Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:22 - ಕನ್ನಡ ಸಮಕಾಲಿಕ ಅನುವಾದ

22 ವಿಶ್ವಾಸದ್ರೋಹಿ ಇಸ್ರಾಯೇಲ್ ಮಗಳೇ ಎಷ್ಟರವರೆಗೆ ಅಡ್ಡಾಡುವೆ? ಏಕೆಂದರೆ ಯೆಹೋವ ದೇವರು ಭೂಮಿಯಲ್ಲಿ ಹೊಸದನ್ನು ಸೃಷ್ಟಿಸುತ್ತಾರೆ. ಹೆಂಗಸು ಗಂಡಸನ್ನು ಕಾಪಾಡುವಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ? ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ನಂಬಿಕೆ ದ್ರೋಹಿಯಾದ ಕುವರಿಯೇ, ಎಂದಿನವರೆಗೆ ಅತ್ತಿತ್ತ ಅಲೆದಾಡುತ್ತಿರುವೆ? ಸರ್ವೇಶ್ವರನಾದ ನಾನು ಅಪೂರ್ವವಾದುದನ್ನು ಉಂಟಾಗಿಸಿರುವೆ: ಇಗೋ, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ? ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಹೆಂಗಸು ಗಂಡಸನ್ನು ಕಾಪಾಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀನು ಅಪನಂಬಿಗಸ್ತಳಾದ ಮಗಳಾಗಿದ್ದೆ. ಆದರೆ ನೀನು ಬದಲಾವಣೆ ಹೊಂದಿದೆ. ಈಗ ನೀನು ಮನೆಗೆ ಹಿಂದಿರುಗಿ ಬರಲು ಎಷ್ಟು ಹೊತ್ತು ಕಾದುಕೊಂಡಿರುವೆ. “ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಮಾಡಿದ್ದಾನೆ. ಹೆಂಗಸು ಗಂಡಸನ್ನು ಕಾಪಾಡುವಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:22
27 ತಿಳಿವುಗಳ ಹೋಲಿಕೆ  

ಹಿಂದಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ, ನಿನ್ನ ಬೊಕ್ಕಸಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯವಾಗಿ ಏಕೆ ಹೆಚ್ಚಳ ಪಡುತ್ತೀ?


ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ಆದರೆ ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ, ಕಲ್ಪನೆಯ ಪ್ರಕಾರವೂ ನಡೆದುಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.


ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು,” ಎಂದು ಹೇಳಿದನು.


ನನ್ನ ಜನರು ನನ್ನ ಕಡೆಯಿಂದ ಹಿಂಜಾರಬೇಕೆಂದು ತೀರ್ಮಾನಿಸಿದ್ದಾರೆ. ಅವರು ನನ್ನನ್ನು ಸರ್ವೋನ್ನತ ದೇವರು ಎಂದು ಕರೆದರೂ ನಾನು ಅವರನ್ನು ಯಾವುದೇ ರೀತಿಯಲ್ಲಿ ಉನ್ನತೀಕರಿಸುವುದಿಲ್ಲ.


ಸಮಾರ್ಯವೇ, ನಿನ್ನ ಬಸವ ವಿಗ್ರಹವನ್ನು ಬಿಸಾಡಿಬಿಡು. ನನ್ನ ಕೋಪವು ಅವರ ಮೇಲೆ ಉರಿಯುತ್ತದೆ. ಅವರು ಎಷ್ಟು ಕಾಲ ಶುದ್ಧತೆಗೆ ಅಸಮರ್ಥರಾಗಿರುತ್ತಾರೆ?


ಹಠಮಾರಿ ಹಸುವಿನ ಹಾಗೆ ಇಸ್ರಾಯೇಲು ಹಟಮಾರಿಯಾಗಿದೆ. ಈಗ ಯೆಹೋವ ದೇವರು ಹುಲ್ಲುಗಾವಲಲ್ಲಿರುವ ಕುರಿಮರಿಯ ಹಾಗೆ ಅವರನ್ನು ಹೇಗೆ ಮೇಯಿಸುವರು?


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು.


“ಭ್ರಷ್ಟರಾದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಭ್ರಷ್ಟತನವನ್ನು ನಾನು ಸ್ವಸ್ಥ ಮಾಡುವೆನು.” “ಇಗೋ, ನಿಮ್ಮ ಬಳಿಗೆ ಬರುತ್ತೇವೆ, ಏಕೆಂದರೆ ನೀವು ಯೆಹೋವ ದೇವರು, ನಮ್ಮ ದೇವರಾಗಿದ್ದೀರಿ.


ಯೆಹೋವ ದೇವರು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೀನು ನೋಡಿದೆಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೆಯೂ ಹೋಗಿ, ಅಲ್ಲಿ ವೇಶ್ಯೆತನ ಮಾಡಿದ್ದಾಳೆ.


ನಿನ್ನ ಮಾರ್ಗವನ್ನು ಬೇರೆ ಮಾಡಿಕೊಳ್ಳುವಷ್ಟು ಏಕೆ ಬಹಳವಾಗಿ ತಿರುಗಾಡುತ್ತೀ? ಅಸ್ಸೀರಿಯದ ನಿಮಿತ್ತ ನಾಚಿಕೆ ಪಟ್ಟ ಹಾಗೆ ಈಜಿಪ್ಟಿನ ನಿಮಿತ್ತವೂ ನಾಚಿಕೆಪಡುವೆ.


“ಇದಲ್ಲದೆ ನೀನು, ‘ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ,’ ಎಂದು ಹೇಳುವುದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು. ನೀನು ಮಾಡಿದ್ದನ್ನು ತಿಳಿದುಕೋ. ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ.


ಈಗ ಶೀಹೋರಿನ ನೀರು ಕುಡಿಯುವುದಕ್ಕಾಗಿ ಈಜಿಪ್ಟಿನ ದಾರಿಯಲ್ಲಿ ನಿನಗೇನು ಕೆಲಸ? ಯೂಫ್ರೇಟೀಸ್ ನದಿಯ ನೀರು ಕುಡಿಯುವುದಕ್ಕಾಗಿ ಅಸ್ಸೀರಿಯದ ದಾರಿಯಲ್ಲಿ ನಿನಗೇನು ಕೆಲಸ?


ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.


ಆದರೆ ಯೆಹೋವ ದೇವರು ಹೊಸದನ್ನು ಮಾಡಿ, ಭೂಮಿಯು ತನ್ನ ಬಾಯಿತೆರೆದು, ಇವರನ್ನೂ, ಇವರಿಗಿರುವ ಎಲ್ಲದನ್ನೂ ನುಂಗಿ, ಇವರು ತೀವ್ರವಾಗಿ ಪಾತಾಳಕ್ಕೆ ಇಳಿಯುವಂತೆ ಮಾಡಿ, ಈ ಮನುಷ್ಯರು ಯೆಹೋವ ದೇವರನ್ನು ರೇಗಿಸಿದ್ದಾರೆಂದು ನೀವು ತಿಳಿದುಕೊಳ್ಳುವಿರಿ,” ಎಂದನು.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


“ಆದರೆ ಅವರು ಕೇಳುವುದಕ್ಕೆ ನಿರಾಕರಿಸಿದರು. ಅವರು ಬೆನ್ನನ್ನು ತಿರುಗಿಸಿ, ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದ ಮಾಡಿಕೊಂಡರು.


“ನಾನು ಅವರ ಹಿಂಜಾರುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಏಕೆಂದರೆ ನನ್ನ ಕೋಪವು ಅವರ ಕಡೆಯಿಂದ ತಿರುಗಿಕೊಂಡಿದೆ.


ಯೆಹೋವ ದೇವರೇ, ನಮ್ಮ ಅಕ್ರಮಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಟ್ಟರೂ, ನೀನೇ ನಿನ್ನ ಹೆಸರಿಗೋಸ್ಕರ ಕಾರ್ಯ ಸಾಧಿಸು. ಏಕೆಂದರೆ, ನಮ್ಮ ಹಿಂಜಾರುವಿಕೆಗಳು ಅನೇಕವಾಗಿವೆ; ನಿಮಗೆ ವಿರೋಧವಾಗಿ ಪಾಪಮಾಡಿದ್ದೇವೆ.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ನಿನ್ನ ಕೀಳಾದ ವೇಶ್ಯತನವನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯ ಕಾರ್ಯಗಳನ್ನು ಕಂಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ಇನ್ನೆಷ್ಟು ಕಾಲ ನೀನು ಅಶುದ್ಧಳಾಗಿರುವೆ?”


“ಓ ಭ್ರಷ್ಟರಾದ ಜನರೇ, ತಿರುಗಿಕೊಳ್ಳಿರಿ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ಏಕೆಂದರೆ, ನಾನು ನಿಮಗೆ ಪತಿ. ಪಟ್ಟಣದೊಳಗಿಂದ ಒಬ್ಬನನ್ನು, ಗೋತ್ರದೊಳಗಿಂದ ಇಬ್ಬರನ್ನು ತೆಗೆದುಕೊಂಡು, ಚೀಯೋನಿಗೆ ಕರೆದುಕೊಂಡು ಬರುವೆನು.


ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು.


ಆಗ ನಾನು ಕಂಡದ್ದೇನೆಂದರೆ, ಭ್ರಷ್ಟಳಾದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು, ತ್ಯಾಗ ಪತ್ರವನ್ನು ಕೊಟ್ಟಿದ್ದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಭಯಪಡದೆ, ತಾನು ಕೂಡ ಹೋಗಿ ವೇಶ್ಯೆತನ ಮಾಡಿದಳು.


“ಒಬ್ಬನು ತನ್ನ ಹೆಂಡತಿಯನ್ನು ವಿಚ್ಛೇದನಮಾಡಿದರೆ, ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನ ಜೊತೆ ಇದ್ದರೆ, ಅವನು ಅವಳನ್ನು ಮತ್ತೆ ಸೇರಿಸಿಕೊಳ್ಳುವನೋ? ಸೇರಿಸಿಕೊಂಡರೆ, ಆ ದೇಶವು ಸಂಪೂರ್ಣವಾಗಿ ಅಪವಿತ್ರವಾಗುವುದಿಲ್ಲವೋ? ಆದರೆ ನೀನು ನಿನ್ನ ಅನೇಕ ಪ್ರೇಮಿಗಳ ಸಂಗಡ ವೇಶ್ಯೆಯಂತೆ ಇದ್ದೀ. ನೀನು ಈಗ ನನ್ನ ಬಳಿಗೆ ಹಿಂತಿರುಗುವೆಯಾ?” ಎಂದು ಯೆಹೋವ ದೇವರು ಹೇಳುತ್ತಾರೆ.


ಈಗಲೂ ನನಗೆ, ‘ನನ್ನ ತಂದೆಯೇ, ನನ್ನ ಯೌವನದ ಸ್ನೇಹಿತನು ನೀನೇ,’ ಎಂದು ನೀನು ಕರೆಯುತ್ತಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು