Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:11 - ಕನ್ನಡ ಸಮಕಾಲಿಕ ಅನುವಾದ

11 ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಉಲ್ಲಾಸ ಕೋಲಾಹಲ, ವಧೂವರರ ಸ್ವರ, ಇವುಗಳು ಕೇಳ ಬರುವವು. ಸೇನಾಧೀಶ್ವರನಾದ ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಯೆಹೋವನು, ಒಳ್ಳೆಯವನು, ಆತನ ಕೃಪೆಯು ಶಾಶ್ವತ ಎಂದು ಕೀರ್ತಿಸುತ್ತಾ ಕೃತಜ್ಞತಾಬಲಿಯನ್ನು ಯೆಹೋವನ ಆಲಯಕ್ಕೆ ತರುವವರ ಗಾನವೂ ಕಿವಿಗೆ ಬೀಳುವದು. ನಾನು ದೇಶವನ್ನು ದುರವಸ್ಥೆಯಿಂದ ತಪ್ಪಿಸಿ ಪೂರ್ವಸ್ಥಿತಿಗೆ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:11
47 ತಿಳಿವುಗಳ ಹೋಲಿಕೆ  

ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರು ಒಳ್ಳೆಯವರು; ಅವರ ಪ್ರೀತಿ ಶಾಶ್ವತವಾಗಿರುವುದು.


ಧನ್ಯವಾದ ಬಲಿಗಳನ್ನು ಅರ್ಪಿಸಿ, ದೇವರ ಕೆಲಸಗಳನ್ನು ಉತ್ಸಾಹದಿಂದ ಸಾರಲಿ.


ಯೆಹೋವ ದೇವರನ್ನು ಕೊಂಡಾಡಿರಿ, ಅವರು ಒಳ್ಳೆಯವರು; ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.


ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು. ಅವರ ಪ್ರೀತಿ ಶಾಶ್ವತವಾಗಿರುವುದು.


ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಅದು ದೇವರ ಹೆಸರಿಗೆ ಸಲ್ಲಿಸುವ ಕೃತಜ್ಞತೆಯೆಂಬ ತುಟಿಗಳ ಫಲವೇ ಆಗಿದೆ.


ಆದಕಾರಣ ಯೆಹೋವ ದೇವರು ವಿಮೋಚಿಸಿದವರು, ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ಹಿಜ್ಕೀಯನು ಅವರಿಗೆ ಉತ್ತರಕೊಟ್ಟು, “ಈಗ ನೀವು ನಿಮ್ಮನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದರಿಂದ, ಸಮೀಪಕ್ಕೆ ಬಂದು ಬಲಿಗಳನ್ನೂ, ಸ್ತೋತ್ರ ಅರ್ಪಣೆಗಳನ್ನೂ ಯೆಹೋವ ದೇವರ ಆಲಯಕ್ಕೆ ತೆಗೆದುಕೊಂಡು ಬನ್ನಿರಿ,” ಎಂದನು. ಆಗ ಸಭೆಯವರು ಬಲಿಗಳನ್ನೂ, ಸ್ತೋತ್ರದ ಅರ್ಪಣೆಗಳನ್ನೂ ಮತ್ತು ಇಷ್ಟಪೂರ್ವಕ ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.


ತುತೂರಿ ಊದುವವರೂ, ಸಂಗೀತಗಾರರೂ ಯೆಹೋವ ದೇವರನ್ನು ಕೊಂಡಾಡುತ್ತಾ, ಹೊಗಳುತ್ತಾ ಧ್ವನಿ ಎತ್ತಿ ಸ್ತೋತ್ರ ಮಾಡುವಂತೆ ತುತೂರಿಗಳೂ, ತಾಳಗಳೂ ಮೊದಲಾದ ಗೀತ ವಾದ್ಯಗಳಿಂದ ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು, ಅವರ ಕೃಪೆಯು ಯುಗಯುಗಕ್ಕೆ ಇರುವುದು,” ಎಂದು ಯೆಹೋವ ದೇವರನ್ನು ಹೊಗಳುತ್ತಿದ್ದ ಹಾಗೆ, ಯೆಹೋವ ದೇವರ ಆಲಯವು ಮೇಘದಿಂದ ತುಂಬಿತು.


ದೀಪದ ಬೆಳಕು ನಿನ್ನಲ್ಲಿ ಎಂದೂ ಪ್ರಕಾಶಿಸದು. ವಧೂವರರ ಸ್ವರವು ಮತ್ತೆ ನಿನ್ನಲ್ಲಿ ಎಂದೂ ಕೇಳಿಬರದು. ಏಕೆಂದರೆ ನಿನ್ನ ವರ್ತಕರು ಭೂಮಿಯ ಮಹಾ ಪುರುಷರಾಗಿದ್ದು, ನಿನ್ನ ಮಾಂತ್ರಿಕ ಶಕ್ತಿಯ ದೆಸೆಯಿಂದ ಎಲ್ಲಾ ದೇಶಗಳವರು ವಂಚಿತರಾದರು.


