ಯೆರೆಮೀಯ 32:37 - ಕನ್ನಡ ಸಮಕಾಲಿಕ ಅನುವಾದ37 ನಾನು ನನ್ನ ಕೋಪದಲ್ಲಿಯೂ, ನನ್ನ ಉಗ್ರದಲ್ಲಿಯೂ, ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶದೊಳಗಿಂದ ಅವರನ್ನು ಕೂಡಿಸಿ, ಈ ಸ್ಥಳಕ್ಕೆ ತಿರುಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ‘ಇಗೋ, ನಾನು ಕಡುಕೋಪದಿಂದಲೂ ರೋಷಾವೇಶದಿಂದಲೂ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಎಲ್ಲ ದೇಶಗಳಿಂದ ಈ ಸ್ಥಳಕ್ಕೆ ಮರಳಿ ಕರೆತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಇಗೋ, ನಾನು ಕೋಪರೋಷ ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು. ಅಧ್ಯಾಯವನ್ನು ನೋಡಿ |