Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:38 - ಕನ್ನಡ ಸಮಕಾಲಿಕ ಅನುವಾದ

38 ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ಹನನೇಲನ ಬುರುಜು ಮೊದಲುಗೊಂಡು ಮೂಲೆಯ ಬಾಗಿಲಿನವರೆಗೂ ಪಟ್ಟಣವು ಕರ್ತರಿಗೆ ಕಟ್ಟಲಾಗುವ ದಿನಗಳು ಬರಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಯೆಹೋವನು, “ಇಗೋ, ಮುಂದಿನ ಕಾಲದಲ್ಲಿ ಈ ಪಟ್ಟಣವು ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಯೆಹೋವನ ಘನತೆಗಾಗಿ ವಿಸ್ತರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ಕಾಲ ಬರಲಿದೆ. ಆಗ ಸರ್ವೇಶ್ವರನಾದ ನನ್ನ ಮಹಿಮೆಗಾಗಿ ಈ ನಗರವನ್ನು ಹನನೇಲನ ಗೋಪುರದಿಂದ ಮೂಲೆ ಬಾಗಿಲವರೆಗೆ ವಿಸ್ತರಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಯೆಹೋವನು ಇಂತೆನ್ನುತ್ತಾನೆ - ಇಗೋ, ಮುಂದಿನ ಕಾಲದಲ್ಲಿ ಈ ಪಟ್ಟಣವು ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಯೆಹೋವನ ಘನತೆಗಾಗಿ ವಿಸ್ತರಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಇದು ಯೆಹೋವನ ನುಡಿ: “ಯೆಹೋವನಿಗಾಗಿ ಜೆರುಸಲೇಮ್ ನಗರವನ್ನು ಮತ್ತೆ ಕಟ್ಟುವ ಕಾಲ ಬರುತ್ತಿದೆ. ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಇಡೀ ಪಟ್ಟಣವನ್ನು ಮತ್ತೊಮ್ಮೆ ಕಟ್ಟಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:38
17 ತಿಳಿವುಗಳ ಹೋಲಿಕೆ  

ಗೆಬ ಮೊದಲುಗೊಂಡು ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೂ ದೇಶವೆಲ್ಲಾ ಅರಾಬಾದ ಹಾಗೆ ಮಾರ್ಪಡುವುದು. ಯೆರೂಸಲೇಮ್ ತನ್ನ ಸ್ಥಳದಲ್ಲಿ ಬೆನ್ಯಾಮೀನನ ಬಾಗಿಲು ಮೊದಲುಗೊಂಡು, ಮೊದಲನೆಯ ಬಾಗಿಲಿನ ಸ್ಥಳದವರೆಗೂ, ಮೂಲೆ ಬಾಗಿಲಿನವರೆಗೂ, ಹನನೇಲನ ಗೋಪುರ ಮೊದಲುಗೊಂಡು ಅರಸನ ದ್ರಾಕ್ಷಿ ಆಲೆಗಳವರೆಗೂ ಎತ್ತರದಲ್ಲಿ ನಿವಾಸವಾಗುವುದು.


ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ ಷೆಮೆಷ್ ಬಳಿಯಲ್ಲಿ ವಶಪಡಿಸಿಕೊಂಡನು. ಅನಂತರ ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು, ಎಫ್ರಾಯೀಮಿನ ಬಾಗಿಲು ಮೊದಲುಗೊಂಡು ಮೂಲೆಯ ಬಾಗಿಲವರೆಗೂ, ಆರುನೂರು ಅಡಿ ಉದ್ದದ ಯೆರೂಸಲೇಮಿನ ಗೋಡೆಯನ್ನು ಕೆಡವಿಬಿಟ್ಟನು.


“ಯೆಹೋವ ದೇವರು ಮತ್ತೆ ಹೀಗೆ ಹೇಳಿದ್ದು, “ ‘ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ. ಅವನ ನಿವಾಸಗಳನ್ನು ಕರುಣಿಸುತ್ತೇನೆ. ಪಟ್ಟಣವು ಅದರ ದಿನ್ನೆಯ ಮೇಲೆ ಕಟ್ಟಲಾಗುವುದು. ಅರಮನೆಯು ತಕ್ಕ ಸ್ಥಳದಲ್ಲಿ ನೆಲೆಯಾಗಿರುವುದು.


ಯೆಹೋವ ದೇವರು ಹೇಳುವುದೇನೆಂದರೆ, “ದಿನಗಳು ಬರುತ್ತವೆ. ಆಗ ನಾನು ಇಸ್ರಾಯೇಲ್ ಮತ್ತು ಯೆಹೂದ ರಾಜ್ಯಗಳಲ್ಲಿ ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವೆನು.


ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಿಲ ಬಳಿಯಲ್ಲಿಯೂ, ತಗ್ಗಿನ ಬಾಗಿಲ ಬಳಿಯಲ್ಲಿಯೂ, ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು.


“ಆದ್ದರಿಂದ ನೀನು ಅರಿತು ತಿಳಿಯಬೇಕಾದದ್ದು ಏನೆಂದರೆ, ಯೆರೂಸಲೇಮನ್ನು ತಿರುಗಿ ಕಟ್ಟಲು ಆಜ್ಞೆ ಹೊರಡುವ ದಿನದಿಂದ, ಆಳುವ ಒಬ್ಬ ಅಭಿಷಿಕ್ತರು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಿದ ಮೇಲೆ, ಅರವತ್ತೆರಡು ವಾರಗಳು ಇರುವುದು. ಕಷ್ಟಕಾಲದಲ್ಲಿ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಅದು ಕಟ್ಟಲಾಗುವುದು.


“ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.


ಕೋರೆಷನ ವಿಷಯವಾಗಿ ಹೀಗೆ ಹೇಳುವೆನು, ‘ನನ್ನ ಕುರುಬನು, ನನ್ನ ಇಷ್ಟವನ್ನೆಲ್ಲಾ ಪೂರೈಸುವವನು, ಯೆರೂಸಲೇಮಿಗೆ, “ನೀನು ಪುನಃ ನಿರ್ಮಾಣವಾಗುವೆ,” ದೇವಾಲಯಕ್ಕೆ, “ನಿನಗೆ ಅಸ್ತಿವಾರವು ಹಾಕಲಾಗುವುದು,” ಎಂದು ಅನ್ನುವವನೂ ನಾನೇ.’


ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ? ಯೆರೂಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಯೆರೂಸಲೇಮಿನ ಗೋಡೆಯನ್ನು ಪುನಃ ಕಟ್ಟೋಣ. ಹೀಗೆ ಮಾಡಿದರೆ, ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ.


ಆಗ ಮಹಾಯಾಜಕನಾದ ಎಲ್ಯಾಷೀಬನೂ, ಅವನ ಕುಟುಂಬದ ಯಾಜಕರೂ ಕುರಿ ಬಾಗಿಲನ್ನು ಕಟ್ಟಿ, ಅದನ್ನು ಪ್ರತಿಷ್ಠಿಸಿ, ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಶತ ಗೋಪುರದವರೆಗೆ ಗೋಡೆ ಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು.


ಇಸ್ರಾಯೇಲಿನ ಕನ್ಯೆಯೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು. ನೀನು ಪುನಃ ನಿರ್ಮಿತವಾಗುವೆ. ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷ ಪಡುವವರ ನಾಟ್ಯದಲ್ಲಿ ಹೊರಡುವೆ.


ಯೆಹೂದದ ಸೆರೆಯನ್ನೂ, ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ, ಅವರನ್ನು ಮುಂಚಿನ ಹಾಗೆ ಕಟ್ಟುವೆನು.


ಅವರು ದಿಕ್ಕಿಲ್ಲದವರ ಪ್ರಾರ್ಥನೆಗೆ ಕಿವಿಗೊಡುತ್ತಾರೆ; ದೇವರು ಅವರ ಪ್ರಾರ್ಥನೆಯನ್ನು ತಿರಸ್ಕರಿಸುವುದಿಲ್ಲ.


“ಎಲೈ, ನೀವು ಹೊರಗೆ ಬಂದು ಉತ್ತರ ದೇಶದಿಂದ ಓಡಿಹೋಗಿರಿ. ಏಕೆಂದರೆ ಆಕಾಶದ ನಾಲ್ಕು ದಿಕ್ಕುಗಳಿಗೆ ನಿಮ್ಮನ್ನು ಚದರಿಸಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು