ಯೆರೆಮೀಯ 32:22 - ಕನ್ನಡ ಸಮಕಾಲಿಕ ಅನುವಾದ22 ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವರ ಪೂರ್ವಜರಿಗೆ ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಈ ನಾಡನ್ನು ಅವರಿಗೆ ಅನುಗ್ರಹಿಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವರ ಪಿತೃಗಳಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ಯೆಹೋವನೇ, ನೀನು ಈ ಭೂಮಿಯನ್ನು ಇಸ್ರೇಲರಿಗೆ ಕೊಟ್ಟೆ. ನೀನು ಬಹಳ ಕಾಲದ ಹಿಂದೆಯೇ ಈ ಭೂಮಿಯನ್ನು ಅವರ ಪೂರ್ವಿಕರಿಗೆ ಕೊಡುವದಾಗಿ ಮಾತು ಕೊಟ್ಟಿದ್ದೆ. ಇದು ಬಹಳ ಒಳ್ಳೆಯ ಭೂಮಿ. ಇದು ಅನೇಕ ಒಳ್ಳೆ ವಸ್ತುಗಳನ್ನು ಹೊಂದಿರುವ ಒಳ್ಳೆಯ ಭೂಮಿ. ಅಧ್ಯಾಯವನ್ನು ನೋಡಿ |
ಅವರು ನಿಮ್ಮನ್ನು ಪ್ರೀತಿಸಿ, ನಿಮ್ಮನ್ನು ಆಶೀರ್ವದಿಸಿ, ನಿಮ್ಮನ್ನು ಅಭಿವೃದ್ಧಿಗೊಳಿಸಿ ಮತ್ತು ನಿಮಗೆ ಕೊಡುತ್ತೇನೆಂದು ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ದೇಶದಲ್ಲಿ ನಿಮ್ಮ ಗರ್ಭದ ಫಲವನ್ನೂ ಅಂದರೆ, ಭೂಮಿಯ ಹುಟ್ಟುವಳಿಯನ್ನೂ, ನಿಮ್ಮ ಧಾನ್ಯವನ್ನೂ, ನಿಮ್ಮ ಹೊಸ ದ್ರಾಕ್ಷಾರಸವನ್ನೂ, ನಿಮ್ಮ ಎಣ್ಣೆಯನ್ನೂ, ನಿಮ್ಮ ಪಶುಗಳನ್ನೂ, ನಿಮ್ಮ ಕುರಿಗಳ ಮಂದೆಗಳನ್ನೂ ಆಶೀರ್ವದಿಸುವರು.