Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:16 - ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರು ಇಂತೆನ್ನುತ್ತಾರೆ: “ನಿನ್ನ ಧ್ವನಿಯು ಗೋಳಾಡದಿರಲಿ; ನಿನ್ನ ಕಣ್ಣು ನೀರು ಸುರಿಸದಿರಲಿ; ನಿನ್ನ ಪ್ರಯಾಸವು ಸಾರ್ಥಕವಾಗುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು, “ನಿನ್ನ ಧ್ವನಿಯು ಗೋಳಾಟದ ಸ್ವರವಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ. ನಿನ್ನ ಪ್ರಯಾಸವು ಸಾರ್ಥಕವಾಗುವುದು; ಇದು ಯೆಹೋವನ ನುಡಿ; ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು” ಎನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ಹೀಗೆನ್ನುತ್ತಾರೆ: “ನಿಲ್ಲಿಸು ನಿನ್ನ ಗೋಳಾಟವನ್ನು ಒರಸು ನಿನ್ನ ಕಣ್ಗಳಿಂದ ನೀರನ್ನು. ನಿನ್ನ ಪ್ರಯಾಸ ಸಾರ್ಥಕವಾಗುವುದು ಶತ್ರುವಿನ ದೇಶದಿಂದ ನಿನ್ನ ಮಕ್ಕಳು ಹಿಂದಿರುಗುವರು. ಸರ್ವೇಶ್ವರನಾದ ನನ್ನ ನುಡಿ ಇದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಇಂತೆನ್ನುತ್ತಾನೆ - ನಿನ್ನ ಧ್ವನಿಯು ಗೋಳಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ; ನಿನ್ನ ಪ್ರಯಾಸವು ಸಾರ್ಥಕವಾಗುವದು; ಇದು ಯೆಹೋವನ ನುಡಿ; ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಯೆಹೋವನು, “ಅಳುವದನ್ನು ನಿಲ್ಲಿಸು. ಕಣ್ಣಿನಲ್ಲಿ ನೀರು ತುಂಬಿಕೊಳ್ಳಬೇಡ. ನಿನ್ನ ಕೆಲಸಕ್ಕಾಗಿ ನಿನಗೆ ಪ್ರತಿಫಲ ಸಿಕ್ಕುವುದು” ಎಂದು ಹೇಳುವನು. ಇದು ಯೆಹೋವನ ನುಡಿ. “ಇಸ್ರೇಲರು ತಮ್ಮ ಶತ್ರುಗಳ ಪ್ರದೇಶದಿಂದ ಹಿಂತಿರುಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:16
27 ತಿಳಿವುಗಳ ಹೋಲಿಕೆ  

ನೀನು ಮಾಡಿದ್ದಕ್ಕೆ ಯೆಹೋವ ದೇವರು ನಿನಗೆ ಬದಲು ಕೊಡಲಿ. ಇಸ್ರಾಯೇಲ್ ದೇವರಾದ ಯೆಹೋವ ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಅವರಿಂದ ದೊಡ್ಡ ಪ್ರತಿಫಲ ಅನುಗ್ರಹಿಸಲಿ,” ಎಂದನು.


ಏಕೆಂದರೆ, ದಿನಗಳು ಬರುವವು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ನನ್ನ ಜನರಾದ ಇಸ್ರಾಯೇಲ್ ಹಾಗು ಯೆಹೂದದ ಸೆರೆಯವರನ್ನು ತಿರುಗಿ ಬರಮಾಡುತ್ತೇನೆ. ಆಗ ನಾನು ಅವರ ಪಿತೃಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ. ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು,’ ಎಂದು ಯೆಹೋವ ದೇವರು ಹೇಳುತ್ತಾರೆ.”


ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವರು, ದೇವರು ಇದ್ದಾರೆಂತಲೂ ತಮ್ಮನ್ನು ಜಾಗ್ರತೆಯಿಂದ ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾರೆಂತಲೂ ನಂಬಬೇಕು.


ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ.


ಆದ್ದರಿಂದ ನೀವು ಬಲಗೊಳ್ಳಿರಿ. ನಿಮ್ಮ ಕೈಗಳು ಬಲಹೀನವಾಗದೆ ಇರಲಿ. ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವುದು,” ಎಂದನು.


ಯೆಹೂದದ ಸೆರೆಯನ್ನೂ, ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ, ಅವರನ್ನು ಮುಂಚಿನ ಹಾಗೆ ಕಟ್ಟುವೆನು.


“ಯೆಹೋವ ದೇವರು ಮತ್ತೆ ಹೀಗೆ ಹೇಳಿದ್ದು, “ ‘ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ. ಅವನ ನಿವಾಸಗಳನ್ನು ಕರುಣಿಸುತ್ತೇನೆ. ಪಟ್ಟಣವು ಅದರ ದಿನ್ನೆಯ ಮೇಲೆ ಕಟ್ಟಲಾಗುವುದು. ಅರಮನೆಯು ತಕ್ಕ ಸ್ಥಳದಲ್ಲಿ ನೆಲೆಯಾಗಿರುವುದು.


ಏಕೆಂದರೆ, ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳಬೇಕಾಗಿಲ್ಲ. ನೀವು ಕೂಗಿ ದುಃಖಿಸಿದ ಶಬ್ದವನ್ನು ದೇವರು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವರು. ದೇವರು ನಿಮ್ಮ ಸ್ವರವನ್ನು ಕೇಳಿದ ಕೂಡಲೇ ಸದುತ್ತರವನ್ನು ದಯಪಾಲಿಸುವರು.


ನೀನು ಹೋಗಿ ನಿನ್ನ ಆಹಾರವನ್ನು ಸಂತೋಷದಿಂದ ತಿಂದು ಹರ್ಷ ಹೃದಯದಿಂದ ನಿನ್ನ ದ್ರಾಕ್ಷಾರಸವನ್ನು ಕುಡಿ. ಏಕೆಂದರೆ ನಿನ್ನ ಕೆಲಸಗಳನ್ನು ದೇವರು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


“ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು.


ಅವರು ಮರಣವನ್ನು ಜಯದಲ್ಲಿ ನುಂಗಿಬಿಡುವರು. ಸಾರ್ವಭೌಮ ಯೆಹೋವ ದೇವರು ಎಲ್ಲಾ ಮುಖಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವರು. ತಮ್ಮ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕುವರು. ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


ಏಕೆಂದರೆ ಯೇಸು ಸತ್ತು ಪುನಃ ಜೀವಂತವಾಗಿ ಎದ್ದರೆಂದು ನಾವು ನಂಬಿದರೆ, ಅದರಂತೆ ಯೇಸುವಿನಲ್ಲಿ ನಿದ್ರೆಹೋದವರನ್ನು ಸಹ ದೇವರು ಅವರೊಡನೆ ಕರೆದುಕೊಂಡು ಬರುವರು.


ನಿಮಗೆ ದೊರೆಯುವೆನು. ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಿಂದಲೂ, ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನು. ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿದೆನೋ, ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.”


ಅವರ ಕೋಪವು ಕ್ಷಣಮಾತ್ರವೇ; ಆದರೆ ಅವರ ದಯೆಯು ಜೀವಮಾನವೆಲ್ಲಾ ಇರುತ್ತದೆ; ರಾತ್ರಿಯಲ್ಲಿ ದುಃಖ ಬಂದಿದ್ದರೂ; ಬೆಳಿಗ್ಗೆ ಆನಂದವು ಬರುವುದು.


ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


ತರುವಾಯ ಅವನು ಮುಖವನ್ನು ತೊಳೆದುಕೊಂಡು ಹೊರಗೆ ಬಂದನು. ಅವನು ಮನಸ್ಸನ್ನು ಬಿಗಿಹಿಡಿದುಕೊಂಡು, “ಊಟಕ್ಕೆ ಬಡಿಸಿರಿ,” ಎಂದನು.


ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿಹಿಡಿದುಕೊಳ್ಳಲು ಆಗಲಿಲ್ಲ. “ಎಲ್ಲರನ್ನೂ ತನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ,” ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪರಿಚಯಿಸಿಕೊಳ್ಳಲು ಹೋದಾಗ, ಅಲ್ಲಿ ಬೇರೆ ಯಾರೂ ಇರಲಿಲ್ಲ.


ಕಣ್ಣೀರಿನಿಂದ ಬಿತ್ತುವವರು, ಆನಂದ ಗೀತದೊಡನೆ ಕೊಯ್ಯುವರು;


ಇಗೋ, ಸಾರ್ವಭೌಮ ಯೆಹೋವ ದೇವರು ಬಲದೊಂದಿಗೆ ಬರುವರು. ಅವರ ತೋಳು ತಮಗೋಸ್ಕರ ಆಳುವುದು. ಅವರ ಬಹುಮಾನವು ಅವರ ಸಂಗಡ ಅವರ ಪ್ರತಿಫಲವು ಅವರ ಮುಂದೆಯೂ ಇದೆ.


‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ಇಸ್ರಾಯೇಲರನ್ನು ಅವರು ಹೋಗಿರುವ ಕಡೆಯಿಂದ ಒಂದುಗೂಡಿಸಿ ಅವರ ಸ್ವಂತ ದೇಶಕ್ಕೆ ತರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು