ಯೆರೆಮೀಯ 31:2 - ಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ಅವರಿಗೆ ವಿಶ್ರಾಂತಿ ಕೊಡುವುದಕ್ಕೆ ಹೋಗಲಾಗಿ, ಖಡ್ಗಕ್ಕೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಮರುಭೂಮಿಯಲ್ಲಿ ದಯೆ ದೊರಕಿತು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಕರ್ತನಾದ ಯೆಹೋವನು, “ಖಡ್ಗಕ್ಕೆ ಹತರಾಗದೆ ಉಳಿದ ಜನಕ್ಕೆ ಅರಣ್ಯದಲ್ಲಿ ದಯೆ ದೊರೆಯುವುದು; ಇಸ್ರಾಯೇಲ್ ವಿಶ್ರಾಂತಿಯನ್ನು ಹುಡುಕುವುದಕ್ಕೆ ಹೋಗುವಾಗ ಯೆಹೋವನು ದೂರದಿಂದ ಬಂದು ಅದಕ್ಕೆ ದರ್ಶನಕೊಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇದು ಸರ್ವೇಶ್ವರನಾದ ನನ್ನ ನುಡಿ. ಅಳಿದುಳಿದಾ ಜನಕ್ಕೆ ಅರಣ್ಯದಲ್ಲಿ ದಯೆ ದೊರೆಯಿತು. ಇಸ್ರಯೇಲ್ ಶಾಂತಿಯನ್ನು ಅರಸುತ್ತಾ ಹೋಗುವಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇದು ಯೆಹೋವನ ನುಡಿ - ಹತಶೇಷವಾದ ಜನಕ್ಕೆ ಅರಣ್ಯದಲ್ಲಿ ದಯೆದೊರೆಯುವದು; ಇಸ್ರಾಯೇಲು ವಿಶ್ರಾಂತಿಯನ್ನು ಹುಡುಕುವದಕ್ಕೆ ಹೋಗುವಾಗ ಯೆಹೋವನು ದೂರದಿಂದ ಬಂದು ಅದಕ್ಕೆ ದರ್ಶನಕೊಟ್ಟು ಹೀಗನ್ನುವನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನು ಹೀಗೆನ್ನುತ್ತಾನೆ: “ಶತ್ರುವಿನ ಖಡ್ಗಕ್ಕೆ ಕೆಲವು ಜನರು ಆಹುತಿಯಾಗಿಲ್ಲ. ಅವರಿಗೆ ಮರುಭೂಮಿಯಲ್ಲಿ ನೆಮ್ಮದಿ ದೊರೆಯುವುದು. ಇಸ್ರೇಲು ವಿಶ್ರಾಂತಿಯನ್ನು ಬಯಸಿ ಬರುವುದು.” ಅಧ್ಯಾಯವನ್ನು ನೋಡಿ |
“ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: “ಯೆಹೋವ ದೇವರು ಹೀಗೆನ್ನುತ್ತಾರೆ, “ ‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, ಇದು ನಿನ್ನ ಹಿತಕ್ಕಾಗಿಯೇ.