ಮದುಮಗಳು ಮದುಮಗನಿಗೆ ಸೇರಿದವಳು. ಆದರೂ ಮದುಮಗನ ಸ್ನೇಹಿತನು ನಿಂತುಕೊಂಡು ಆತನ ಮಾತಿಗೆ ಕಿವಿಗೊಟ್ಟು, ಮದುಮಗನ ಸ್ವರ ಕೇಳಿ ಸಂತೋಷಪಡುತ್ತಾನೆ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.


ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ, ಅವರ ಹೆಸರನ್ನು ಸಾರಿ ಹೇಳಿರಿ, ಜನರಲ್ಲಿ ದೇವರ ಕ್ರಿಯೆಗಳನ್ನು ತಿಳಿಯಪಡಿಸಿರಿ.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾಲ್ಕನೆಯ, ಐದನೆಯ, ಏಳನೆಯ, ಹತ್ತನೆಯ ತಿಂಗಳಿನ ಉಪವಾಸವು ಯೆಹೂದದ ಮನೆತನದವರಿಗೆ ಸಂತೋಷಕರ, ಸಂಭ್ರಮ ಕಾಲವೂ, ಆನಂದಕರವಾದ ಹಬ್ಬಗಳೂ ಆಗುವುವು. ಆದರೆ ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.”


ಚೀಯೋನಿನ ಪುತ್ರಿಯೇ, ಹಾಡು. ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಪುತ್ರಿಯೇ, ಪೂರ್ಣಹೃದಯದಿಂದ ಸಂಭ್ರಮಿಸಿ ಉಲ್ಲಾಸಪಡು.


ಯೆಹೂದದ ಸೆರೆಯನ್ನೂ, ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ, ಅವರನ್ನು ಮುಂಚಿನ ಹಾಗೆ ಕಟ್ಟುವೆನು.


ಆಗ ನಾನು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸದ ಶಬ್ದವನ್ನೂ, ಸಂತೋಷ ಶಬ್ದವನ್ನೂ, ಮದುಮಗನ ಶಬ್ದವನ್ನೂ, ಮದುಮಗಳ ಶಬ್ದವನ್ನೂ ನಿಲ್ಲಿಸುವೆನು. ಏಕೆಂದರೆ, ದೇಶವು ಹಾಳಾಗುವುದು.


ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ, ಒಟ್ಟಾಗಿ ಹಾಡಿರಿ. ಏಕೆಂದರೆ ಯೆಹೋವ ದೇವರು ತನ್ನ ಪ್ರಜೆಗಳನ್ನು ಸಂತೈಸಿದ್ದಾರೆ. ಆತನು ಯೆರೂಸಲೇಮನ್ನು ವಿಮೋಚಿಸಿದ್ದಾರೆ.


ನಾನು ನಿಮಗೆ ಕೃತಜ್ಞತೆಯ ಬಲಿಯನ್ನು ಅರ್ಪಿಸುವೆನು; ಯೆಹೋವ ದೇವರ ಹೆಸರನ್ನು ಕರೆಯುವೆನು.


ಇಸ್ರಾಯೇಲರೆಲ್ಲರೂ ಬೆಂಕಿಯು ಇಳಿದದ್ದನ್ನೂ, ಆಲಯದ ಮೇಲೆ ಇರುವ ಯೆಹೋವ ದೇವರ ಮಹಿಮೆಯನ್ನೂ ಕಂಡಾಗ, ಅವರು ನೆಲಕ್ಕೆ ತಮ್ಮ ಮುಖಗಳನ್ನು ಬಾಗಿ, ನೆಲಗಟ್ಟಿನ ಮೇಲೆ ಮೊಣಕಾಲೂರಿ ಆರಾಧಿಸುತ್ತಾ, ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ಯೆಹೋವ ದೇವರು ಒಳ್ಳೆಯವರು, ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.”


ಎಫ್ರಾಯೀಮಿನವರು ಶೂರರಂತೆ ಇರುವರು. ಅವರ ಹೃದಯವು ದ್ರಾಕ್ಷಾರಸ ಕುಡಿದವರಂತೆ ಸಂತೋಷಪಡುವುದು. ಅವರ ಮಕ್ಕಳು ಇದನ್ನು ಕಂಡು ಸಂತೋಷಿಸುವರು. ಅವರ ಹೃದಯವು ಯೆಹೋವ ದೇವರಲ್ಲಿ ಆನಂದಿಸುವುದು.


ಅವರ ಒಳ್ಳೆಯತನವು ಎಷ್ಟೋ ದೊಡ್ಡದು. ಅವರು ಸೌಂದರ್ಯವು ಎಷ್ಟು ಮಹತ್ತಾದದ್ದು! ಧಾನ್ಯವು ಯೌವನಸ್ಥರನ್ನೂ, ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವುವು.


ಆದರೆ ನಾನು ಸ್ತೋತ್ರದ ಗೀತೆಯಿಂದ ನಿಮಗೆ ಬಲಿ ಅರ್ಪಿಸುವೆನು. ನಾನು ಮಾಡಿದ ಹರಕೆಯನ್ನು ತೀರಿಸುವೆನು. ಆಗ ನಾನು, ‘ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು,’ ಎಂದು ಹೇಳಿದನು.”


ಆಗ ಮಾತ್ರ ನಾನು ಯಾಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ. ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ, ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.’ ”


ನಾನು ಈ ದೇಶಗಳಿಂದ ಸಂತೋಷದ ಶಬ್ದ ಮತ್ತು ಸಂತೋಷದ ಶಬ್ದವನ್ನು ಮಾತ್ರ ತೆಗೆದುಹಾಕುತ್ತೇನೆ, ವಧು ಅಥವಾ ವಧುವಿನ ಧ್ವನಿ ಅಲ್ಲಿ ಕೇಳಿಸುವುದಿಲ್ಲ, ಬೀಸುಕಲ್ಲಿನ ಸದ್ದನ್ನು ಅಡಗಿಸುವೆನು. ದೀಪಕ್ಕೆ ಎಣ್ಣೆ ಇಲ್ಲದಂತೆ ಮಾಡುವೆನು.


ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸದ ಸ್ವರವನ್ನೂ, ಸಂತೋಷದ ಸ್ವರವನ್ನೂ, ಮದುಮಗನ ಸ್ವರವನ್ನೂ, ಮದುಮಗಳ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿಬಿಡುವೆನು.


ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ, ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಅವರು ತಮ್ಮ ಮಡದಿಮಕ್ಕಳೂಡನೆ ಮಹೋತ್ಸವ ಮಾಡಿದರು. ಆದ್ದರಿಂದ ಯೆರೂಸಲೇಮಿನ ಸಂತೋಷ ಧ್ವನಿಯು ಬಹು ದೂರಕ್ಕೆ ಕೇಳಿಸಿತು.


ಆಗ ಜನರೆಲ್ಲರೂ ತಮಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ, ಅವರು ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಆಹಾರ ಪಾಲುಗಳನ್ನು ಕಳುಹಿಸಲೂ ಮತ್ತು ಸಂತೋಷದಿಂದ ಆಚರಿಸಲೂ ಹೊರಟು ಹೋದರು.


ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು. ಏಕೆಂದರೆ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವುದಕ್ಕೆ ಅಸ್ಸೀರಿಯ ದೇಶದ ಅರಸನ ಹೃದಯವನ್ನು, ಅವರ ಕಡೆಗೆ ಮನಪರಿವರ್ತಿಸಿದ್ದರಿಂದ ಯೆಹೋವ ದೇವರು ಅವರನ್ನು ಸಂತೋಷಪಡಿಸಿದರು.


ಯೆಹೋವ ದೇವರು ಚೀಯೋನನ್ನು ಸಂತೈಸೇ ಸಂತೈಸುವರು. ಅವರು ಅದರ ಹಾಳಾದ ಸ್ಥಳಗಳನ್ನು ಕರುಣೆಯಿಂದ ನೋಡುವರು. ಅದರ ಮರುಭೂಮಿಯನ್ನು ಏದೆನ್ ಹಾಗೆಯೂ, ಹಾಳು ಪ್ರದೇಶವನ್ನು ಯೆಹೋವ ದೇವರ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ, ಉಲ್ಲಾಸವೂ, ಉಪಕಾರ ಸ್ತುತಿಯೂ, ಇಂಪಾದ ಸ್ವರವೂ ಕಂಡು ಬರುವುವು.


ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಯೆಹೋಷಾಫಾಟನು, ಪರಿಶುದ್ಧತ್ವದ ವೈಭವದಿಂದ ಯೆಹೋವ ದೇವರಿಗೆ ಹಾಡುವಂತೆ ಸಂಗೀತಗಾರರನ್ನು ನೇಮಿಸಿದನು. ಅವರು ಸೈನ್ಯದ ಮುಂದೆ ಹೋಗುತ್ತಾ, “ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂದು ಹಾಡುವಂತೆ ನೇಮಿಸಿದನು.


ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ಇದಲ್ಲದೆ ಯೆಹೂದದ ಪಟ್ಟಣಗಳಿಂದಲೂ, ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ, ಬೆನ್ಯಾಮೀನನ ದೇಶದಿಂದಲೂ, ಬಯಲಿನಿಂದಲೂ, ಬೆಟ್ಟಗಳಿಂದಲೂ, ದಕ್ಷಿಣದಿಂದಲೂ ದಹನಬಲಿಗಳನ್ನೂ, ಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ, ಧೂಪವನ್ನೂ ತರುವರು. ಸ್ತೋತ್ರದ ಅರ್ಪಣೆಗಳನ್ನು ಯೆಹೋವ ದೇವರ ಆಲಯಕ್ಕೆ ತರುವರು.


ಅವುಗಳೊಳಗಿಂದ ಕೃತಜ್ಞತಾಸ್ತುತಿಯೂ, ಹರ್ಷಧ್ವನಿಯೂ ಹೊರಡುವುದು. ಅವರನ್ನು ಹೆಚ್ಚು ಮಾಡುವೆನು. ಅವರು ಕೊಂಚವಾಗಿರರು, ಅವರನ್ನು ಘನಪಡಿಸುವೆನು. ಮತ್ತು ಅವರು ತಿರಸ್ಕಾರಕ್ಕೆ ಒಳಗಾಗುವುದಿಲ್ಲ.


ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು, ಪತ್ರಗಳನ್ನು ಬರೆದು ಮುದ್ರೆಹಾಕಿ, ಸಾಕ್ಷಿಗಳನ್ನು ಇಟ್ಟುಕೊಳ್ಳುವರು. ಏಕೆಂದರೆ ನಾನು ಅವರ ಸೆರೆಯಿಂದ ಹಿಂದಿರುಗುವಂತೆ ಮಾಡುವೆನು,” ಎಂದು ಯೆಹೋವ ದೇವರು ನುಡಿಯುತ್ತಾರೆ.


ಯೆಹೋವ ದೇವರು ಒಳ್ಳೆಯವರು. ಇಕ್ಕಟ್ಟಿನ ದಿವಸದಲ್ಲಿ ಆಶ್ರಯದಾತರಾಗಿದ್ದಾರೆ. ತಮ್ಮಲ್ಲಿ ನಂಬಿಕೆ ಇಡುವವರನ್ನು ಅವರು ಪರಿಪಾಲಿಸುತ್ತಾರೆ.


ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯನ್ನು ನಮಗೆ ತೋರಿಸಿರಿ. ನಿಮ್ಮ ರಕ್ಷಣೆಯನ್ನು ನಮಗೆ ಕೊಡಿರಿ.


ನಿಮ್ಮ ಬಾಗಿಲುಗಳ ಅಗುಳಿಗಳನ್ನು ಬಲಗೊಳಿಸಿ, ದೇವರು ನಿಮ್ಮ ಜನರನ್ನು ಆಶೀರ್ವದಿಸುತ್ತಾರೆ.


ನಿನ್ನ ಕಾವಲುಗಾರರು ಧ್ವನಿಯನ್ನೆತ್ತುವರು. ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು. ಏಕೆಂದರೆ ಯೆಹೋವ ದೇವರು ಚೀಯೋನನ್ನು ತಿರುಗಿ ತರುವಾಗ, ಅವರು ಅದನ್ನು ತಮ್ಮ ಕಣ್ಣಿನಿಂದಲೇ ಕಾಣುವರು.


ನಿಮಗೆ ದೊರೆಯುವೆನು. ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಿಂದಲೂ, ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನು. ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿದೆನೋ, ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.”


ಏಕೆಂದರೆ, ದಿನಗಳು ಬರುವವು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ನನ್ನ ಜನರಾದ ಇಸ್ರಾಯೇಲ್ ಹಾಗು ಯೆಹೂದದ ಸೆರೆಯವರನ್ನು ತಿರುಗಿ ಬರಮಾಡುತ್ತೇನೆ. ಆಗ ನಾನು ಅವರ ಪಿತೃಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ. ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು,’ ಎಂದು ಯೆಹೋವ ದೇವರು ಹೇಳುತ್ತಾರೆ.”


ನನ್ನ ಜನರಾದ ಇಸ್ರಾಯೇಲರನ್ನು ಸೆರೆಯಿಂದ ತಿರುಗಿ ಬರಮಾಡುವೆನು. “ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು. ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು