Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:7 - ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಯಾಕೋಬನ ವಿಷಯ ಸಂತೋಷದಿಂದ ಹಾಡಿ, ಮೂಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ. ಸಾರಿರಿ. ಸ್ತುತಿಸಿರಿ. ‘ಯೆಹೋವ ದೇವರೇ, ನಿನ್ನ ಜನರನ್ನೂ, ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು,’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಇಂತೆನ್ನುತ್ತಾನೆ, “ಯಾಕೋಬಿನ ನಿಮಿತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ. ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರ ಹೀಗೆನ್ನುತ್ತಾರೆ: “ಯಕೋಬನನ್ನು ಕುರಿತು ಹರ್ಷಧ್ವನಿಗೈಯಿರಿ ಜನಾಂಗಗಳಾ ಶಿರೋಮಣಿಗೆ ಜೈಕಾರಮಾಡಿರಿ. ‘ಸರ್ವೇಶ್ವರ ಆಳಿದುಳಿದಾ ಇಸ್ರಯೇಲರನ್ನು ರಕ್ಷಿಸಿಹನು’ ಎಂದು ಘೋಷಿಸುತ್ತಾ ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಇಂತೆನ್ನುತ್ತಾನೆ - ಯಾಕೋಬಿನ ನಿವಿುತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ; ಯೆಹೋವನೇ, ಇಸ್ರಾಯೇಲಿನ ಶೇಷವಾದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಹೀಗೆಂದನು: “ಸಂತೋಷದಿಂದಿರಿ, ಯಾಕೋಬಿಗೋಸ್ಕರ ಹಾಡಿರಿ. ಮಹಾ ಜನಾಂಗವಾದ ಇಸ್ರೇಲಿಗೋಸ್ಕರ ಹರ್ಷಧ್ವನಿ ಮಾಡಿರಿ. ಸ್ತೋತ್ರಗೀತೆಗಳನ್ನು ಹಾಡಿರಿ. ‘ಯೆಹೋವನು ತನ್ನ ಜನರನ್ನು ರಕ್ಷಿಸಿದನು. ಇಸ್ರೇಲ್ ಜನಾಂಗದಲ್ಲಿ ಅಳಿದುಳಿದ ಜನರನ್ನು ಆತನು ರಕ್ಷಿಸಿದನು’ ಎಂದು ಕೂಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:7
37 ತಿಳಿವುಗಳ ಹೋಲಿಕೆ  

ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ, ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು.


ನಿಮ್ಮ ಜನರನ್ನು ರಕ್ಷಿಸಿರಿ; ನಿಮ್ಮ ವಾರಸುದಾರರನ್ನು ಆಶೀರ್ವದಿಸಿರಿ; ನೀವು ಅವರ ಕುರುಬ ಆಗಿದ್ದು; ಅವರನ್ನು ಯಾವಾಗಲೂ ಮುನ್ನಡೆಸಿರಿ.


ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! ಯೆಹೋವ ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ, ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು.


“ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು.


ಅದೇ ರೀತಿಯಲ್ಲಿ, ಈ ಕಾಲದಲ್ಲಿಯೂ ಕೃಪೆಯಿಂದ ಆಯ್ಕೆಯಾದ ಇಸ್ರಾಯೇಲರಲ್ಲಿ ಕೆಲವರು ಉಳಿದಿದ್ದಾರೆ.


ಇದಲ್ಲದೆ ಯೆಶಾಯನು ಇಸ್ರಾಯೇಲರನ್ನು ಕುರಿತು ಕೂಗಿ ಹೇಳುವುದೇನೆಂದರೆ, “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಣೆಹೊಂದುವರು.


ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”


ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.


“ಯಾಕೋಬೇ, ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು. ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು. ಬೊಚ್ರದ ಕುರಿಗಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆಯಂತೆಯೂ ಅವರನ್ನು ಒಟ್ಟಾಗಿ ಕೂಡಿಸುವೆನು. ಹುಲ್ಲುಗಾವಲಿನ ಕುರಿಮಂದೆಯಂತೆ, ಸ್ಥಳವು ಜನರಿಂದ ತುಂಬಿ ತುಳುಕುವುದು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು.


ಯೆಹೋವ ದೇವರ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು. ಏಕೆಂದರೆ ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಅನೇಕರಿಗೆ ಮುಕ್ತಿ ದೊರಕುವುದು. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋವ ದೇವರ ಕರೆಹೊಂದಿ ಉಳಿದವರಲ್ಲಿಯೂ ಬಿಡುಗಡೆ ಇರುವುದು.


ಆದರೆ ನಾನು ಯೆಹೂದದ ಮನೆತನದವರನ್ನು ಪ್ರೀತಿಸಿ ಅವರನ್ನು ಬಿಲ್ಲುಬಾಣ, ಖಡ್ಗ, ಕಾಳಗ, ಕುದುರೆ ರಾಹುತರು ಇವುಗಳಿಂದಲ್ಲ, ಅವರನ್ನು ಅವರ ದೇವರಾದ ನಾನೇ ಯೆಹೋವ ದೇವರೇ ರಕ್ಷಿಸುವೆನು,” ಎಂದು ಹೇಳಿದರು.


“ ‘ಆದರೆ ನಾನು ಕೆಲವರನ್ನು ಉಳಿಸುತ್ತೇನೆ; ಹೇಗೆಂದರೆ, ನೀವು ದೇಶಗಳ ಮತ್ತು ಜನಾಂಗಗಳ ನಡುವೆ ಚದರಿಹೋದಾಗ ನಿಮ್ಮಲ್ಲಿ ಕೆಲವರು ಖಡ್ಗದಿಂದ ತಪ್ಪಿಸಿಕೊಳ್ಳುವಿರಿ.


ಆಗ ಅವರ ಸಂತಾನವು ಇತರ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು. ಅವರಿಂದಾದ ಉತ್ಪತ್ತಿ ಜನರ ಮಧ್ಯದಲ್ಲಿ ತಿಳಿಸಲಾಗುವುದು. ಅವರನ್ನು ನೋಡುವವರೆಲ್ಲರೂ, ಅವರೇ ಯೆಹೋವ ದೇವರು ಆಶೀರ್ವದಿಸಿದ ಸಂತಾನ ಎಂದು ಒಪ್ಪಿಕೊಳ್ಳುವರು.


ಆಕಾಶಗಳೇ, ಹರ್ಷಧ್ವನಿಗೈಯಿರಿ. ಏಕೆಂದರೆ ಯೆಹೋವ ದೇವರು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಕೆಳಭಾಗವೇ ಆರ್ಭಟಿಸು. ಪರ್ವತಗಳೇ, ವನವೇ, ಅದರಲ್ಲಿರುವ ಎಲ್ಲಾ ಮರಗಳೇ ಉತ್ಸಾಹಧ್ವನಿ ಮಾಡಿರಿ. ಏಕೆಂದರೆ ಯೆಹೋವ ದೇವರು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.


ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು, ಎಂಬುದಾಗಿ ಹಿಜ್ಕೀಯನು ಅನ್ನುತ್ತಾನೆ,” ಎಂದು ಹೇಳಿದರು.


ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.


ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.


ನಮ್ಮ ದೇವರಾದ ಯೆಹೋವ ದೇವರೇ, ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ, ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ, ನಮ್ಮನ್ನು ರಕ್ಷಿಸಿರಿ.


ದೇವರು ಚೀಯೋನನ್ನು ರಕ್ಷಿಸುವರು. ದೇವರು ಯೆಹೂದದ ಪಟ್ಟಣಗಳನ್ನು ಕಟ್ಟುವರು. ಜನರು ಅಲ್ಲಿ ವಾಸಮಾಡಿ, ಅದನ್ನು ಸ್ವಾಧೀನಮಾಡಿಕೊಳ್ಳುವರು.


ದೇವರು ನಮ್ಮ ಮೇಲೆ ಕರುಣೆಯಿಟ್ಟು, ನಮ್ಮನ್ನು ಆಶೀರ್ವದಿಸಲಿ. ದೇವರು ತಮ್ಮ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ.


ಎಲ್ಲಾ ಜನಾಂಗಗಳೇ, ದೇವಜನರ ಸಂಗಡ ಹರ್ಷಿಸಿರಿ. ಏಕೆಂದರೆ ದೇವರು ತಮ್ಮ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುವರು. ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ದೇಶಕ್ಕೋಸ್ಕರವೂ, ತಮ್ಮ ಜನರಿಗೋಸ್ಕರವೂ ದೋಷಪರಿಹಾರ ಮಾಡುವರು.


ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ನೀವು ಕೇಳಿ ಕಾಪಾಡಿ ಕೈಗೊಂಡರೆ, ಅವರು ಇತರರಿಗೆ ನಿಮ್ಮನ್ನು ಅಧೀನಮಾಡದೆ, ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವರು. ನೀವು ಎಲ್ಲರಿಗಿಂತಲೂ ಮೇಲಿನವರಾಗುವಿರೇ ಹೊರತು ಕೆಳಗಿನವರಾಗಿ ಇರುವುದಿಲ್ಲ.


ನಿಶ್ಚಯವಾಗಿ ಗುಡ್ಡಗಳಿಂದಲೂ, ಬೆಟ್ಟಗಳ ಸಮೂಹದಿಂದಲೂ ನಮಗೆ ಮೋಸವಾಗಿದೆ. ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವ ದೇವರಲ್ಲಿಯೇ ಇದೆ.


ಯೆಹೋವ ದೇವರಿಗೆ ಹಾಡಿರಿ, ಯೆಹೋವ ದೇವರನ್ನು ಸ್ತುತಿಸಿರಿ. ಏಕೆಂದರೆ, ಅವರು ಬಡವನ ಪ್ರಾಣವನ್ನು ಕೇಡು ಮಾಡುವವರ ಕೈಯಿಂದ ತಪ್ಪಿಸಿದ್ದಾರೆ.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವ ದೇವರು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದಂತೆ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಮುಂದೆ ದುಃಖಪಡುವುದಿಲ್ಲ.


ಜನಭರಿತವಾಗಿದ್ದ ನಗರಿಯು ಹೇಗೆ ಬರಿದಾಗಿ ಹೋಗಿದೆ! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ, ಈಗ ಹೇಗೆ ವಿಧವೆಯಾಗಿದ್ದಾಳೆ! ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ, ಹೇಗೆ ಈಗ ದಾಸಿಯಂತಾಗಿದ್ದಾಳೆ!


ಆಗ ನಮ್ಮ ಬಾಯಿ ನಗೆಯಿಂದಲೂ, ನಮ್ಮ ಬಾಯಿ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಜನಾಂಗಗಳು, “ಯೆಹೋವ ದೇವರು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ,” ಎಂದು ಹೇಳಿದರು.


ನಿನ್ನ ಕಾವಲುಗಾರರು ಧ್ವನಿಯನ್ನೆತ್ತುವರು. ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು. ಏಕೆಂದರೆ ಯೆಹೋವ ದೇವರು ಚೀಯೋನನ್ನು ತಿರುಗಿ ತರುವಾಗ, ಅವರು ಅದನ್ನು ತಮ್ಮ ಕಣ್ಣಿನಿಂದಲೇ ಕಾಣುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು