ಯೆರೆಮೀಯ 32:30 - ಕನ್ನಡ ಸಮಕಾಲಿಕ ಅನುವಾದ30 “ಏಕೆಂದರೆ ಇಸ್ರಾಯೇಲರೂ, ಯೆಹೂದದ ಮಕ್ಕಳೂ ತಮ್ಮ ಚಿಕ್ಕಂದಿನಿಂದ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾತ್ರ ಮಾಡಿದ್ದಾರೆ. ಇಸ್ರಾಯೇಲರೂ ತಮ್ಮ ಕೈಕೆಲಸಗಳಿಂದ ನನಗೆ ಕೋಪೋದ್ರೇಕವನ್ನೂ ಎಬ್ಬಿಸಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ. ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ, ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಇಸ್ರಯೇಲ್ ವಂಶವೂ ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿದೆ. ಹೌದು, ಇಸ್ರಯೇಲ್ ವಂಶದವರು ತಮ್ಮ ಕೈಕೆಲಸದ ವಿಗ್ರಹಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ. ಇದು ಸರ್ವೇಶ್ವರನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಇಸ್ರಾಯೇಲ್ ವಂಶವೂ ಯೆಹೂದ ವಂಶವೂ ತಮ್ಮ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ; ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಾನು ಇಸ್ರೇಲಿನ ಜನರನ್ನು ಮತ್ತು ಯೆಹೂದದ ಜನರನ್ನು ಗಮನಿಸಿದ್ದೇನೆ. ಅವರು ಮಾಡುವದೆಲ್ಲ ಕೆಟ್ಟದ್ದೆ. ಅವರು ಚಿಕ್ಕಂದಿನಿಂದ ಕೆಟ್ಟದ್ದನ್ನೇ ಮಾಡಿದ್ದಾರೆ. ಇಸ್ರೇಲಿನ ಜನರು ತಮ್ಮ ಕೈಗಳಿಂದ ಮಾಡಿದ ವಿಗ್ರಹಗಳನ್ನು ಪೂಜಿಸಿ ನನಗೆ ಬಹುಕೋಪ ಬರುವಂತೆ ಮಾಡಿದರು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿ |