Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:23 - ಕನ್ನಡ ಸಮಕಾಲಿಕ ಅನುವಾದ

23 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರ ಸೆರೆಯನ್ನು ತಿರುಗಿ ತರುವಾಗ, ‘ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,’ ಎಂದು ಇನ್ನೂ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ’ ಎಂದು ಮತ್ತೆ ಮಾತನಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿ ಹೀಗಿದೆ: “ನಾನು ನನ್ನ ಜನರ ಗುಲಾಮಗಿರಿಯನ್ನು ನೀಗಿಸುವೆನು. ಆಗ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ’ ಎಂಬ ಮಾತು ಜುದೇಯ ನಾಡಿನಲ್ಲೂ ಅದರ ನಗರಗಳಲ್ಲೂ ಮತ್ತೆ ಕೇಳಿಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅವರ ಪಟ್ಟಣಗಳಲ್ಲಿಯೂ - ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಎಂದು ಮತ್ತೆ ಮಾತಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇಸ್ರೇಲಿನ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆನ್ನುತ್ತಾನೆ: “ನಾನು ಯೆಹೂದದ ಜನರಿಗಾಗಿ ಮತ್ತೆ ಒಳ್ಳೆಯದನ್ನು ಮಾಡುವೆನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದವರನ್ನು ನಾನು ಮತ್ತೆ ಕರೆದುತರುವೆನು. ಆಗ ಅವರು ಯೆಹೂದನಾಡಿನಲ್ಲಿಯೂ ಅದರ ನಗರಗಳಲ್ಲಿಯೂ ಹೀಗೆನ್ನುವರು: ‘ನ್ಯಾಯವಾದ ನಿವಾಸವೇ, ಪವಿತ್ರ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:23
23 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಹೇಳುತ್ತಾರೆ: “ಚೀಯೋನಿಗೆ ನಾನು ತಿರುಗಿಕೊಂಡು, ನಾನು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು. ಆಗ ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೇನಾಧೀಶ್ವರ ಯೆಹೋವ ದೇವರ ಪರ್ವತವು ಪರಿಶುದ್ಧ ಪರ್ವತವೆಂದೂ ಕರೆಯಿಸಿಕೊಳ್ಳುವುದು.”


ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ಎದುರಾಳಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ; ಏಕೆಂದರೆ ನೀತಿಯ ನಿವಾಸವಾದ ಯೆಹೋವ ದೇವರಿಗೆ, ಹೌದು, ಅವರ ಪೂರ್ವಜರ ನಿರೀಕ್ಷೆಯಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ,’ ಎಂದುಕೊಂಡರು.


ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ, ನಿನ್ನ ಆಲೋಚನಾಪರರನ್ನು ಪ್ರಾರಂಭದಲ್ಲಿದ್ದ ಹಾಗೆಯೂ ತಿರುಗಿ ಒದಗಿಸಿ ಕೊಡುವೆನು. ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ, ನಂಬಿಗಸ್ತಿಕೆಯ ಪಟ್ಟಣವೆಂದೂ ಎನಿಸಿಕೊಳ್ಳುವೆ.”


ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು, ಆಗ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.


ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವುದು. ಅದು ಪರಿಶುದ್ಧವಾಗಿರುವುದು. ಯಾಕೋಬನ ಮನೆತನದವರು ತಮ್ಮ ಸೊತ್ತನ್ನು ಮರಳಿ ಅನುಭವಿಸುವರು.


“ಯೆಹೋವ ದೇವರು ಮತ್ತೆ ಹೀಗೆ ಹೇಳಿದ್ದು, “ ‘ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ. ಅವನ ನಿವಾಸಗಳನ್ನು ಕರುಣಿಸುತ್ತೇನೆ. ಪಟ್ಟಣವು ಅದರ ದಿನ್ನೆಯ ಮೇಲೆ ಕಟ್ಟಲಾಗುವುದು. ಅರಮನೆಯು ತಕ್ಕ ಸ್ಥಳದಲ್ಲಿ ನೆಲೆಯಾಗಿರುವುದು.


ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.


ನಂಬಿಗಸ್ತಿಕೆಯ ಪಟ್ಟಣವು ವ್ಯಭಿಚಾರದ ಪಟ್ಟಣವಾಗಿದೆಯಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆಯಾಗಿತ್ತು. ಆದರೆ ಈಗ ಕೊಲೆಗಾರರಿಂದ ತುಂಬಿದೆ.


ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ ಯೆಹೋವ ದೇವರು, ಚೀಯೋನಿನೊಳಗಿಂದ ನಿಮ್ಮನ್ನು ಆಶೀರ್ವದಿಸಲಿ.


“ಯೆಹೋವ ದೇವರ ಆಶೀರ್ವಾದವು ನಿಮ್ಮ ಮೇಲೆ ಇರಲಿ; ಯೆಹೋವ ದೇವರು ಹೆಸರಿನಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ,” ಎಂದು ಹಾದುಹೋಗುವವರು ಹೇಳದಿರಲಿ.


ಯೆಹೋವ ದೇವರು ನಿನ್ನನ್ನು ಚೀಯೋನಿನೊಳಗಿಂದ ನಿನ್ನ ಜೀವಮಾನವೆಲ್ಲಾ ಆಶೀರ್ವದಿಸಲಿ; ನೀನು ಯೆರೂಸಲೇಮಿನ ಸಮೃದ್ಧಿಯನ್ನು ಕಾಣುವಿ.


ನಿಮ್ಮ ಜನರನ್ನು ರಕ್ಷಿಸಿರಿ; ನಿಮ್ಮ ವಾರಸುದಾರರನ್ನು ಆಶೀರ್ವದಿಸಿರಿ; ನೀವು ಅವರ ಕುರುಬ ಆಗಿದ್ದು; ಅವರನ್ನು ಯಾವಾಗಲೂ ಮುನ್ನಡೆಸಿರಿ.


ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ, “ಯೆಹೋವ ದೇವರು ನಿಮ್ಮ ಸಂಗಡ ಇರಲಿ,” ಎಂದನು. ಅದಕ್ಕೆ ಅವರು, “ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,” ಎಂದರು.


ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು, ಪತ್ರಗಳನ್ನು ಬರೆದು ಮುದ್ರೆಹಾಕಿ, ಸಾಕ್ಷಿಗಳನ್ನು ಇಟ್ಟುಕೊಳ್ಳುವರು. ಏಕೆಂದರೆ ನಾನು ಅವರ ಸೆರೆಯಿಂದ ಹಿಂದಿರುಗುವಂತೆ ಮಾಡುವೆನು,” ಎಂದು ಯೆಹೋವ ದೇವರು ನುಡಿಯುತ್ತಾರೆ.


ನನ್ನ ಪರಿಶುದ್ಧ ಪರ್ವತದಲ್ಲಿ ಯಾರೂ ಕೇಡುಮಾಡುವುದಿಲ್ಲ, ಯಾರೂ ಹಾಳುಮಾಡುವುದಿಲ್ಲ. ಏಕೆಂದರೆ ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.


ನ್ಯಾಯವು ಮರುಭೂಮಿಯಲ್ಲಿ ನೆಲೆಗೊಳ್ಳುವುದು, ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವುದು.


ಯೆಹೋವ ದೇವರು ಉನ್ನತೋನ್ನತನಾಗಿದ್ದಾನೆ. ಏಕೆಂದರೆ ಆತನು ಮೇಲಿನ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿ ಮತ್ತು ನ್ಯಾಯಗಳಿಂದ ತುಂಬಿಸಿದ್ದಾನೆ.


ನಿಮಗೆ ದೊರೆಯುವೆನು. ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಿಂದಲೂ, ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನು. ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿದೆನೋ, ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು