Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:19 - ಕನ್ನಡ ಸಮಕಾಲಿಕ ಅನುವಾದ

19 ನಾನು ನಿಮ್ಮಿಂದ ದೂರವಾದ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳುವಳಿಕೆ ಹೊಂದಿದ ಮೇಲೆಯೇ ದುಃಖದಿಂದ ನನ್ನ ಎದೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ನಾನು ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳಿವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ತಿರುಗಿಸಲ್ಪಟ್ಟ ಮೇಲೆಯೆ ನಾನು ಪಶ್ಚಾತ್ತಾಪ ಪಟ್ಟೆ ತಿಳುವಳಿಕೆ ಹೊಂದಿದ ಮೇಲೆಯೆ ಕೆನ್ನೆಗೆ ಹಾಕಿಕೊಂಡೆ ನನ್ನ ಯೌವನ ನಡತೆ ನನಗೆ ಅವಮಾನದ ಹೊರೆ ಈ ಕಾರಣ ಲಜ್ಜೆಗೊಂಡೆ. ಹೌದು, ನಾಚಿಕೆಯಿಂದ ತಲೆತಗ್ಗಿಸಿದೆ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪಪಟ್ಟೆನು; ತಿಳುವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು; ನನ್ನ ಯೌವನದ ಅವಮಾನವು ನನ್ನ ಮೇಲೆ ಹೊತ್ತ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನೇ, ನಾನು ನಿನಗೆ ದೂರವಾಗಿ ಅಲೆದಾಡಿದೆನು. ಆದರೆ ನಾನು ಮಾಡಿದ ದುಷ್ಕೃತ್ಯಗಳ ಬಗ್ಗೆ ತಿಳಿದುಕೊಂಡೆನು. ಆದ್ದರಿಂದ ನಾನು ನನ್ನ ಮನಸ್ಸನ್ನೂ ಜೀವನವನ್ನೂ ಪರಿವರ್ತಿಸಿಕೊಂಡೆ. ತಾರುಣ್ಯಾವಸ್ಥೆಯಲ್ಲಿ ನಾನು ಮಾಡಿದ ಮೂರ್ಖತನಕ್ಕಾಗಿ ಲಜ್ಜೆಗೊಂಡೆನು; ನಾಚಿಕೆಪಟ್ಟೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:19
30 ತಿಳಿವುಗಳ ಹೋಲಿಕೆ  

ಆಮೇಲೆ ನೀವು ನಿಮ್ಮ ನಿಮ್ಮ ದುರ್ಮಾರ್ಗಗಳನ್ನೂ ದುರಾಚಾರಗಳನ್ನೂ ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.


ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ. ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ. ಏಕೆಂದರೆ ನಾವೂ, ನಮ್ಮ ಪೂರ್ವಜರೂ ನಮ್ಮ ಚಿಕ್ಕತನದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ. ನಮ್ಮ ಯೆಹೋವ ದೇವರ ಸ್ವರಕ್ಕೆ ಕಿವಿಗೊಡಲಿಲ್ಲ.”


ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು. ಏಕೆಂದರೆ ಅದು ನನ್ನ ಜನರ ಮೇಲೆಯೂ, ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಇರುವುದು. ಖಡ್ಗದ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವುದು. ಆದ್ದರಿಂದ ನಿನ್ನ ಎದೆಯನ್ನು ಬಡಿದುಕೋ.


“ಆದರೆ ಸುಂಕದವನು ದೂರದಲ್ಲಿ ನಿಂತು, ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಧೈರ್ಯಗೊಳ್ಳದೇ ತನ್ನ ಎದೆಯನ್ನು ಬಡಿದುಕೊಳ್ಳುತ್ತಾ, ‘ದೇವರೇ ಪಾಪಿಯಾದವನು ನಾನೇ ನನ್ನನ್ನು ಕರುಣಿಸು,’ ಎಂದು ಪ್ರಾರ್ಥಿಸಿದನು.


ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡು, ನೀವೂ, ನಿಮ್ಮ ಮಕ್ಕಳೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಮಾತುಗಳಿಗೆ, ನೀವು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ದೇವರಿಗೆ ವಿಧೇಯರಾಗಬೇಕು.


“ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು.


ಯೆಹೋವ ದೇವರೇ, ನನ್ನ ಯೌವನದ ಪಾಪಗಳನ್ನೂ, ನನ್ನ ತಿರುಗಿ ಬೀಳುವಿಕೆಗಳನ್ನೂ ಜ್ಞಾಪಕ ಮಾಡಿಕೊಳ್ಳಬೇಡಿರಿ. ನೀವು ಒಳ್ಳೆಯವರಾಗಿರುವುದರಿಂದ ನಿಮ್ಮ ಪ್ರೀತಿಯ ಪ್ರಕಾರ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ.


ಪ್ರಾರ್ಥಿಸಿದೆನು: “ನನ್ನ ದೇವರೇ, ನಾನು ನನ್ನ ಮುಖವನ್ನು ನಿಮ್ಮ ಮುಂದೆ ಎತ್ತಲಾರದೆ, ಲಜ್ಜೆಯಿಂದ ನಾಚಿಕೆಪಡುತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಮೀರಿ ಬೆಳೆದಿವೆ. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.


ವಿರೋಧಿಸುವವರ ಮನಸ್ಸನ್ನು ತಾಳ್ಮೆಯಿಂದ ತಿದ್ದುವವನಾಗಿದ್ದರೆ, ದೇವರು ಒಂದು ವೇಳೆ ಅಂಥವರಿಗೆ ಸತ್ಯದ ತಿಳುವಳಿಕೆಗೆ ನಡೆಸುವ ಪಶ್ಚಾತ್ತಾಪವನ್ನು ಕೊಡುವ ನಿರೀಕ್ಷೆ ಇರುವುದು.


ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!


ಆದರೆ ನಿನ್ನ ಆಸ್ತಿಯನ್ನು ವೇಶ್ಯೆಯರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದಾಗ, ವಿಶೇಷ ಔತಣವನ್ನೇ ಮಾಡಿಸಿದ್ದೀಯಲ್ಲಾ!’ ಎಂದನು.


ನಿಮಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮವನ್ನು ನಿಮ್ಮೊಳಗೆ ಇಡುವೆನು. ನಿಮ್ಮೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.


ಅವರು ಈಜಿಪ್ಟಿನಲ್ಲಿ ವೇಶ್ಯೆ ಆದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲಾದವು; ಅವುಗಳ ತೊಟ್ಟುಗಳು ನಸುಕಲಾದವು.


ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


“ಏಕೆಂದರೆ ಇಸ್ರಾಯೇಲರೂ, ಯೆಹೂದದ ಮಕ್ಕಳೂ ತಮ್ಮ ಚಿಕ್ಕಂದಿನಿಂದ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾತ್ರ ಮಾಡಿದ್ದಾರೆ. ಇಸ್ರಾಯೇಲರೂ ತಮ್ಮ ಕೈಕೆಲಸಗಳಿಂದ ನನಗೆ ಕೋಪೋದ್ರೇಕವನ್ನೂ ಎಬ್ಬಿಸಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ.


ನಿನ್ನ ಏಳಿಗೆಗೆ ನಿನ್ನ ಸಂಗಡ ಮಾತನಾಡಿದೆನು. ಆದರೆ ನೀನು, ‘ನಾನು ಕೇಳುವುದಿಲ್ಲ,’ ಎಂದೆ. ನನ್ನ ಮಾತಿಗೆ ಕಿವಿಗೊಡದೆ ಇರುವುದೇ ನಿನ್ನ ಯೌವನದ ರೀತಿಯಾಗಿದೆ.


“ಹೆದರಬೇಡ, ಏಕೆಂದರೆ ನಿನಗೆ ನಾಚಿಕೆಯಾಗುವುದಿಲ್ಲ. ಗಾಬರಿಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತುಬಿಡುವೆ. ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವುದಿಲ್ಲ.


ಅವನ ಎಲುಬುಗಳು ಯೌವನದ ಶಕ್ತಿಯಿಂದ ತುಂಬಿತ್ತು, ಅದು ಅವನ ಸಂಗಡ ಧೂಳಿನಲ್ಲಿ ಮಲಗುವುದು.


ಏಕೆಂದರೆ ನನಗೆ ವಿರೋಧವಾಗಿ ಕಹಿಯಾದ ತೀರ್ಪನ್ನು ನೀವು ಬರೆದಿರುವಿರಿ; ನನ್ನ ಯೌವನದ ಪಾಪಗಳನ್ನು ನನ್ನ ಮೇಲೆ ಹೊರಿಸಿರುವಿರಿ.


ನಾನು ಬಾಧೆಪಡುವುದಕ್ಕಿಂತ ಮುಂಚೆ ದಾರಿತಪ್ಪಿಹೋಗುತ್ತಿದ್ದೆನು, ಆದರೆ ಈಗ ನಿಮ್ಮ ವಾಕ್ಯವನ್ನು ಪಾಲಿಸುತ್ತಿದ್ದೇನೆ.


ನಾನೂ ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು, ಎಂದು ಯೆಹೋವ ದೇವರಾದ ನಾನು ಹೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು