ಯೆರೆಮೀಯ 33:1 - ಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಅವನು ಇನ್ನು ಸೆರೆಮನೆಯ ಅಂಗಳದಲ್ಲಿ ಸೆರೆಯಾಗಿದ್ದಾಗ ಎರಡನೆಯ ಸಾರಿ ಉಂಟಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಯೆಹೋವನು ಈ ಎರಡನೆಯ ವಾಕ್ಯವನ್ನು ಅನುಗ್ರಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಸರ್ವೇಶ್ವರ ಎರಡನೆಯ ವಾಕ್ಯವನ್ನು ಅನುಗ್ರಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಯೆಹೋವನು ಈ ಎರಡನೆಯ ವಾಕ್ಯವನ್ನು ಅನುಗ್ರಹಿಸಿದನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಎರಡನೇ ಬಾರಿ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಬಂದಿತು. ಯೆರೆಮೀಯನು ಇನ್ನೂ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. ಅಧ್ಯಾಯವನ್ನು ನೋಡಿ |
“ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು, ಯೆಹೋವ ದೇವರ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆ ಬಂದು, ‘ಬೆನ್ಯಾಮೀನಿನ ದೇಶದಲ್ಲಿರುವ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಏಕೆಂದರೆ ಬಾಧ್ಯದ ಅಧಿಕಾರವೂ ನಿನ್ನದು; ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ,’ ಎಂದು ಬೇಡಿಕೊಂಡು ಹೇಳಿದನು. “ಆಗ ಅದು ಯೆಹೋವ ದೇವರ ವಾಕ್ಯವೆಂದು ನಾನು ತಿಳಿದುಕೊಂಡೆನು.