Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:4 - ಕನ್ನಡ ಸಮಕಾಲಿಕ ಅನುವಾದ

4 ದಿಬ್ಬಗಳಿಂದಲೂ ಖಡ್ಗದಿಂದಲೂ ಕೆಡವಿರುವ ಈ ಪಟ್ಟಣದ ಮನೆಗಳ ವಿಷಯವಾಗಿವೂ ಯೆಹೂದದ ಅರಸರ ಅರಮನೆಗಳ ವಿಷಯವಾಗಿಯೂ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಿಬ್ಬಗಳಿಗೂ ಮತ್ತು ಕತ್ತಿಗಳಿಗೂ ಅಡ್ಡವಾಗಿ ಗೋಡೆಯನ್ನು ಕಟ್ಟಲು ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ, ಯೆಹೂದದ ಅರಸರ ಉಪ್ಪರಿಗೆಗಳ ವಿಷಯವಾಗಿಯೂ ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮುತ್ತಿಗೆಗೂ ಕತ್ತಿಗೂ ತುತ್ತಾಗಲಿರುವ ಈ ಊರಿನವರ ಮನೆಗಳ ವಿಷಯವಾಗಿ ಮತ್ತು ಜುದೇಯದ ಅರಸರ ಉಪ್ಪರಿಗೆಗಳ ವಿಷಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ಆದ ನನ್ನ ನುಡಿ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದಿಬ್ಬಗಳಿಗೂ ಕತ್ತಿಗಳಿಗೂ [ಅಡ್ಡವಾಗಿ ಗೋಡೆಯನ್ನು ಕಟ್ಟಲು] ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ ಯೆಹೂದದ ಅರಸರ ಉಪ್ಪರಿಗೆಗಳ ವಿಷಯವಾಗಿಯೂ ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಜೆರುಸಲೇಮಿನಲ್ಲಿನ ಮನೆಗಳ ಬಗ್ಗೆಯೂ ಮತ್ತು ಯೆಹೂದದ ರಾಜರ ಅರಮನೆಗಳ ಬಗ್ಗೆಯೂ ಯೆಹೋವನು ಹೀಗೆ ಹೇಳುತ್ತಾನೆ. ವೈರಿಗಳು ಆ ಮನೆಗಳನ್ನು ಕೆಡವಿಬಿಡುತ್ತಾರೆ. ವೈರಿಗಳು ನಗರದ ಕೋಟೆಗೋಡೆಗಳ ತುದಿಯವರೆಗೂ ಇಳಿಜಾರಾದ ಗೋಡೆಗಳನ್ನು ಕಟ್ಟುತ್ತಾರೆ. ವೈರಿಗಳು ಖಡ್ಗ ಹಿಡಿದು ಈ ನಗರದ ಜನರೊಂದಿಗೆ ಕಾದಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:4
11 ತಿಳಿವುಗಳ ಹೋಲಿಕೆ  

ಅವರ ಅರಸನನ್ನು ಧಿಕ್ಕರಿಸುವರು; ಪ್ರಧಾನರು ಅವರನ್ನು ಪರಿಹಾಸ್ಯ ಮಾಡುವರು; ಕೋಟೆಗಳಿಗೆಲ್ಲಾ ಕುಚೋದ್ಯ ಮಾಡುವರು; ಮಣ್ಣಿನ ದಿನ್ನೆಗಳನ್ನು ಮಾಡಿ, ಅವುಗಳನ್ನು ಹಿಡಿಯುವರು.


ಆ ನಕ್ಷೆಯ ಸುತ್ತಲು ದಿಬ್ಬ ಹಾಕಿ, ಒಡ್ಡು ಕಟ್ಟಿ, ಪಾಳೆಯಗಳನ್ನು ಮಾಡಿ, ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ, ಅದನ್ನು ಮುತ್ತಿಗೆ ಹಾಕು.


“ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ. ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರ ಕೈಯಲ್ಲಿ ಖಡ್ಗ, ಕ್ಷಾಮ, ವ್ಯಾಧಿಗಳ ಮೂಲಕವಾಗಿ ಒಪ್ಪಿಸಲಾಗಿದೆ. ನೀನು ಹೇಳಿದ್ದು ಉಂಟಾಯಿತು. ಇಗೋ, ನೀನು ಅದನ್ನು ನೋಡುತ್ತೀ.


ಅವನ ಬಲಗೈಯಲ್ಲಿ ಯೆರೂಸಲೇಮಿಗಾಗಿ ಶಕುನವು ಇತ್ತು. ಅಲ್ಲಿ ಅವನು ಬಡಿಯುವ ಆಯುಧಗಳನ್ನಿಟ್ಟು, ಬಾಯಿಬಿಟ್ಟು ಸಂಹಾರ ಧ್ವನಿಗೈದು, ಆರ್ಭಟವಿಟ್ಟು ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ದಿಬ್ಬ ಹಾಕಿ, ಒಡ್ಡು ಕಟ್ಟಿದ್ದು ಸೂಚನೆಯಾಗಿದೆ.


ಅವನು ಪ್ರಧಾನ ಭೂಮಿಯಲ್ಲಿನ ನಿನ್ನ ಪುತ್ರಿಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಗುರಾಣಿಯನ್ನು ಎತ್ತುವನು.


ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉಲ್ಲಾಸದಿಂದ ಕೂಡಿದ್ದ ಮನೆಗಳೂ ಲವಲವಿಕೆಯಿಂದ ತುಂಬಿದ್ದ ನಗರಗಳೂ ಶೂನ್ಯವಾಗಿವೆ.


ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.


ಏಕೆಂದರೆ, ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಚೀಯೋನ್ ಸುತ್ತಲಿರುವ ಮರಗಳನ್ನು ಕಡಿಯಿರಿ. ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣವು. ಅವಳಲ್ಲಿ ಬರೀ ದಬ್ಬಾಳಿಕೆಯೇ ತುಂಬಿದೆ.


ಕರ್ತದೇವರು ತನ್ನ ಬಲಿಪೀಠವನ್ನು ತಳ್ಳಿಬಿಟ್ಟಿದ್ದಾರೆ. ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯ ಪಡಿಸಿದ್ದಾನೆ. ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ, ಅವರು ಯೆಹೋವ ದೇವರು ಆಲಯದಲ್ಲಿ ಶಬ್ದ ಮಾಡಿದ್ದಾರೆ.


ತಿನ್ನತಕ್ಕ ಹಣ್ಣು ಕೊಡುವುದಿಲ್ಲ ಎಂದು ನೀವು ತಿಳಿದ ಮರಗಳನ್ನು ಮಾತ್ರ ಕಡಿದು ಹಾಕಬಹುದು. ಅವುಗಳಿಂದ ಯುದ್ಧ ಯಂತ್ರಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣ ಬೀಳುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.


ಯೆರೂಸಲೇಮಿನ ಮನೆಗಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ನೀವು ಮನೆಗಳನ್ನು ಒಡೆದುಹಾಕುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು