Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:27 - ಕನ್ನಡ ಸಮಕಾಲಿಕ ಅನುವಾದ

27 ಯೆಹೋವ ದೇವರು ಹೇಳುವುದೇನೆಂದರೆ, “ದಿನಗಳು ಬರುತ್ತವೆ. ಆಗ ನಾನು ಇಸ್ರಾಯೇಲ್ ಮತ್ತು ಯೆಹೂದ ರಾಜ್ಯಗಳಲ್ಲಿ ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಕರ್ತನಾದ ಯೆಹೋವನು, “ಇಗೋ, ನಾನು ಇಸ್ರಾಯೇಲ್ ಮತ್ತು ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ, ಪಶುಗಳನ್ನೂ ಬಿತ್ತುವ ದಿನಗಳು ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ಸರ್ವೇಶ್ವರನಾದ ನಾನು ನಿಮಗೆ ಹೇಳುವುದೇನೆಂದರೆ: ಇಗೋ, ಇಸ್ರಯೇಲ್ ಮತ್ತು ಜುದೇಯ ಕ್ಷೇತ್ರಗಳಲ್ಲಿ ನಾನು ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವ ದಿನಗಳು ಬರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಇಸ್ರಾಯೇಲ್ ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ ಪಶುಗಳನ್ನೂ ಬಿತ್ತುವ ದಿನಗಳು ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೋವನು ಹೀಗೆ ನುಡಿದನು: “ಇಸ್ರೇಲ್ ಮತ್ತು ಯೆಹೂದ ವಂಶಗಳು ಬೆಳೆಯುವದಕ್ಕೆ ನಾನು ಸಹಾಯ ಮಾಡುವ ದಿನಗಳು ಬರುತ್ತಿವೆ. ಸಸಿಗಳನ್ನು ನೆಟ್ಟ ಮೇಲೆ ಅವುಗಳನ್ನು ನೋಡಿಕೊಳ್ಳುವ ಹಾಗೆ ಅವರ ಮಕ್ಕಳು ಮತ್ತು ಅವರ ಪಶುಗಳು ಬೆಳೆಯುವದಕ್ಕೂ ನಾನು ಸಹಾಯ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:27
8 ತಿಳಿವುಗಳ ಹೋಲಿಕೆ  

ನಾನು ದೇಶದಲ್ಲಿ ಆಕೆಯನ್ನು ನನಗಾಗಿ ಬಿತ್ತಿಕೊಳ್ಳುವೆನು. ‘ನನ್ನ ಪ್ರಿಯರಲ್ಲ’ ಎಂದು ಕರೆದವರಿಗೆ, ನಾನು ನನ್ನ ಪ್ರೀತಿಯನ್ನು ತೋರಿಸುವೆನು. ನಾನು, ‘ನೀವು ನನ್ನ ಜನರಲ್ಲ’ ಎಂದು ಹೇಳಿದವರನ್ನು, ‘ನೀವು ನನ್ನ ಜನರು,’ ಎಂದು ಹೇಳುವೆನು. ಅವರು, ‘ನೀವು ನಮ್ಮ ದೇವರು’ ” ಎಂದು ಹೇಳುವರು.


ನಾನು ನಿಮ್ಮ ಮೇಲೆ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡುವೆನು. ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವುವು. ನಾನು ನಿಮ್ಮನ್ನು ಮೊದಲಿನ ಸ್ಥಿತಿಗಿಂತ ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.


ನಾನು ನಿಮ್ಮವನಾಗಿದ್ದೇನೆ ನಾನು ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನಿಮ್ಮಲ್ಲಿ ಉಳುಮೆ ಮಾಡಿ ಬಿತ್ತಲಾಗುತ್ತದೆ.


ನಾನು ಅವರನ್ನು ಜನಗಳಲ್ಲಿ ಚದುರಿಸಿದರೂ ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.


ಅವುಗಳೊಳಗಿಂದ ಕೃತಜ್ಞತಾಸ್ತುತಿಯೂ, ಹರ್ಷಧ್ವನಿಯೂ ಹೊರಡುವುದು. ಅವರನ್ನು ಹೆಚ್ಚು ಮಾಡುವೆನು. ಅವರು ಕೊಂಚವಾಗಿರರು, ಅವರನ್ನು ಘನಪಡಿಸುವೆನು. ಮತ್ತು ಅವರು ತಿರಸ್ಕಾರಕ್ಕೆ ಒಳಗಾಗುವುದಿಲ್ಲ.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ನಿಮ್ಮ ಎಲ್ಲಾ ಕೈಕೆಲಸದಲ್ಲಿಯೂ, ನಿಮ್ಮ ಗರ್ಭದ ಫಲದಲ್ಲಿಯೂ, ನಿಮ್ಮ ಪಶುಗಳ ಫಲದಲ್ಲಿಯೂ, ನಿಮ್ಮ ಭೂಮಿಯ ಫಲದಲ್ಲಿಯೂ ಅತ್ಯಂತ ಅಭಿವೃದ್ಧಿಯನ್ನು ಮಾಡುವರು. ಯೆಹೋವ ದೇವರು ನಿಮ್ಮ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿಮ್ಮಲ್ಲಿಯೂ ಸಂತೋಷಿಸುವರು.


ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದವರನ್ನೂ ಎಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿಸುತ್ತೇನೆ. ಪಟ್ಟಣಗಳು ಜನಭರಿತವಾಗುವುವು. ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವುವು.


ಆದರೂ ದೇವರು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ, ಅವನ ಕುಟುಂಬಗಳನ್ನು ಮಂದೆಯ ಹಾಗೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು