ಯೆರೆಮೀಯ 33:5 - ಕನ್ನಡ ಸಮಕಾಲಿಕ ಅನುವಾದ5 ಅವರು ಕಸ್ದೀಯರ ಸಂಗಡ ಯುದ್ಧ ಮಾಡುವುದಕ್ಕೂ ನಾನು ನನ್ನ ಕೋಪದಲ್ಲಿಯೂ, ‘ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವುದಕ್ಕೂ ಬರುತ್ತಾರೆ. ಏಕೆಂದರೆ ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅವರ ಸಮಸ್ತ ದುಷ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಈ ಊರಿನವರು ಕಸ್ದೀಯರನ್ನು ಪ್ರತಿಭಟಿಸುವುದಕ್ಕೆ ಹೊರಟರೆ ಏನು? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರು; ಇವರ ಅಧರ್ಮವನ್ನು ಕಂಡು ಈ ಪಟ್ಟಣಕ್ಕೆ ವಿಮುಖನಾಗಿ ಕೋಪ ರೋಷಭರಿತನಾದ ನಾನೇ ಇವರನ್ನು ಹತಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಈ ಊರಿನವರು ಬಾಬಿಲೋನಿಯರ ವಿರುದ್ಧ ಕದನಕ್ಕೆ ಹೊರಟರೆ ಏನು ಪ್ರಯೋಜನ? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರಷ್ಟೆ. ಇವರ ಅಧರ್ಮದ ನಿಮಿತ್ತ ಈ ನಗರಕ್ಕೆ ವಿಮುಖವಾಗಿ, ಕಡುಕೋಪಾವೇಶನಾಗಿ ನಾನೇ ಇವರನ್ನು ಸದೆಬಡಿಯುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಈ ಊರಿನವರು ಕಸ್ದೀಯರನ್ನು ಪ್ರತಿಭಟಿಸುವದಕ್ಕೆ ಹೊರಟರೆ ಏನು? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರು; ಇವರ ಅಧರ್ಮವನ್ನು ಕಂಡು ಈ ಪಟ್ಟಣಕ್ಕೆ ವಿಮುಖನಾಗಿ ಕೋಪರೋಷಭರಿತನಾದ ನಾನೇ ಇವರನ್ನು ಹತಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “‘ಜೆರುಸಲೇಮಿನ ಜನರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾರೆ. ನಾನು ಅವರ ಮೇಲೆ ಕೋಪಗೊಂಡಿದ್ದೇನೆ; ಅವರಿಗೆ ವಿರುದ್ಧವಾಗಿದ್ದೇನೆ. ನಾನು ಅಲ್ಲಿ ಬಹಳ ಜನರನ್ನು ಕೊಂದುಹಾಕುವೆನು. ಬಾಬಿಲೋನಿನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡಲು ಬರುವುದು. ಜೆರುಸಲೇಮಿನ ಮನೆಗಳಲ್ಲಿ ಅನೇಕಾನೇಕ ಮೃತದೇಹಗಳು ಕಣ್ಣಿಗೆ ಬೀಳುವವು. ಅಧ್ಯಾಯವನ್ನು ನೋಡಿ |