆಲ್ಲಾ ತುಂಬಿಸಿದ್ದೇನೆ.”


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿರಿ, ಅವರು ಭೂಮಿಯ ಮೇಲೆ ಆಳುವರು!” ಎಂದು ಹೇಳಿದರು.


ಮತ್ತು ತಿಳುವಳಿಕೆಗೆ ಅಪಾರವಾದ ಕ್ರಿಸ್ತನ ಪ್ರೀತಿಯನ್ನು ನೀವು ತಿಳಿದುಕೊಂಡು ದೇವರ ಸರ್ವಸಂಪೂರ್ಣತೆಯಿಂದ ತುಂಬಿದವರಾಗಲಿ ಎಂದು ಅವರನ್ನು ಬೇಡಿಕೊಳ್ಳುತ್ತೇನೆ.


ನನ್ನ ಪ್ರಿಯಳೇ, ನನ್ನ ವಧುವೇ, ನಾನು ನನ್ನ ತೋಟಕ್ಕೆ ಬಂದಿರುವೆ. ನನ್ನ ರಕ್ತಬೋಳ ಸುಗಂಧಗಳನ್ನೂ ಕೂಡಿಸಿರುವೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ಊಟಮಾಡಿರಿ, ಕುಡಿಯಿರಿ. ಹೌದು ಪ್ರಿಯರೇ, ಸಮೃದ್ಧಿಯಾಗಿ ಪಾನಮಾಡಿರಿ.


ದೇವರು ದಾಹಪಟ್ಟ ಪ್ರಾಣವನ್ನು ತೃಪ್ತಿಪಡಿಸಿ, ಹಸಿದ ಪ್ರಾಣವನ್ನು ಒಳ್ಳೆಯದರಿಂದ ತುಂಬಿಸಿದ್ದಾರೆ.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ದೇವರೂ ತಂದೆಯೂ ಆಗಿರುವವರಿಗೆ ಸ್ತೋತ್ರ, ದೇವರು ಕ್ರಿಸ್ತನಲ್ಲಿ ಪರಲೋಕದ ಎಲ್ಲಾ ಆತ್ಮಿಕ ಆಶೀರ್ವಾದಗಳಿಂದ ನಮ್ಮನ್ನು ಆಶೀರ್ವದಿಸಿದ್ದಾರೆ.


ನೀತಿಗೋಸ್ಕರ ಹಸಿದು ಬಾಯಾರುವವರು ಧನ್ಯರು, ಅವರು ತೃಪ್ತಿಹೊಂದುವರು.


ಆದರೆ ನೀವು ಯೆಹೋವ ದೇವರ ಯಾಜಕರೆಂಬ ಬಿರುದನ್ನು ಹೊಂದುವಿರಿ. ನಮ್ಮ ದೇವರ ಸೇವಕರೆಂದು ನಿಮಗೆ ಹೆಸರಾಗುವುದು, ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ. ಅವರ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.


ಸೇನಾಧೀಶ್ವರ ಯೆಹೋವ ದೇವರು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ ಕೊಬ್ಬಿದ ಔತಣವನ್ನೂ, ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸವನ್ನೂ ಸಿದ್ಧಮಾಡುವರು.


ಇಲ್ಲಿನ ಯಾಜಕರಿಗೆ ರಕ್ಷಣೆಯನ್ನು ಹೊದಿಸುವೆನು; ಚೀಯೋನಿನ ನಂಬಿಗಸ್ತ ಸೇವಕರು ಉತ್ಸಾಹಧ್ವನಿಯಿಂದ ಹಾಡುವರು.


ನಿಮ್ಮ ಯಾಜಕರು ನೀತಿಯೆಂಬ ವಸ್ತ್ರವನ್ನು ಧರಿಸಿಕೊಳ್ಳಲಿ; ನಿಮ್ಮ ಭಕ್ತರು ಉತ್ಸಾಹಧ್ವನಿ ಮಾಡಲಿ.’ ”


ನೀವು ಆಯ್ದುಕೊಂಡು ನಿಮ್ಮ ಬಳಿಗೆ ಬರಮಾಡಿಕೊಳ್ಳುವವನು ಧನ್ಯನು. ಏಕೆಂದರೆ ನಿಮ್ಮ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿಮ್ಮ ಪರಿಶುದ್ಧ ಮಂದಿರವಾದ ನಿಮ್ಮ ಆಲಯದ ಒಳ್ಳೆಯ ಸಂಗತಿಗಳಿಂದ ನಮಗೆ ತೃಪ್ತಿಯಾಗಲಿ.


ಮೃಷ್ಟ ಭೋಜನದಿಂದಲೋ ಎಂಬಂತೆ ನಾನು ನಿಮ್ಮಲ್ಲಿ ಸಂತೃಪ್ತನಾಗಿದ್ದೇನೆ. ಉತ್ಸಾಹದ ತುಟಿಗಳಿಂದ ನನ್ನ ಬಾಯಿಯು ನಿಮ್ಮನ್ನು ಸ್ತುತಿಸುವುದು.


ನಿಮ್ಮ ಆಲಯದ ಸಮೃದ್ಧಿಯಿಂದ ಅವರು ಸಂತೃಪ್ತಿ ಹೊಂದುವರು; ನಿಮ್ಮ ಹರ್ಷ ನದಿಯಿಂದ ಅವರಿಗೆ ಕುಡಿಯಲು ಕೊಡುವಿರಿ.


ಏಕೆಂದರೆ ಪರಿಶುದ್ಧ ಸ್ಥಾನದ ಸಲಕರಣೆಗಳೂ, ಸೇವೆ ಮಾಡುವ ಯಾಜಕರೂ, ದ್ವಾರಪಾಲಕರೂ, ಹಾಡುಗಾರರೂ ಇರುವ ಕೊಟ್ಟಡಿಗಳಿಗೆ ಇಸ್ರಾಯೇಲರೂ, ಲೇವಿಯರ ಮಕ್ಕಳೂ, ಕಾಣಿಕೆಯಾದ ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ತರಬೇಕು. “ನಾವು ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯಮಾಡುವುದಿಲ್ಲ,” ಎಂದು ಬರೆದುಕೊಟ್ಟರು.


“ಈಗ ದೇವರಾದ ಯೆಹೋವ ದೇವರೇ, ಎದ್ದು ನಿಮ್ಮ ವಿಶ್ರಾಂತಿಯ ಸ್ಥಳಕ್ಕೆ ಬನ್ನಿರಿ; ನೀವೂ, ನಿಮ್ಮ ಶಕ್ತಿಯುತ ಮಂಜೂಷವೂ ಬರಲಿ. ಯೆಹೋವ ದೇವರೇ, ನಿಮ್ಮ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಧರಿಸಿಕೊಳ್ಳಲಿ. ನಿಮ್ಮ ಭಕ್ತರು ಒಳ್ಳೆಯದರಲ್ಲಿ ಸಂತೋಷಪಡಲಿ.


ನಾನಾದರೋ ನೀತಿಯಲ್ಲಿ ನಿಮ್ಮ ಮುಖವನ್ನು ನೋಡುವೆನು. ನಾನು ಎಚ್ಚೆತ್ತಾಗ ನಿಮ್ಮ ಹೋಲಿಕೆಯನ್ನೇ ಕಂಡು ತೃಪ್ತನಾಗುವೆನು.


ಬೆಳಿಗ್ಗೆ ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನಮ್ಮನ್ನು ತೃಪ್ತಿಪಡಿಸಿರಿ. ಆಗ ನಮ್ಮ ದಿನಗಳೆಲ್ಲಾ ಉತ್ಸಾಹ ಧ್ವನಿಗೈದು ನಿಮ್ಮಲ್ಲಿ ಸಂತೋಷಪಡುವೆವು.


ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರುಗಿ ಬರಮಾಡುತ್ತೇನೆ; ಅವನು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯೀಮ್ ಬೆಟ್ಟದಲ್ಲಿಯೂ, ಗಿಲ್ಯಾದಿನಲ್ಲಿಯೂ ತೃಪ್ತಿ ಹೊಂದುವುದು.”


ಬೀಜವು ಇನ್ನು ಕಣಜದಲ್ಲಿ ಉಂಟೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಎಣ್ಣೆಮರಗಳು ಇನ್ನೂ ಫಲಿಸಲಿಲ್ಲವಲ್ಲಾ. “ಈ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು,” ಎಂದರು.


ಮೋಶೆಯು ನಫ್ತಾಲಿಯ ವಿಷಯವಾಗಿ ಹೇಳಿದ್ದೇನೆಂದರೆ: “ನಫ್ತಾಲಿಯೇ, ಯೆಹೋವ ದೇವರ ಅನುಗ್ರಹದಿಂದ ತೃಪ್ತನಾದವನೇ, ದೇವರ ಆಶೀರ್ವಾದದಿಂದ ತುಂಬಿದವನೇ; ಸಮುದ್ರವೂ ದಕ್ಷಿಣ ಪ್ರದೇಶವೂ ನಿನಗೆ ಸೊತ್ತಾಗಲಿ.”


ನಾನು ನಿಮ್ಮ ಶಕ್ತಿಯನ್ನೂ ನಿಮ್ಮ ಮಹಿಮೆಯನ್ನೂ ಪರಿಶುದ್ಧ ಸ್ಥಳದಲ್ಲಿ ಕಂಡಿದ್ದೇನೆ. ಹೌದು, ನಾನು ನಿಮ್ಮನ್ನೇ ದೃಷ್ಟಿಸಿದ್ದೇನೆ.


ನನ್ನ ಹಾಸಿಗೆಯ ಮೇಲೆ ನಿಮ್ಮನ್ನು ಸ್ಮರಿಸುವಾಗ ರಾತ್ರಿಯ ಜಾವಗಳಲ್ಲಿ ನಿಮ್ಮನ್ನು ಧ್ಯಾನಿಸುತ್ತಿರುವೆನು.


ನೀತಿಯು ದೇವರ ಮುಂದೆ ನಡೆದುಕೊಂಡು ಹೋಗಿ, ದೇವರಿಗೆ ಮಾರ್ಗ ಸಿದ್ಧಪಡಿಸುವುದು.


ನಾನು ಒಳ್ಳೆಯ ಮೇವಿನಲ್ಲಿ ಅವುಗಳನ್ನು ಮೇಯಿಸುವೆನು. ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಮಂದೆಯು ಇರುವುದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು