Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:14 - ಕನ್ನಡ ಸಮಕಾಲಿಕ ಅನುವಾದ

14 ‘ಏಳು ವರ್ಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಜೀತದಾಳಾಗಿದ್ದ ತನ್ನ ಸಹೋದರನಾದ ಹಿಬ್ರಿಯನನ್ನು ಕಳುಹಿಸಬೇಕೆಂದೂ, ಅವನು ನಿನಗೆ ಆರು ವರ್ಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕು,’ ಎಂದು ಹೇಳಿದೆನು. ಆದರೆ ನಿಮ್ಮ ಪಿತೃಗಳು ನನ್ನ ಮಾತನ್ನು ಕೇಳಲಿಲ್ಲ. ಅವರು ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ‘ನಿಮ್ಮಲ್ಲಿ ಪ್ರತಿಯೊಬ್ಬನು ನಿಮಗೆ ಆರು ವರ್ಷಗಳ ಕಾಲ ದಾಸನಾಗಿದ್ದು ನಿಮಗೆ ಸೇವೆ ಮಾಡಿದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಬೇಕು’ ಎಂದು ವಿಧಿಸಿ, ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಒಬ್ಬ ಹಿಬ್ರಿಯನು ತನ್ನನ್ನೇ ನಿಮಗೆ ಮಾರಿಕೊಂಡು ಆರು ವರ್ಷ ನಿಮ್ಮ ಜೀತಗಾರನಾಗಿದ್ದರೆ ಅಂಥ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿ ಎಂದು ವಿಧಿಸಿದ್ದೆ. ಆದರೆ ನಿಮ್ಮ ಪೂರ್ವಜರು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತನ್ನನ್ನು ನಿಮಗೆ ಮಾರಿಕೊಂಡು ಆರು ವರುಷ ನಿಮ್ಮ ದಾಸನಾಗಿದ್ದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರುಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿರಿ ಎಂದು ವಿಧಿಸಿ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ; ಆದರೆ ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ನಿಮ್ಮ ಪೂರ್ವಿಕರಿಗೆ ‘ಪ್ರತಿ ಏಳು ವರ್ಷದ ಕೊನೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಬೇಕು. ತನ್ನನ್ನು ನಿಮಗೆ ಮಾರಿಕೊಂಡ ಇಬ್ರಿಯ ಸಹೋದರ ನಿಮ್ಮಲ್ಲಿದ್ದರೆ ಅವನು ಆರು ವರ್ಷ ಸೇವೆಮಾಡಿದ ನಂತರ ಅವನನ್ನು ಬಿಡುಗಡೆ ಮಾಡಬೇಕು’ ಎಂದು ಹೇಳಿದ್ದೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ; ನನ್ನ ಕಡೆಗೆ ಗಮನ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:14
28 ತಿಳಿವುಗಳ ಹೋಲಿಕೆ  

ನಿಮ್ಮ ಸಹೋದರನಾದ ಹಿಬ್ರಿಯನಾಗಲಿ, ಒಬ್ಬ ಹಿಬ್ರಿಯ ಸ್ತ್ರೀಯಾಗಲಿ ನಿಮಗೆ ಗುಲಾಮರಾಗಿ, ಆರು ವರ್ಷ ನಿಮಗೆ ಮಾರಾಟವಾಗಿದ್ದರೆ ಮತ್ತು ಸೇವೆ ಮಾಡಿದ್ದರೆ, ಏಳನೆಯ ವರ್ಷದಲ್ಲಿ ಅವರನ್ನು ಬಿಡುಗಡೆ ಮಾಡಿ ಕಳುಹಿಸಿಬಿಡಿರಿ.


ಆದರೆ ಸೊಲೊಮೋನನು ಇಸ್ರಾಯೇಲರನ್ನು ದಾಸರಾಗಿ ಮಾಡಲಿಲ್ಲ. ಅವರು ಯುದ್ಧಭಟರಾಗಿಯೂ, ಅವನ ಅಧಿಪತಿಯಾಗಿಯೂ, ತನ್ನ ಕೈಕೆಳಗಿರುವ ಅವನ ಪ್ರಧಾನರಾಗಿಯೂ, ಅಧಿಕಾರಿಗಳಾಗಿಯೂ, ತನ್ನ ರಥಗಳ ಮೇಲೆಯೂ, ರಾಹುತರ ಮೇಲೆಯೂ ಅಧಿಪತಿಗಳಾಗಿಯೂ ಇದ್ದರು.


ನಾನು ಎಂಥಾ ದುರವಸ್ಥೆಯುಳ್ಳ ಮನುಷ್ಯನು! ನನ್ನನ್ನು ಈ ಮರಣಕರವಾದ ದೇಹದಿಂದ ಯಾರು ಬಿಡಿಸಬಲ್ಲರು?


ಬಡವರನ್ನು ಬೆಳ್ಳಿಗೂ ದರಿದ್ರರನ್ನು ಕೆರಗಳ ಜೋಡಿಗೂ ಕೊಂಡುಕೊಳ್ಳುವೆವು, ಹೌದು ಗೋಧಿಯ ಕಸವನ್ನು ಸಹ ಮಾರೋಣ.”


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ನಿರಪರಾಧಿಗಳನ್ನು ಬೆಳ್ಳಿಗೆ ಮತ್ತು ಬಡವರನ್ನು ಒಂದು ಜೋಡಿ ಕೆರಗಳಿಗೆ ಮಾರಿದರು.


“ ‘ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ಕಣ್ಣಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ. ಅವರು ಈಜಿಪ್ಟಿನ ವಿಗ್ರಹಗಳನ್ನು ಬಿಡಲಿಲ್ಲ. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಈಜಿಪ್ಟ್ ದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.


“ನೀನು ಅವರಿಗೆ ನ್ಯಾಯತೀರಿಸುವೆಯೋ? ಮನುಷ್ಯಪುತ್ರನೇ, ನೀನು ಅವರಿಗೆ ನ್ಯಾಯತೀರಿಸುವೆಯೋ? ಹಾಗಾದರೆ ಅವರ ಪಿತೃಗಳ ಅಸಹ್ಯವಾದವುಗಳನ್ನು ಅವರಿಗೆ ತಿಳಿಸು.


“ಏಕೆಂದರೆ ಇಸ್ರಾಯೇಲರೂ, ಯೆಹೂದದ ಮಕ್ಕಳೂ ತಮ್ಮ ಚಿಕ್ಕಂದಿನಿಂದ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾತ್ರ ಮಾಡಿದ್ದಾರೆ. ಇಸ್ರಾಯೇಲರೂ ತಮ್ಮ ಕೈಕೆಲಸಗಳಿಂದ ನನಗೆ ಕೋಪೋದ್ರೇಕವನ್ನೂ ಎಬ್ಬಿಸಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ.


“ನಾನು ಆಯ್ದುಕೊಳ್ಳುವ ಉಪವಾಸವು ಅನ್ಯಾಯದ ಸರಪಣಿಯನ್ನು ಬಿಚ್ಚುವುದೂ, ಭಾರವಾದ ಹೊರೆಯನ್ನು ಬಿಚ್ಚುವುದೂ, ದಬ್ಬಾಳಿಕೆಯಾದವರನ್ನು ಬಿಡಿಸುವುದೂ, ನೊಗಗಳನ್ನೆಲ್ಲಾ ಮುರಿದುಹಾಕುವುದೂ, ಇವೇ ಅಲ್ಲವೋ?


ಯೆಹೋವ ದೇವರು ಹೇಳುವುದೇನೆಂದರೆ, “ನಾನು ಬಿಟ್ಟುಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೆನು? ನಿಮ್ಮ ಪಾಪಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ. ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.


ನೀವು ಅನೇಕ ವರ್ಷ ಅವರನ್ನು ತಾಳಿಕೊಂಡಿರಿ. ನಿಮ್ಮ ಪ್ರವಾದಿಗಳ ಮುಖಾಂತರ ನಿಮ್ಮ ಆತ್ಮನಿಂದ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಕಿವಿಗೊಡದೆ ಇದ್ದುದರಿಂದ ನೀವು ಅವರನ್ನು ಅನ್ಯದೇಶದವರ ಕೈಯಲ್ಲಿ ಒಪ್ಪಿಸಿದಿರಿ.


ಆದರೆ ಯೆಹೋವ ದೇವರ ಕೋಪವು ತಮ್ಮ ಜನರಿಗೆ ವಿರೋಧವಾಗಿ ಏಳುವವರೆಗೂ, ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ, ದೇವರ ವಾಕ್ಯಗಳನ್ನು ತಿರಸ್ಕರಿಸಿ, ದೇವರ ಪ್ರವಾದಿಗಳಿಗೆ ಅಪಹಾಸ್ಯ ಮಾಡಿದರು.


ಈಗ ನಿಮಗೆ ದಾಸರೂ, ದಾಸಿಯರೂ ಆಗಿರುವ ಹಾಗೆ ಯೆಹೂದದ ಮತ್ತು ಯೆರೂಸಲೇಮಿನ ಮಕ್ಕಳನ್ನು ನಿಮ್ಮ ವಶಮಾಡಬೇಕೆಂದು ಇದ್ದೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧಗಳು ಇಲ್ಲವೋ?


ತನ್ನ ಹೆಂಡತಿ ಈಜೆಬೆಲಳಿಂದ ಪ್ರೇರೇಪಿತನಾಗಿ, ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿ ಬಿಟ್ಟ ಅಹಾಬನ ಹಾಗೆ ದುಷ್ಟನು ಇನ್ನೊಬ್ಬನು ಇರಲಿಲ್ಲ.


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.


ಐವತ್ತನೆಯ ವರ್ಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೆಯ ವರ್ಷದ ವಾರ್ಷಿಕೋತ್ಸವವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಆಸ್ತಿಗೂ, ಅವನವನ ಕುಟುಂಬಕ್ಕೂ, ಹಿಂದಿರುಗಿ ಹೋಗಬೇಕು.


ಪ್ರತಿ ಏಳು ವರ್ಷಗಳ ಅಂತ್ಯದಲ್ಲಿ ಎಲ್ಲರ ಸಾಲಗಳನ್ನೂ ಮನ್ನಾಮಾಡಬೇಕು.


“ಸಾಲ ಬಿಡುಗಡೆಯ ವರ್ಷವಾದ ಏಳನೆಯ ವರ್ಷವು ಸಮೀಪವಾಯಿತು,” ಎಂಬ ದುಷ್ಟ ಆಲೋಚನೆ ನಿಮ್ಮ ಹೃದಯದಲ್ಲಿ ಹುಟ್ಟಿ, ನಿಮ್ಮ ಬಡ ಸಹೋದರನ ಮೇಲೆ ಕಠಿಣವಾಗಿ, ನೀವು ಅವನಿಗೆ ಏನೂ ಕೊಡದೆ ಇರಬೇಡಿರಿ. ಅವನು ನಿಮಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆ ಇಟ್ಟಾಗ, ನಿಮ್ಮಲ್ಲಿ ಅಪರಾಧ ಉಂಟಾಗದಂತೆ ನೋಡಿಕೊಳ್ಳಿರಿ.


ಏಕೆಂದರೆ ನಾನು ನಿಮ್ಮ ತಂದೆಗಳಿಗೆ, “ನನ್ನ ಮಾತನ್ನು ಕೇಳಿ,” ಎಂದು ಖಂಡಿತವಾಗಿ ಹೇಳಿದೆನು. ಅವರನ್ನು ಈಜಿಪ್ಟ್ ದೇಶದೊಳಗಿಂದ ಮೇಲೆ ಬರಮಾಡಿದ ದಿವಸ ಮೊದಲುಗೊಂಡು ಇಂದಿನವರೆಗೂ ಆಜ್ಞಾಪಿಸುತ್ತಾ ಬಂದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು