ಯೆರೆಮೀಯ 31:21 - ಕನ್ನಡ ಸಮಕಾಲಿಕ ಅನುವಾದ21 “ನಿನಗೋಸ್ಕರ ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ ಹೆದ್ದಾರಿಯ ಕಡೆಗೆ ನೀನು ಹೋದ ದಾರಿಗೂ ನಿನ್ನ ಹೃದಯವನ್ನು ಇಟ್ಟುಕೋ. ಇಸ್ರಾಯೇಲಿನ ಕನ್ಯಾ ಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ. ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ದಾರಿತೋರುವ ಕಂಬಗಳನ್ನೂ ಕೈಮರಗಳನ್ನೂ ನಿಲ್ಲಿಸಿಕೊ ನೀನು ಯಾವ ಮಾರ್ಗವಾಗಿ ಹೋದೆಯೋ ಆ ಮಾರ್ಗವನ್ನು ನೆನಸಿಕೊ. ಇಸ್ರಯೇಲೆಂಬ ಯುವತಿಯೇ ಹಿಂದಿರುಗು ಈ ನಿನ್ನ ನಗರಕ್ಕೆ ಹಿಂದಿರುಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ದಾರಿದೋರುವ ಕಂಬಗಳನ್ನೂ ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ; ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಇಸ್ರೇಲರೇ, ದಾರಿತೋರುವ ಕಂಬಗಳನ್ನೂ ಕೈಮರಗಳನ್ನೂ ನೆಡಿರಿ. ನೀವು ಪ್ರಯಾಣ ಮಾಡುತ್ತಿರುವ ರಸ್ತೆಯನ್ನು ಗಮನಿಸಿರಿ. ನಿಮ್ಮ ಊರುಗಳಿಗೆ ಹಿಂತಿರುಗಿ ಬನ್ನಿ. ನನ್ನ ವಧುವಾದ ಇಸ್ರೇಲೇ, ಮನೆಗೆ ಬಾ. ಅಧ್ಯಾಯವನ್ನು ನೋಡಿ |