Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:15 - ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ಮತ್ತೆ ಹೀಗೆ ಹೇಳುತ್ತಾರೆ: “ರಾಮದಲ್ಲಿ ರೋದನೆಯೂ, ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಿಸುತ್ತಿದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನು ಇಂತೆನ್ನುತ್ತಾನೆ, “ರಾಮಾದಲ್ಲಿ ಬೊಬ್ಬೆಯು ಕೇಳಿಸುತ್ತದೆ, ಗೋಳಾಟವೂ ಮತ್ತು ಘೋರ ರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದದೆ ಇದ್ದಾಳೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರ ಹೀಗೆನ್ನುತ್ತಾರೆ: “ಕೇಳಿಬರುತ್ತಿದೆ ರಾಮಾ ಊರಿನೊಳು ರೋದನ ಗೋಳಾಟ, ಅಘೋರ ಆಕ್ರಂದನ. ಕಳೆದುಕೊಂಡ ಮಕ್ಕಳಿಗಾಗಿ ಗೋಳಾಡುತ್ತಿಹಳು ರಾಖೇಲಳು ಇನ್ನಿಲ್ಲದ ಅವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನು ಇಂತೆನ್ನುತ್ತಾನೆ - ರಾಮದಲ್ಲಿ ಬೊಬ್ಬೆಯು ಕೇಳಿಸುತ್ತದೆ, ಗೋಳಾಟವೂ ಘೋರರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆಹೋದದ್ದಕ್ಕಾಗಿ ಸಮಾಧಾನಹೊಂದಲೊಲ್ಲದೆ ಇದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನು ಹೀಗೆನ್ನುತ್ತಾನೆ: “ರಾಮದಲ್ಲಿ ಅತಿ ದುಃಖದಿಂದ ಗೋಳಾಡುವ ಒಂದು ಧ್ವನಿಯು ಕೇಳಿಬರುತ್ತದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುವಳು. ಅವಳ ಮಕ್ಕಳು ಸತ್ತುಹೋದುದರಿಂದ ರಾಹೇಲಳು ಸಮಾಧಾನ ಹೊಂದುವದಕ್ಕೆ ಒಪ್ಪಲಾರಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:15
18 ತಿಳಿವುಗಳ ಹೋಲಿಕೆ  

ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ಸಂಕೋಲೆಗಳಿಂದ ಕಟ್ಟಿಸಿ, ಬಾಬಿಲೋನಿಗೆ ಒಯ್ಯುವ ಯೆರೂಸಲೇಮಿನ ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತೆಗೆದುಕೊಂಡುಹೋಗಿ, ರಾಮದಿಂದ ಬಿಟ್ಟು ಕಳುಹಿಸಿದ ಮೇಲೆ, ಯೆರೆಮೀಯನಿಗೆ ಯೆಹೋವ ದೇವರಿಂದ ವಾಕ್ಯವು ಬಂದಿತು.


ನನ್ನ ಇಕ್ಕಟ್ಟಿನ ದಿವಸದಲ್ಲಿ ಯೆಹೋವ ದೇವರನ್ನು ಹುಡುಕಿದೆನು. ನಾನು ರಾತ್ರಿಯೆಲ್ಲಾ ಬೇಸರವಿಲ್ಲದೆ ಕೈಚಾಚಿದೆ. ನನ್ನ ಮನಸ್ಸಿಗೆ ಶಾಂತಿ ಇರಲಿಲ್ಲ.


ಸತ್ತು ಹೋದ ರಾಹೇಲಳನ್ನು ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಹೂಳಿಟ್ಟರು.


ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ. ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ; ಅವರು ಇಲ್ಲ. ಇನ್ನು ಮೇಲೆ ನನ್ನ ಡೇರೆಯನ್ನು ಹರಡುವುದಕ್ಕೂ, ನನ್ನ ಪರದೆಗಳನ್ನು ನಿಲ್ಲಿಸುವುದಕ್ಕೂ ಒಬ್ಬನೂ ಇಲ್ಲ.


ಹೀಗಿರಲು ನಾನು ಹೀಗೆ ಹೇಳಿದೆನು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ. ಬಹು ಸಂಕಟದಿಂದ ನಾನು ಅಳುವೆನು. ಏಕೆಂದರೆ ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.”


ಅದಕ್ಕವರು, “ನಿನ್ನ ದಾಸರಾದ ನಾವು ಹನ್ನೆರಡು ಸಹೋದರರು. ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಈಗ ಚಿಕ್ಕವನು ನನ್ನ ತಂದೆಯೊಂದಿಗೆ ಇದ್ದಾನೆ, ಮತ್ತೊಬ್ಬನು ಇಲ್ಲ,” ಎಂದು ಹೇಳಿದರು.


ಅವನ ಪುತ್ರಪುತ್ರಿಯರೆಲ್ಲಾ ಅವನನ್ನು ಆದರಿಸಿದರೂ ಅವನು ಆದರಣೆ ಹೊಂದಲೊಲ್ಲದೆ, “ನನ್ನ ಮಗನಿರುವ ಸಮಾಧಿಗೆ ದುಃಖದಿಂದಲೇ ಇಳಿದು ಹೋಗುವೆನು,” ಎಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.


ನಮ್ಮ ತಂದೆಗಳು ಪಾಪಮಾಡಿ ಇಲ್ಲವಾದರು. ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.


ಆಗ ಅವರ ತಂದೆ ಯಾಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗುವುದರಲ್ಲಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ,” ಎಂದನು.


ಆ ಸುರುಳಿಯನ್ನು ನನ್ನೆದುರಿನಲ್ಲೇ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಪ್ರಲಾಪ, ಶೋಕ ಮತ್ತು ಶಾಪದ ಪದಗಳನ್ನು ಬರೆಯಲಾಗಿತ್ತು.


ಆದರೆ ಅವರು ಅಳಿದೇ ಹೋದರು; ಅವರನ್ನು ಹುಡುಕಿದೆನು; ಆದರೆ ಅವರು ಸಿಕ್ಕಲಿಲ್ಲ.


ನೀವು ನನ್ನ ಅಪರಾಧವನ್ನು ಪರಿಹರಿಸಬಾರದೇ? ನನ್ನ ಪಾಪವನ್ನು ಕ್ಷಮಿಸಬಾರದೇ? ನಾನು ಬೇಗ ಮಣ್ಣಿಗೆ ಸೇರಿಬಿಡುವೆನು; ನೀವು ನನ್ನನ್ನು ಹುಡುಕಿದರೆ ನಾನು ಇರುವುದಿಲ್ಲ.”


ಆದರೆ ಅವನು ರಾಮಕ್ಕೆ ತಿರುಗಿ ಬರುತ್ತಾ ಇದ್ದನು. ಏಕೆಂದರೆ ಅಲ್ಲಿ ಅವನ ಮನೆ ಇತ್ತು, ಅಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು. ಯೆಹೋವ ದೇವರಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಇದಲ್ಲದೆ ಗಿಬ್ಯೋನ್, ರಾಮಾ, ಬೇರೋತ್,


ದೇವರೊಂದಿಗೆ ನಂಬಿಗಸ್ತನಾಗಿ ನಡೆಯುತ್ತಿದ್ದ ಹನೋಕನನ್ನು ದೇವರು ತೆಗೆದುಕೊಂಡು ಹೋದದ್ದರಿಂದ ಅವನು ಕಾಣಲಿಲ್ಲ.


ದೆಬೋರಳು ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿ ಎಫ್ರಾಯೀಮ್ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸುತ್ತಿದ್ದಳು. ಇಸ್ರಾಯೇಲರು ಅವಳ ಬಳಿಗೆ ನ್ಯಾಯಕ್ಕಾಗಿ ಬರುತ್ತಿದ್ದರು.


ಅವರು ಕಣಿವೆಯನ್ನು ದಾಟಿದ್ದಾರೆ; ಗಿಬೆಯದಲ್ಲಿ ಇಳುಕೊಂಡಿದ್ದಾರೆ. ರಾಮಾ ಜನತೆ ಹೆದರುತ್ತಿದೆ; ಸೌಲನ ಗಿಬೆಯದ ಜನತೆ ಓಡಿಹೋಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು