ಯೆರೆಮೀಯ 31:32 - ಕನ್ನಡ ಸಮಕಾಲಿಕ ಅನುವಾದ32 ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು ಈಜಿಪ್ಟ್ ದೇಶದಿಂದ ಕರೆದು ತಂದಾಗ, ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ, ಆ ನನ್ನ ಒಡಂಬಡಿಕೆಯನ್ನು ಅವರು ಮೀರಿ ನಡೆದರು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರತಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಈ ಒಡಂಬಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಬಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಬಡಿಕೆಯನ್ನು ಮುರಿದರು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿ |
“ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: “ಯೆಹೋವ ದೇವರು ಹೀಗೆನ್ನುತ್ತಾರೆ, “ ‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, ಇದು ನಿನ್ನ ಹಿತಕ್ಕಾಗಿಯೇ.