Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:8 - ಕನ್ನಡ ಸಮಕಾಲಿಕ ಅನುವಾದ

8 “ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು, ಯೆಹೋವ ದೇವರ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆ ಬಂದು, ‘ಬೆನ್ಯಾಮೀನಿನ ದೇಶದಲ್ಲಿರುವ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಏಕೆಂದರೆ ಬಾಧ್ಯದ ಅಧಿಕಾರವೂ ನಿನ್ನದು; ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ,’ ಎಂದು ಬೇಡಿಕೊಂಡು ಹೇಳಿದನು. “ಆಗ ಅದು ಯೆಹೋವ ದೇವರ ವಾಕ್ಯವೆಂದು ನಾನು ತಿಳಿದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು, “ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು. ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ” ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರನ ಈ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗ ಹನಮೇಲನು ಕಾರಾಗೃಹದ ಅಂಗಳದಲ್ಲಿ ಇದ್ದ ನನ್ನ ಬಳಿಗೆ ಬಂದು, ‘ಬೆನ್ಯಾಮೀನ್ ನಾಡಿನ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ. ಅದಕ್ಕೆ ನೀನೆ ಬಾಧ್ಯನು, ನಿನಗಾಗಿಯೇ ಕೊಂಡುಕೊ’ ಎಂದು ಕೇಳಿಕೊಂಡನು. ಕೂಡಲೆ ಇದು ಸರ್ವೇಶ್ವರನ ನುಡಿ ಎಂದು ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು - ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು, ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಆಮೇಲೆ ಯೆಹೋವನು ಹೇಳಿದಂತೆಯೇ ಆಯಿತು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿದ್ದ ನನ್ನ ಬಳಿಗೆ ಬಂದು ಹೀಗೆ ಹೇಳಿದನು: ‘ಯೆರೆಮೀಯನೇ, ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ಆ ಹೊಲವನ್ನು ನಿನಗಾಗಿ ಕೊಂಡುಕೊ. ಅದರ ಒಡೆಯನಾಗುವದಕ್ಕೆ ನಿನಗೆ ಹಕ್ಕಿದೆ.’” ಇದು ಯೆಹೋವನ ಸಂದೇಶವೆಂದು ನನಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:8
15 ತಿಳಿವುಗಳ ಹೋಲಿಕೆ  

ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು, ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಏಕೆಂದರೆ ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು,’ ಎಂದು ಹೇಳುವನು.


ಆಗ ಬಾಬಿಲೋನಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕಿತ್ತು. ಪ್ರವಾದಿಯಾದ ಯೆರೆಮೀಯನು ಯೆಹೂದದ ಅರಸನ ಅರಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಬಂಧಿಸಲಾಗಿದ್ದನು.


ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಅವನು ಇನ್ನು ಸೆರೆಮನೆಯ ಅಂಗಳದಲ್ಲಿ ಸೆರೆಯಾಗಿದ್ದಾಗ ಎರಡನೆಯ ಸಾರಿ ಉಂಟಾಯಿತು.


ಅದಕ್ಕೆ ಮೀಕಾಯನು, “ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ನೀನು ಹೋಗುವ ದಿವಸದಲ್ಲಿ ನೋಡುವೆ,” ಎಂದನು.


ಹೀಗೆ, “ನಿನ್ನ ಮಗನು ಬದುಕುವನು” ಎಂದು ಯೇಸು ತನಗೆ ಹೇಳಿದ ಸಮಯದಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು, ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು.


ಅದೇ ದಿವಸದಲ್ಲಿ ಅದು ರದ್ದುಗೊಂಡಿತು. ಆಗ ನನ್ನನ್ನು ನೋಡಿಕೊಳ್ಳುತ್ತಿದ್ದ ಬಡ ಕುರಿ ಮಂದೆಯು, ಅದು ಯೆಹೋವ ದೇವರ ವಾಕ್ಯವೆಂದು ತಿಳಿದುಕೊಂಡಿತು.


ಬೆನ್ಯಾಮೀನನ ಗೋತ್ರದಿಂದ ಕೊಟ್ಟವುಗಳು, ಗಿಬ್ಯೋನ್, ಗೆಬಾ, ಆಲೆಮೆತೂ, ಅನಾತೋತೂ, ಅದರ ಗೋಮಾಳುಗಳು. ಇವರ ಕುಟುಂಬಗಳಿಗೆ ದೊರಕಿದ ಎಲ್ಲಾ ಪಟ್ಟಣಗಳು ಹದಿಮೂರು.


ಯಾಜಕನಾದ ಅಬಿಯಾತರನಿಗೆ ಅರಸನು, “ನೀನು ಅನಾತೋತಿನಲ್ಲಿರುವ ನಿನ್ನ ಹೊಲಗಳಿಗೆ ಹೋಗು. ಏಕೆಂದರೆ ನೀನು ಸಾವಿಗೆ ಪಾತ್ರನಾಗಿದ್ದೀಯೆ. ಆದರೆ ನೀನು ಸಾರ್ವಭೌಮ ಯೆಹೋವ ದೇವರ ಮಂಜೂಷವನ್ನು ನನ್ನ ತಂದೆ ದಾವೀದನ ಮುಂದೆ ಹೊತ್ತದ್ದರಿಂದಲೂ, ನನ್ನ ತಂದೆಯ ಎಲ್ಲಾ ಕಷ್ಟಗಳಲ್ಲಿ ನೀನು ಪಾಲುಗಾರನಾಗಿದ್ದರಿಂದಲೂ, ನಾನು ಈಗ ನಿನ್ನನ್ನು ಸಾಯಿಸುವುದಿಲ್ಲ,” ಎಂದನು.


ಬೆನ್ಯಾಮೀನ್ ಸೀಮೆಗೆ ಸೇರಿ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.


ಆದರೂ ಓ ಸಾರ್ವಭೌಮ ಯೆಹೋವ ದೇವರೇ, ನೀನು ನನಗೆ, ‘ಹೊಲವನ್ನು ಹಣಕ್ಕೆ ಕೊಂಡುಕೋ, ಸಾಕ್ಷಿಗಳನ್ನು ಇಡು,’ ಎಂದು ಹೇಳಿದ್ದೀ. ಆದರೂ ಪಟ್ಟಣವು ಬಾಬಿಲೋನಿಯರ ಕೈಯಲ್ಲಿ ಒಪ್ಪಿಸಲಾಗಿದೆಯಲ್ಲಾ?”


ಯೆರೆಮೀಯನು ಬೆನ್ಯಾಮೀನನ ದೇಶಕ್ಕೆ ಹೋಗುವುದಕ್ಕೂ, ಜನರ ಮಧ್ಯದಿಂದ ತನ್ನ ಪಾಲನ್ನು ತೆಗೆದುಕೊಳ್ಳುವುದಕ್ಕೂ ಯೆರೂಸಲೇಮಿನಿಂದ ಹೊರಟನು.


ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು. ನನ್ನ ಸರಕುಗಳನ್ನು ಹಗಲಿನಲ್ಲಿಯೇ ಹೊರಗೆ ತಂದೆನು. ಸಂಜೆಯಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು. ಅದನ್ನು ನಾನು ಮುಸ್ಸಂಜೆಯಲ್ಲಿ ಹೊರಗೆ ತಂದು, ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು