Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:13 - ಕನ್ನಡ ಸಮಕಾಲಿಕ ಅನುವಾದ

13 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ದಾಸರ ದೇಶದೊಳಗಿಂದ ಹೊರಗೆ ತಂದ ದಿವಸದಲ್ಲಿ ಅವರ ಸಂಗಡ ಒಡಂಬಡಿಕೆ ಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪೂರ್ವಿಕರನ್ನು ನಾನು ಅಲ್ಲಿಂದ ಕರೆತಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಇಸ್ರಯೇಲರ ದೇವರಾದ ಸರ್ವೇಶ್ವರನ ವಾಣಿ ಇದು - ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮ ಪೂರ್ವಜರನ್ನು ನಾನು ಅಲ್ಲಿಂದ ಕರೆದುತಂದಾಗ ನಾನು ಅವರೊಡನೆ ಒಂದು ಒಪ್ಪಂದಮಾಡಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪಿತೃಗಳನ್ನು ನಾನು ಅಲ್ಲಿಂದ ಕರತಂದಾಗ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆರೆಮೀಯನೇ, ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: “ನಾನು ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮ ಪೂರ್ವಿಕರನ್ನು ಅಲ್ಲಿಂದ ಹೊರತಂದೆನು. ನಾನು ಹಾಗೆ ಮಾಡಿದಾಗ ಅವರ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:13
24 ತಿಳಿವುಗಳ ಹೋಲಿಕೆ  

ಅವರು ಒಬ್ಬ ಪ್ರವಾದಿಯನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದರು. ಅವನು ಅವರಿಗೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, “ನೀವು ದಾಸತ್ವದಲ್ಲಿದ್ದ ನಿಮ್ಮನ್ನು ನಾನು ಈಜಿಪ್ಟಿನಿಂದ ಬರಮಾಡಿದೆನು.


ಏಕೆಂದರೆ ನಮ್ಮ ದೇವರಾದ ಯೆಹೋವ ದೇವರು ತಾವೇ ನಮ್ಮನ್ನೂ ನಮ್ಮ ಪಿತೃಗಳನ್ನೂ ದಾಸತ್ವದ ಮನೆಯಾದ ಈಜಿಪ್ಟ್ ದೇಶದಿಂದ ಬರಮಾಡಿ, ನಮ್ಮ ಕಣ್ಣುಗಳ ಮುಂದೆ ಆ ಅದ್ಭುತ ಸೂಚಕಕಾರ್ಯಗಳನ್ನು ಮಾಡಿ, ನಾವು ನಡೆದ ಎಲ್ಲಾ ಮಾರ್ಗಗಳಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದವರು.


ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು ಈಜಿಪ್ಟ್ ದೇಶದಿಂದ ಕರೆದು ತಂದಾಗ, ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ, ಆ ನನ್ನ ಒಡಂಬಡಿಕೆಯನ್ನು ಅವರು ಮೀರಿ ನಡೆದರು,” ಎಂದು ಯೆಹೋವ ದೇವರು ಹೇಳುತ್ತಾರೆ.


ನೀನೇ ಸಮೀಪಕ್ಕೆ ಹೋಗಿ ನಮ್ಮ ದೇವರಾದ ಯೆಹೋವ ದೇವರು ಹೇಳುವುದನ್ನೆಲ್ಲಾ ಕೇಳಿ, ನಮ್ಮ ದೇವರಾದ ಯೆಹೋವ ದೇವರು ನಿನಗೆ ಹೇಳಿದ್ದನ್ನೆಲ್ಲಾ ನಮಗೆ ಹೇಳು. ಆಗ ನಾವು ಕೇಳಿ ಅದರಂತೆ ಮಾಡುತ್ತೇವೆ,” ಎಂದು ಹೇಳಿದಿರಿ.


ಮೋಶೆಯು ಬಂದು ಯೆಹೋವ ದೇವರ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲಾ ಒಂದೇ ಸ್ವರದಿಂದ, “ಯೆಹೋವ ದೇವರು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ,” ಎಂದು ಉತ್ತರಕೊಟ್ಟರು.


ಏಕೆಂದರೆ ನಾನು ನಿಮ್ಮ ತಂದೆಗಳಿಗೆ, “ನನ್ನ ಮಾತನ್ನು ಕೇಳಿ,” ಎಂದು ಖಂಡಿತವಾಗಿ ಹೇಳಿದೆನು. ಅವರನ್ನು ಈಜಿಪ್ಟ್ ದೇಶದೊಳಗಿಂದ ಮೇಲೆ ಬರಮಾಡಿದ ದಿವಸ ಮೊದಲುಗೊಂಡು ಇಂದಿನವರೆಗೂ ಆಜ್ಞಾಪಿಸುತ್ತಾ ಬಂದಿದ್ದೇನೆ.


ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಈಜಿಪ್ಟ್ ದೇಶದಿಂದ ನಿಮ್ಮ ಪೂರ್ವಜರನ್ನು ನಾನು ಬರಮಾಡಿದಾಗ, ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ವಿಧಿಗಳನ್ನೆಲ್ಲಾ ಕೈಗೊಂಡರೆ, ನನ್ನ ಪ್ರಜೆಯಾಗುವಿರಿ; ನಾನು ನಿಮ್ಮ ದೇವರಾಗಿರುವೆನು.


ಏಕೆಂದರೆ, ನಾನು ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ದಿವಸದಲ್ಲಿ, ದಹನಬಲಿಗಳ ಮತ್ತು ಬಲಿಗಳ ವಿಷಯ ನಾನು ಅವರ ಸಂಗಡ ಮಾತನಾಡಲಿಲ್ಲ; ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.


ಯೆಹೋವ ದೇವರು ಹೋರೇಬಿನಲ್ಲಿ ಇಸ್ರಾಯೇಲರ ಸಂಗಡ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ದೇಶದಲ್ಲಿ ಇಸ್ರಾಯೇಲರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ಮಾತುಗಳು ಇವೇ:


ನೀನು ಈಜಿಪ್ಟಿನಲ್ಲಿ ದಾಸನಾಗಿದ್ದೆ ಎಂದೂ, ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಲ್ಲಿಂದ ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದ್ದರಿಂದ ಈ ಕಾರ್ಯಗಳನ್ನೆಲ್ಲಾ ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.


ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಆಚರಿಸಬೇಕು.


ನೀವು ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಿರಿ ಎಂದೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಿರಿ. ಆದ್ದರಿಂದ ನಾನು ಈ ಹೊತ್ತು ಇದನ್ನು ನಿಮಗೆ ಆಜ್ಞಾಪಿಸುತ್ತೇನೆ.


ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆ ಮಾಡಿ, ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಯೆಹೋವ ದೇವರ ಆಶ್ರಯದಿಂದ ಅಂಥವರು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ, ಅಂಥವರನ್ನು ಕಲ್ಲು ಎಸೆದು ಕೊಲ್ಲಬೇಕು.


ನಿಮ್ಮ ಹೃದಯವು ಗರ್ವಗೊಂಡು, ನಿಮ್ಮನ್ನು ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ ನಿಮ್ಮ ದೇವರಾದ ಯೆಹೋವ ದೇವರನ್ನೇ ಮರೆತುಬಿಡಬೇಡಿರಿ.


ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದಲೂ, ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುವುದರಿಂದಲೂ, ಯೆಹೋವ ದೇವರು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿಮ್ಮನ್ನು ಗುಲಾಮತನದಿಂದಲೂ, ಈಜಿಪ್ಟಿನ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದರು.


ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ಯೆಹೋವ ದೇವರನ್ನು ಮರೆಯದ ಹಾಗೆ ನೋಡಿಕೊಳ್ಳಿರಿ.


“ನಿನ್ನನ್ನು ಈಜಿಪ್ಟ್ ದೇಶದಿಂದಲೂ, ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.


“ನಿನ್ನನ್ನು ಈಜಿಪ್ಟ್ ದೇಶದಿಂದಲೂ ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.


“ಮುಂದೆ ಬರುವ ಕಾಲದಲ್ಲಿ ನಿಮ್ಮ ಪುತ್ರರು ನಿಮಗೆ, ‘ಇದರ ಅರ್ಥವೇನು?’ ಎಂದು ಕೇಳುವಾಗ, ನೀವು ಅವರಿಗೆ, ‘ಯೆಹೋವ ದೇವರು ತಮ್ಮ ಭುಜಬಲದಿಂದ ನಮ್ಮನ್ನು ಈಜಿಪ್ಟಿನ ದಾಸತ್ವದೊಳಗಿಂದ ಹೊರಗೆ ಬರಮಾಡಿದ್ದಾರೆ.


ಆಗ ಮೋಶೆಯು ಜನರಿಗೆ, “ನೀವು ಈಜಿಪ್ಟಿನ ದಾಸತ್ವದಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಅಲ್ಲಿಂದ ಹೊರಗೆ ಬರಮಾಡಿದ್ದಾರೆ. ಹೀಗಿರುವುದರಿಂದ ಈ ದಿನ ನೀವು ಹುಳಿರೊಟ್ಟಿಯನ್ನು ತಿನ್ನಬಾರದು.


ಆದ್ದರಿಂದ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾಗಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು