Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:26 - ಕನ್ನಡ ಸಮಕಾಲಿಕ ಅನುವಾದ

26 ಆಗ ಮಾತ್ರ ನಾನು ಯಾಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ. ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ, ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೆನು. ನಾನು ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೇನು. ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವರನ್ನು ತ್ಯಜಿಸಬಹುದೇನೋ! ಯಾಕೋಬನ ಸಂತಾನದವರನ್ನು ತ್ಯಜಿಸಿ ದಾವೀದನ ವಂಶದವರು ಅಬ್ರಹಾಮ, ಇಸಾಕ ಮತ್ತು ಯಾಕೋಬರ ಸಂತತಿಯವರನ್ನು ಆಳದಂತೆ ಮಾಡಬಹುದೇನೋ! ಆದರೆ ದಾವೀದನು ನನ್ನ ಸೇವಕ. ನಾನು ಅವರಿಗೆ ಕರುಣೆ ತೋರೇ ತೋರುವೆನು; ಅವರಿಗೆ ಒಳ್ಳೆಯದಾಗುವಂತೆ ಮಾಡೇ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:26
17 ತಿಳಿವುಗಳ ಹೋಲಿಕೆ  

ಹಾಗೆಯೇ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ, ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ, ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು, ಇಸ್ರಾಯೇಲ್ ವಂಶವನ್ನು ನಾನು ನಿರಾಕರಿಸಿ ಬಿಡಲು ಸಾಧ್ಯ,” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಯಾಕೋಬ್ಯರನ್ನು ಕರುಣಿಸುವರು. ಇಸ್ರಾಯೇಲರನ್ನು ಪುನಃ ಆಯ್ದುಕೊಳ್ಳುವರು. ಅವರನ್ನು ಅವರ ಸ್ವಂತ ದೇಶದಲ್ಲಿ ಸೇರಿಸುವರು. ಪರದೇಶದವರು ಅವರೊಂದಿಗೆ ಕೂಡಿಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ನಾನು ದೇಶದಲ್ಲಿ ಆಕೆಯನ್ನು ನನಗಾಗಿ ಬಿತ್ತಿಕೊಳ್ಳುವೆನು. ‘ನನ್ನ ಪ್ರಿಯರಲ್ಲ’ ಎಂದು ಕರೆದವರಿಗೆ, ನಾನು ನನ್ನ ಪ್ರೀತಿಯನ್ನು ತೋರಿಸುವೆನು. ನಾನು, ‘ನೀವು ನನ್ನ ಜನರಲ್ಲ’ ಎಂದು ಹೇಳಿದವರನ್ನು, ‘ನೀವು ನನ್ನ ಜನರು,’ ಎಂದು ಹೇಳುವೆನು. ಅವರು, ‘ನೀವು ನಮ್ಮ ದೇವರು’ ” ಎಂದು ಹೇಳುವರು.


ಆದರೆ ನಾನು ಯೆಹೂದದ ಮನೆತನದವರನ್ನು ಪ್ರೀತಿಸಿ ಅವರನ್ನು ಬಿಲ್ಲುಬಾಣ, ಖಡ್ಗ, ಕಾಳಗ, ಕುದುರೆ ರಾಹುತರು ಇವುಗಳಿಂದಲ್ಲ, ಅವರನ್ನು ಅವರ ದೇವರಾದ ನಾನೇ ಯೆಹೋವ ದೇವರೇ ರಕ್ಷಿಸುವೆನು,” ಎಂದು ಹೇಳಿದರು.


“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪವಿತ್ರ ನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಸಕ್ತನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರುವೆನು.


ಯೆಹೋವ ದೇವರು ಮುಂದುವರೆಸಿ, ‘ಎಫ್ರಾಯೀಮನು ನನಗೆ ಪ್ರಿಯ ಪುತ್ರನಲ್ಲವೇ? ಅವನು ನನಗೆ ಹರ್ಷಗೊಂಡಿರುವ ನನ್ನ ಮಗುವಲ್ಲವೋ? ನಾನು ಅವನಿಗೆ ವಿರೋಧವಾಗಿ ಆಗಾಗ ಮಾತಾಡಿದ್ದರೂ, ಅವನನ್ನು ಇನ್ನು ಬಹಳವಾಗಿ ಜ್ಞಾಪಕ ಮಾಡುತ್ತೇನೆ. ಆದ್ದರಿಂದ ಅವನಿಗೋಸ್ಕರ ನನ್ನ ಹೃದಯ ಮರುಗುತ್ತದಲ್ಲಾ ಅವನನ್ನು ಕನಿಕರಿಸುವೆನು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ನನಗೆ ಬೇಸರವಾದಾಗ ನನ್ನ ಮುಖವನ್ನು ನಿನಗೆ ಕ್ಷಣಮಾತ್ರವೇ ಮರೆಮಾಡಿಕೊಂಡೆನು. ಆದರೆ ಶಾಶ್ವತವಾದ ದಯೆಯಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿದ್ದೇನೆ, ಎಂದು ನಿನ್ನ ವಿಮೋಚಕನಾದ ಯೆಹೋವ ದೇವರು ಹೇಳುತ್ತಾರೆ.


ದೇವರು ತಾವು ಎಲ್ಲರಿಗೂ ಕರುಣೆ ತೋರಿಸುವುದಕ್ಕಾಗಿ ಎಲ್ಲರನ್ನೂ ಅವಿಧೇಯತೆಯಲ್ಲಿ ಕಟ್ಟಿಹಾಕಿರುತ್ತಾರೆ.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


“ನಾನು ಯೆಹೂದ ವಂಶವನ್ನು ಬಲಪಡಿಸಿ, ಯೋಸೇಫ ಗೋತ್ರವನ್ನು ರಕ್ಷಿಸುವೆನು. ಅವರನ್ನು ಕನಿಕರಿಸುವುದರಿಂದ ಅವರನ್ನು ತಿರುಗಿ ಬರಮಾಡುವೆನು. ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಇರುವರು. ಏಕೆಂದರೆ ನಾನೇ ಅವರ ದೇವರಾದ ಯೆಹೋವ ದೇವರಾಗಿದ್ದು, ಅವರಿಗೆ ಉತ್ತರಕೊಡುವೆನು.


ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ದೇವಾಲಯದ ಸೇವಕರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಉಳಿದ ಇಸ್ರಾಯೇಲರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ, ಬಾಬಿಲೋನಿಗೆ ಸೆರೆಯಾಗಿ ಹೋಗಿ, ಅನಂತರ ಬಂಧನದಿಂದ ಬಿಡುಗಡೆಯಾಗಿ ಯೆರೂಸಲೇಮಿಗೂ, ಯೆಹೂದಕ್ಕೂ, ತಮ್ಮ ತಮ್ಮ ಪಟ್ಟಣಗಳಿಗೂ


ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು. “ ‘ಭ್ರಷ್ಟಳಾದ ಇಸ್ರಾಯೇಲೇ, ತಿರುಗಿಕೋ,’ ಎಂದು ಯೆಹೋವ ದೇವರು ಕರೆಯುತ್ತಾರೆ. ‘ನಾನು ನನ್ನ ಕೋಪವನ್ನು ನಿಮ್ಮ ಮೇಲೆ ಬೀಳ ಮಾಡುವುದಿಲ್ಲ. ಏಕೆಂದರೆ ನಾನು ಕರುಣಾಸಾಗರನು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಾನು ಎಂದೆಂದಿಗೂ ಕೋಪವಿಟ್ಟುಕೊಳ್ಳುವುದಿಲ್ಲ.


“ ‘ಯೆಹೋವ ದೇವರಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ, ಎಂದು ಜನರು ಆಡಿಕೊಳ್ಳುತ್ತಿದ್ದಾರೆ.’ ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರಲ್ಲವೇ?


ಯೆಹೋವ ದೇವರು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡವರ ಹಾಗಿದ್ದೆವು.


ಇದು ಯೆಹೋವ ದೇವರಾದ ನನ್ನ ನುಡಿ, ಯೆಹೋವ ದೇವರು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದವರು. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದವರು. ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ಕೆರಳಿಸುವವರು, ಸೇನಾಧೀಶ್ವರ ಯೆಹೋವ ದೇವರು ಎಂಬ ನಾಮಧೇಯದಿಂದ ಪ್ರಸಿದ್ಧರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು