Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ತಮ್ಮ ದಾಸದಾಸಿಯರನ್ನು ಬಿಡುಗಡೆ ಮಾಡುವುದಾಗಿ ಒಪ್ಪಿಕೊಂಡರು. ಇನ್ನು ಮುಂದೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಳ್ಳುವುದಿಲ್ಲ ಎಂದು ಅವರು ಒಪ್ಪಿದರು ಮತ್ತು ಅವರನ್ನು ಬಿಡುಗಡೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ತಾವು ತಮ್ಮ ತಮ್ಮ ದಾಸ, ದಾಸಿಯರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ ಎಂದು ಒಡಂಬಡಿಕೆಗೆ ಒಪ್ಪಿಕೊಂಡ ಸಕಲ ಪ್ರಧಾನರೂ ಮತ್ತು ಸಮಸ್ತ ಪ್ರಜೆಗಳೂ ಅದರಂತೆ ನಡೆದು ಅವರನ್ನು ವಿಮೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತಮ್ಮ ತಮ್ಮ ಹೆಣ್ಣುಗಂಡು ಜೀತದಾರರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಜೀತಮಾಡಿಸಿಕೊಳ್ಳುವುದಿಲ್ಲ ಎಂಬ ಈ ಒಪ್ಪಂದಕ್ಕೆ ಸಮ್ಮತಿಸಿದ್ದ ಎಲ್ಲ ಅಧಿಕಾರಿಗಳೂ ಸಮಸ್ತ ಪ್ರಜೆಗಳೂ ಅದರಂತೆ ನಡೆದು ಜೀತದಾರರನ್ನು ಬಿಡುಗಡೆಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ತಾವು ತಮ್ಮ ತಮ್ಮ ದಾಸದಾಸಿಯರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವದಿಲ್ಲ ಎಂದು ಒಡಂಬಡಿಕೆಗೆ ಒಪ್ಪಿಕೊಂಡ ಸಕಲ ಪ್ರಧಾನರೂ ಸಮಸ್ತ ಪ್ರಜೆಗಳೂ ಅದರಂತೆ ನಡೆದು ಅವರನ್ನು ವಿಮೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ಯೆಹೂದದ ಸಮಸ್ತ ಮುಖಂಡರು ಮತ್ತು ಎಲ್ಲಾ ಜನರು ತಮ್ಮ ದಾಸದಾಸಿಯರನ್ನು ಬಿಡುಗಡೆ ಮಾಡುವುದಾಗಿಯೂ ಅವರಿಂದ ಮುಂದೆ ಕೆಲಸ ಮಾಡಿಸುವದಿಲ್ಲ ಎಂಬುದಾಗಿಯೂ ಒಪ್ಪಿಕೊಂಡರು. ಆದ್ದರಿಂದ ಎಲ್ಲಾ ಗುಲಾಮರನ್ನು ಬಿಡುಗಡೆ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:10
12 ತಿಳಿವುಗಳ ಹೋಲಿಕೆ  

ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ, “ಈ ಮನುಷ್ಯನು ಮರಣದಂಡನೆಗೆ ತಕ್ಕವನಲ್ಲ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ,” ಎಂದರು.


ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿದಾಗ, ಅರಸನ ಅರಮನೆಯಿಂದ ಯೆಹೋವ ದೇವರ ಆಲಯಕ್ಕೆ ಬಂದು, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಕುಳಿತುಕೊಂಡರು.


ಏಕೆಂದರೆ, ಯೋಹಾನನು ನೀತಿವಂತನು ಮತ್ತು ಪವಿತ್ರ ಮನುಷ್ಯನು ಎಂದು ತಿಳಿದು ಹೆರೋದನು ಭಯಪಟ್ಟು ಅವನನ್ನು ಸುರಕ್ಷಿತವಾಗಿಟ್ಟಿದ್ದನು. ಯೋಹಾನನು ಹೇಳಿದ್ದನ್ನು ಹೆರೋದನು ಕೇಳಿದಾಗಲೆಲ್ಲಾ ಅವನಿಗೆ ಗಲಿಬಿಲಿಯಾಗುತ್ತಿತ್ತು. ಆದರೂ ಅವನ ಮಾತನ್ನು ಕೇಳಲು ಇಷ್ಟಪಡುತ್ತಿದ್ದನು.


ಆಗ ಆ ಪ್ರಧಾನರು ಅರಸನಿಗೆ, “ಈ ಮನುಷ್ಯನು ಸಾಯಬೇಕು; ಇವನು ಅವರ ಸಂಗಡ ಇಂಥಾ ಮಾತುಗಳನ್ನು ಆಡಿ, ಈ ಪಟ್ಟಣದಲ್ಲಿ ಉಳಿದ ಎಲ್ಲಾ ಸೈನಿಕರನ್ನೂ, ಎಲ್ಲಾ ಜನರನ್ನೂ ಎದೆಗುಂದುವಂತೆ ಮಾಡುತ್ತಿದ್ದಾನೆ. ಈ ಮನುಷ್ಯನು ಈ ಜನರ ಕ್ಷೇಮವನ್ನಲ್ಲ, ಅವರ ಹಾನಿಯನ್ನೇ ಹಾರೈಸುತ್ತಾನೆ,” ಎಂದು ಹೇಳಿದರು.


ಅಲ್ಲಿ ಲೇಖಕ ಎಲೀಷಾಮನು, ಶೆಮಾಯನ ಮಗ ದೆಲಾಯನು, ಅಕ್ಬೋರನ ಮಗ ಎಲ್ನಾಥಾನನು, ಶಾಫಾನನ ಮಗ ಗೆಮರೀಯನು, ಹನನ್ಯನ ಮಗ ಚಿದ್ಕೀಯನು ಹೀಗೆ ರಾಜ್ಯಾಧಿಕಾರಿಗಳೆಲ್ಲರೂ ಕುಳಿತುಕೊಂಡಿದ್ದರು.


ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಆದರೆ ನಂತರ ಅವರು ತಮ್ಮ ಮನಸ್ಸನ್ನು ಬದಲಾಯಿಸಿದರು ಮತ್ತು ಅವರು ಬಿಡುಗಡೆ ಮಾಡಿದ ಗುಲಾಮರನ್ನು ಮರಳಿ ತೆಗೆದುಕೊಂಡು ಅವರನ್ನು ಮತ್ತೆ ಗುಲಾಮರನ್ನಾಗಿ ಮಾಡಿದರು.


ಯೆಹೂದದ ಪ್ರಧಾನರನ್ನೂ, ಯೆರೂಸಲೇಮಿನ ಪ್ರಧಾನರನ್ನೂ, ಕಂಚುಕಿಯರನ್ನೂ, ಯಾಜಕರನ್ನೂ, ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ,


“ನೀನು ಹಿಬ್ರಿಯ ದಾಸನನ್ನು ಕೊಂಡುಕೊಂಡರೆ, ಅವನು ಆರು ವರ್ಷ ನಿನಗೆ ಸೇವೆಮಾಡಬೇಕು. ಏಳನೆಯ ವರ್ಷದಲ್ಲಿ ಅವನು ಏನೂ ಕೊಡದೆ ಬಿಡುಗಡೆಯಾಗಿ ಹೋಗಲಿ.


ಐವತ್ತನೆಯ ವರ್ಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೆಯ ವರ್ಷದ ವಾರ್ಷಿಕೋತ್ಸವವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಆಸ್ತಿಗೂ, ಅವನವನ ಕುಟುಂಬಕ್ಕೂ, ಹಿಂದಿರುಗಿ ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು