Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:34 - ಕನ್ನಡ ಸಮಕಾಲಿಕ ಅನುವಾದ

34 ಆದರೆ ನನ್ನ ಹೆಸರಿನಿಂದ ಕರೆಯಲಾಗಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನನ್ನ ಹೆಸರಿನಿಂದ ಪ್ರಖ್ಯಾತವಾಗಿರುವ ದೇವಾಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಹೊಲೆಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆ ಜನರು ತಮಗಾಗಿ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ಆ ವಿಗ್ರಹಗಳನ್ನಿಟ್ಟು ನನ್ನ ಆಲಯವನ್ನು ‘ಹೊಲಸು’ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:34
15 ತಿಳಿವುಗಳ ಹೋಲಿಕೆ  

“ ‘ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಯೆಹೋವ ದೇವರು ಹೇಳುತ್ತಾರೆ. ನನ್ನ ಹೆಸರನ್ನು ಹೊಂದಿರುವ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವುದಕ್ಕೆ ತಮ್ಮ ಅಸಹ್ಯವಾದವುಗಳನ್ನು ಇಟ್ಟಿದ್ದಾರೆ.


“ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ. ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವನು ಅನ್ಯದೇವರುಗಳನ್ನೂ, ಯೆಹೋವ ದೇವರ ಆಲಯದಲ್ಲಿರುವ ವಿಗ್ರಹವನ್ನೂ ಯೆಹೋವ ದೇವರ ಆಲಯದ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ, ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.


ಅವನು ಅಶೇರ ಸ್ತಂಭವನ್ನು ಯೆಹೋವ ದೇವರ ಆಲಯದೊಳಗಿಂದ ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ತರಿಸಿ, ಅದನ್ನು ಕಿದ್ರೋನ್ ಕಣಿವೆಯ ಬಳಿಯಲ್ಲಿ ಸುಟ್ಟು, ಅದನ್ನು ಧೂಳಾಗಿ ಪುಡಿಮಾಡಿ, ಆ ಧೂಳಿನ ಪುಡಿಯನ್ನು ಸಾಮಾನ್ಯ ಜನರ ಸಮಾಧಿಗಳ ಮೇಲೆ ಹಾಕಿದನು.


ಮನಸ್ಸೆಯು ಅರಸನಾದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಐವತ್ತೈದು ವರ್ಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ.


ಆಮೇಲೆ ಬಂದು ನನ್ನ ಹೆಸರನ್ನು ಹೊಂದಿರುವ ಈ ಆಲಯದಲ್ಲಿ ನನ್ನ ಮುಂದೆ ನಿಂತುಕೊಂಡು, “ನಾವು ಸುರಕ್ಷಿತರು” ಎಂದು ಹೇಳಿ ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲಾಗಿದ್ದೇವೆಂದು ಹೇಳುವಿರೋ?


ಏಕೆಂದರೆ ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಅಶುದ್ಧಮಾಡಿ; ಅವರೂ, ಅವರ ತಂದೆಗಳೂ, ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪ ಸುಟ್ಟು, ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತದಿಂದ ತುಂಬಿಸಿ,


ನೀವೋ ಕೂಡಲೆ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ಬಿಡುಗಡೆಯನ್ನು ಪ್ರಕಟಿಸಿ, ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದಿರಿ. ನನ್ನ ಹೆಸರಿನಿಂದ ಖ್ಯಾತಗೊಂಡಿರುವ ದೇವಾಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಪ್ಪಂದ ಮಾಡಿಕೊಂಡಿರಿ.


ಆದರೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಪುನಃ ಕಳುಹಿಸಿ, ‘ನಾನು ಹಗೆ ಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇಬೇಡಿರಿ!’ ಎಂದು ಹೇಳಿದೆನು.


ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ, ಜನರೂ ಜನಾಂಗಗಳ ಅಸಹ್ಯಗಳನ್ನು ಹಿಂಬಾಲಿಸಿ ಬಹಳವಾಗಿ ಅಪನಂಬಿಗಸ್ತರಾಗಿ, ಯೆಹೋವ ದೇವರು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.


ಬೆನ್ ಹಿನ್ನೋಮ್ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಪುತ್ರಪುತ್ರಿಯರನ್ನು ಬೆಂಕಿಯಲ್ಲಿ ಸುಡುವುದಕ್ಕೆ ಕಟ್ಟಿದ್ದಾರೆ. ಇದನ್ನು ನಾನು ಆಜ್ಞಾಪಿಸಲಿಲ್ಲ. ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.


ನಿನ್ನ ಮಿತ್ರರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವುದಿಲ್ಲ. ನಿನ್ನ ಅಕ್ರಮಗಳು ಬಹಳವೂ, ನಿನ್ನ ಪಾಪಗಳು ಪ್ರಬಲವೂ ಆಗಿರುವುದರಿಂದ ಶತ್ರುವಿನ ಗಾಯದಿಂದಲೂ, ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು