Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:28 - ಕನ್ನಡ ಸಮಕಾಲಿಕ ಅನುವಾದ

28 ನಾನು ಅವರನ್ನು ಕೀಳಲು, ಕೆಡವಲು, ಅಳಿಸಲು ಹಾಳುಮಾಡಲು, ಎಚ್ಚರವಹಿಸಿದ ಹಾಗೆಯೇ ಇನ್ನು ಮುಂದೆ ಅವರನ್ನು ಕಟ್ಟುವುದಕ್ಕೂ, ನೆಡುವುದಕ್ಕೂ ಅವರ ವಿಷಯವಾಗಿ ಎಚ್ಚರವಹಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವರನ್ನು ಕೀಳಲು ಕೆಡವಲು, ಅಳಿಸಲು ಹಾಳುಮಾಡಲು, ಈ ಮೊದಲು ಎಚ್ಚರವಹಿಸಿದ ಹಾಗೆಯೆ ಇನ್ನು ಮುಂದೆ ಅವರನ್ನು ಕಟ್ಟಲು ಹಾಗು ನೆಡಲು ಎಚ್ಚರವಹಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಪೂರ್ವಕಾಲದಲ್ಲಿ, ಇಸ್ರೇಲ್ ಮತ್ತು ಯೆಹೂದಗಳ ಮೇಲೆ ನಾನು ಗಮನವಿಟ್ಟಿದ್ದೆನು. ಆದರೆ ನಾನು ಅವರನ್ನು ತೆಗೆದುಹಾಕುವ ಸಮಯಕ್ಕಾಗಿ ಕಾದುಕೊಂಡಿದ್ದೆ. ನಾನು ಅವರನ್ನು ಕೆಡವಿದೆ; ಅವರನ್ನು ಹಾಳುಮಾಡಿದೆ. ಅವರಿಗೆ ಅನೇಕ ಕಷ್ಟಗಳನ್ನು ಕೊಟ್ಟೆ. ಆದರೆ ಈಗ ಅವರನ್ನು ಅಭಿವೃದ್ಧಿಪಡಿಸುವದಕ್ಕಾಗಿ ಅವರನ್ನು ಬಲಶಾಲಿಗಳನ್ನಾಗಿ ಮಾಡಲು ಅವರ ಕಡೆಗೆ ಗಮನಹರಿಸುತ್ತೇನೆ” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:28
24 ತಿಳಿವುಗಳ ಹೋಲಿಕೆ  

ಏಕೆಂದರೆ ನಾನು ಅವರ ಒಳ್ಳೆಯದರ ಮೇಲೆ ನನ್ನ ದೃಷ್ಟಿಯನ್ನು ಇಟ್ಟುಕೊಳ್ಳುತ್ತೇನೆ. ಈ ದೇಶಕ್ಕೆ ಅವರನ್ನು ತಿರುಗಿ ಬರಮಾಡುವೆನು. ಕೆಡವಿಹಾಕದೆ ಅವರನ್ನು ಕಟ್ಟುವೆನು. ಕೀಳದೆ ಅವರನ್ನು ನೆಡುವೆನು.


ನೋಡು, ಈ ಹೊತ್ತು ನೀನು ಕೀಳುವುದಕ್ಕೂ, ಕೆಳಗೆ ಹಾಕಿಬಿಡುವುದಕ್ಕೂ, ನಾಶಮಾಡುವುದಕ್ಕೂ, ಕೆಡವಿ ಹಾಕುವುದಕ್ಕೂ, ಕಟ್ಟುವುದಕ್ಕೂ, ನೆಡುವುದಕ್ಕೂ ನಾನು ನಿನ್ನನ್ನು ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ನಿನ್ನನ್ನು ನೇಮಿಸಿದ್ದೇನೆ,” ಎಂದರು.


ಆದರೆ ನಿಮಗೆ ಹೇಳಲು ಯೆಹೋವ ದೇವರು ನನಗೆ ಹೇಳಿದ್ದಾರೆ. ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ. ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.


ನಾನು ಒಳ್ಳೆಯದಕ್ಕಾಗಿ ಅಲ್ಲ; ಕೆಟ್ಟದ್ದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು. ಈಜಿಪ್ಟ್ ದೇಶದಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವವರೆಗೆ ಖಡ್ಗದಿಂದಲೂ ಬರದಿಂದಲೂ ನಾಶವಾಗುವರು.


“ ‘ಇದಾದನಂತರ ನಾನು ಮರಳಿ ಬರುವೆನು. ಬಿದ್ದುಹೋದ ದಾವೀದನ ಗುಡಾರವನ್ನು ಕಟ್ಟುವೆನು. ಪಾಳುಬಿದ್ದದ್ದನ್ನು ಜೀರ್ಣೋದ್ಧಾರ ಮಾಡಿ, ಅದನ್ನು ಪುನರುಜ್ಜೀವನಗೊಳಿಸುವೆನು.


ನಮ್ಮ ದೇವರಾದ ಯೆಹೋವ ದೇವರು ತಾವು ಮಾಡುವ ಎಲ್ಲದರಲ್ಲಿಯೂ ನೀತಿವಂತರಾಗಿದ್ದುದರಿಂದ, ವಿನಾಶವನ್ನು ನಮ್ಮ ಮೇಲೆ ಬರಮಾಡಲು ಯೆಹೋವ ದೇವರು ಹಿಂಜರಿಯಲಿಲ್ಲ. ಆದರೂ ನಾವು ಅವರಿಗೆ ವಿಧೇಯರಾಗಲೇ ಇಲ್ಲ.


ಹೌದು, ಅವರಿಗೆ ಒಳ್ಳೆಯದನ್ನು ಮಾಡುವುದಕ್ಕೆ ಅವರೊಂದಿಗೆ ಆನಂದಪಡುವೆನು. ನಿಜವಾಗಿ ನನ್ನ ಪೂರ್ಣಹೃದಯದಿಂದಲೂ, ನನ್ನ ಪೂರ್ಣಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.


ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.


“ಆದ್ದರಿಂದ ನೀನು ಅರಿತು ತಿಳಿಯಬೇಕಾದದ್ದು ಏನೆಂದರೆ, ಯೆರೂಸಲೇಮನ್ನು ತಿರುಗಿ ಕಟ್ಟಲು ಆಜ್ಞೆ ಹೊರಡುವ ದಿನದಿಂದ, ಆಳುವ ಒಬ್ಬ ಅಭಿಷಿಕ್ತರು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಿದ ಮೇಲೆ, ಅರವತ್ತೆರಡು ವಾರಗಳು ಇರುವುದು. ಕಷ್ಟಕಾಲದಲ್ಲಿ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಅದು ಕಟ್ಟಲಾಗುವುದು.


ಯೆಹೋವ ದೇವರು ಯೆರೂಸಲೇಮನ್ನು ಕಟ್ಟುತ್ತಾರೆ, ಚದರಿಹೋದ ಇಸ್ರಾಯೇಲನ್ನು ಕೂಡಿಸುತ್ತಾರೆ.


ದೇವರು ಚೀಯೋನನ್ನು ರಕ್ಷಿಸುವರು. ದೇವರು ಯೆಹೂದದ ಪಟ್ಟಣಗಳನ್ನು ಕಟ್ಟುವರು. ಜನರು ಅಲ್ಲಿ ವಾಸಮಾಡಿ, ಅದನ್ನು ಸ್ವಾಧೀನಮಾಡಿಕೊಳ್ಳುವರು.


ಏಕೆಂದರೆ ಯೆಹೋವ ದೇವರು ಚೀಯೋನನ್ನು ಮರಳಿ ಕಟ್ಟುವರು; ಅವರು ತಮ್ಮ ಮಹಿಮೆಯಲ್ಲಿ ಕಾಣಿಸಿಕೊಳ್ಳುವರು.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ನಿಮ್ಮ ಎಲ್ಲಾ ಕೈಕೆಲಸದಲ್ಲಿಯೂ, ನಿಮ್ಮ ಗರ್ಭದ ಫಲದಲ್ಲಿಯೂ, ನಿಮ್ಮ ಪಶುಗಳ ಫಲದಲ್ಲಿಯೂ, ನಿಮ್ಮ ಭೂಮಿಯ ಫಲದಲ್ಲಿಯೂ ಅತ್ಯಂತ ಅಭಿವೃದ್ಧಿಯನ್ನು ಮಾಡುವರು. ಯೆಹೋವ ದೇವರು ನಿಮ್ಮ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿಮ್ಮಲ್ಲಿಯೂ ಸಂತೋಷಿಸುವರು.


“ಕಳೆದುಹೋದ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಒಳ್ಳೆಯದು; ಆಗ ದೇವರು ನನ್ನನ್ನು ಕಾಪಾಡುತ್ತಿದ್ದರಲ್ಲವೆ?


ಆಗ ಯೆಹೋವ ದೇವರು ನನಗೆ, “ನೀನು ಚೆನ್ನಾಗಿ ನೋಡಿದ್ದೀ. ಏಕೆಂದರೆ ನನ್ನ ವಾಕ್ಯವನ್ನು ನೆರವೇರಿಸಲು ಎಚ್ಚರಗೊಂಡಿದ್ದೇನೆಂದು, ತಿಳಿದುಕೊ” ಎಂದರು.


“ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ, ಹಾಗೆಯೇ ನಾನು ವಾಗ್ದಾನ ಮಾಡಿದ ಸಮೃದ್ಧಿಯನ್ನೆಲ್ಲಾ ಅವರ ಮೇಲೆ ಬರಮಾಡುವೆನು.


‘ನೀವು ಇನ್ನು ಈ ದೇಶದಲ್ಲಿ ವಾಸಮಾಡಿದರೆ, ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತು ಹಾಕದೆ ನೆಡುವೆನು. ಏಕೆಂದರೆ ನಾನು ನಿಮಗೆ ಮಾಡಿರುವ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಡುತ್ತೇನೆ.


ಆದರೆ ಆ ಲತೆಯನ್ನು ರೋಷದಲ್ಲಿ ಕಿತ್ತು ನೆಲಕ್ಕೆ ಬಿಸಾಡಿದರು. ಪೂರ್ವದಿಕ್ಕಿನ ಗಾಳಿಯು ಅದರ ಫಲವನ್ನು ಒಣಗಿಸಿತು. ಅದರ ಬಲವಾದ ಬಳ್ಳಿಗಳು ಮುರಿದು ಒಣಗಿಹೋದವು. ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.


ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದವರನ್ನೂ ಎಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿಸುತ್ತೇನೆ. ಪಟ್ಟಣಗಳು ಜನಭರಿತವಾಗುವುವು. ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವುವು.


ನನ್ನ ಜನರಾದ ಇಸ್ರಾಯೇಲರನ್ನು ಸೆರೆಯಿಂದ ತಿರುಗಿ ಬರಮಾಡುವೆನು. “ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು. ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಕರುಣಿಸದೆ, ವಿನಾಶವನ್ನು ಬರಮಾಡಲು ಯೋಚಿಸಿದೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


“ಆದರೆ ಈಗ ನಾನು ತಿರುಗಿ ಈ ದಿವಸಗಳಲ್ಲಿ ಪುನಃ ಯೆರೂಸಲೇಮಿಗೂ, ಯೆಹೂದದ ಮನೆತನದವರಿಗೂ ಒಳ್ಳೆಯದನ್ನು ಮಾಡಲು ಯೋಚಿಸಿದ್ದೇನೆ. ನೀವು ಭಯಪಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು