Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:17 - ಕನ್ನಡ ಸಮಕಾಲಿಕ ಅನುವಾದ

17 “ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದಕಾರಣ ಯೆಹೋವನು, “ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದಕಾರಣ ಸರ್ವೇಶ್ವರನಾದ ನಾನು ಹೇಳುವುದು ಇದು - ನೀವು ನನ್ನ ಮಾತನ್ನು ಕೇಳಲಿಲ್ಲ, ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ. ಇಗೋ ಸರ್ವೇಶ್ವರನಾದ ನನ್ನ ನುಡಿ: ಖಡ್ಗ-ವ್ಯಾಧಿ-ಕ್ಷಾಮ ಇವುಗಳಿಗೆ ನೀವು ಗುರಿ ಆಗುವಂತೆ ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ. ಲೋಕದ ಸಮಸ್ತ ರಾಜ್ಯಗಳ ಕಣ್ಣಿಗೆ ನೀವು ಭಯಾಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಅದಕ್ಕಾಗಿ ಯೆಹೋವನು ಹೀಗೆನ್ನುತ್ತಾನೆ: ‘ನೀವು ನನ್ನ ಆಜ್ಞಾಪಾಲನೆಯನ್ನು ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸ್ವಾತಂತ್ರ್ಯವನ್ನು ಕೊಟ್ಟಿಲ್ಲ. ನೀವು ಒಡಂಬಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸ್ವಾತಂತ್ರ್ಯವನ್ನು ಕೊಡುತ್ತೇನೆ.” ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಧಿ ಮತ್ತು ಹಸಿವು ಇವುಗಳಿಗೆ ನಿಮ್ಮನ್ನು ಕೊಲ್ಲುವ “ಸ್ವಾತಂತ್ರ್ಯವನ್ನು” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:17
26 ತಿಳಿವುಗಳ ಹೋಲಿಕೆ  

ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.


ಮೋಸಹೋಗಬೇಡಿರಿ, ದೇವರು ಪರಿಹಾಸ್ಯಕ್ಕೆ ಒಳಗಾಗುವವರಲ್ಲ. ಏಕೆಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.


ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ಹಿಂಸಿಸಿ, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ಭಯಕ್ಕೂ ಪರಿಹಾಸ್ಯಕ್ಕೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.


ಯೆಹೋವ ದೇವರು ನಿಮ್ಮನ್ನು ನಿಮ್ಮ ಶತ್ರುಗಳ ಮುಂದೆ ಸೋಲಿಸಿಬಿಡುವರು. ನೀವು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ದಾಳಿಮಾಡಲು ಹೊರಟು, ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗುವಿರಿ. ಭೂಮಿಯ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವವು.


ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


ಆಗ ಅರಸನು ಆಜ್ಞಾಪಿಸಲಾಗಿ, ದಾನಿಯೇಲನ ಮೇಲೆ ತಪ್ಪು ಹೊರಿಸಿದ್ದ ಮನುಷ್ಯರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗುಹೆಯಲ್ಲಿ ಹಾಕಿದರು. ಅವರು ಗುಹೆಯ ತಳವನ್ನು ಮುಟ್ಟುವುದಕ್ಕೆ ಮೊದಲೇ ಸಿಂಹಗಳು ಅವರ ಮೇಲೆ ಹಾರಿ ಬಂದು, ಅವರ ಎಲುಬುಗಳನ್ನೆಲ್ಲಾ ತುಂಡುತುಂಡಾಗಿ ಮುರಿದುಹಾಕಿದವು.


“ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ. ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರ ಕೈಯಲ್ಲಿ ಖಡ್ಗ, ಕ್ಷಾಮ, ವ್ಯಾಧಿಗಳ ಮೂಲಕವಾಗಿ ಒಪ್ಪಿಸಲಾಗಿದೆ. ನೀನು ಹೇಳಿದ್ದು ಉಂಟಾಯಿತು. ಇಗೋ, ನೀನು ಅದನ್ನು ನೋಡುತ್ತೀ.


ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯು ಯೆರೂಸಲೇಮಿನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಂತೆ ಮಾಡುವೆನು.


ಅವರು ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲುಮರದಲ್ಲಿ ಅವನನ್ನು ನೇತುಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯವರೆಗೂ ಎಲ್ಲಾ ಜನಾಂಗಗಳಲ್ಲಿ ಚದರಿಸುವರು. ಅಲ್ಲಿ ನೀವೂ ನಿಮ್ಮ ಪಿತೃಗಳು ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಆರಾಧಿಸುವಿರಿ.


ಅವರು ನಿಮ್ಮ ಭಕ್ತರ ಮತ್ತು ನಿಮ್ಮ ಪ್ರವಾದಿಗಳ ರಕ್ತವನ್ನು ಸುರಿಸಿದ್ದಾರೆ. ನೀವು ಅವರಿಗೆ ಕುಡಿಯುವುದಕ್ಕೆ ರಕ್ತವನ್ನೇ ಕೊಟ್ಟಿರುವಿರಿ. ಅವರು ಅದಕ್ಕೆ ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ಯೆರೂಸಲೇಮು ಘೋರ ಪಾಪಮಾಡಿದೆ. ಆದ್ದರಿಂದ ಅವಳು ಅಶುದ್ಧಳಾಗಿದ್ದಾಳೆ. ಅವಳನ್ನು ಸನ್ಮಾನಿಸಿದವರೆಲ್ಲರೂ, ಅವಳನ್ನು ಹೀನೈಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ. ಹೌದು, ಅವಳು ನರಳುತ್ತಾ ಹಿಂದಕ್ಕೆ ತಿರುಗುತ್ತಾಳೆ.


“ ‘ಹೀಗಾದರೂ ಈಗ ಅದು ಖಡ್ಗದಿಂದಲೂ ಬರದಿಂದಲೂ ವ್ಯಾಧಿಯಿಂದಲೂ ಬಾಬಿಲೋನಿನ ಅರಸನ ಕೈವಶವಾಗಿದೆ,’ ಎಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ:


ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’


ಅವರು ನಿನಗೆ, ‘ನಾವು ಎಲ್ಲಿ ಹೋಗಬೇಕು?’ ಎಂದು ಹೇಳಿದರೆ, ನೀನು ಅವರಿಗೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಮರಣಕ್ಕೆ ಇರುವವರು ಮರಣಕ್ಕೆ; ಖಡ್ಗಕ್ಕೆ ಇರುವವರು ಖಡ್ಗಕ್ಕೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ; ಸೆರೆಗೆ ಇರುವವರು ಸೆರೆಗೆ,’ ಎಂದು ಹೇಳಬೇಕು.


ಅವನು ತನ್ನ ಸಹೋದರನಿಗೆ ಮಾಡುವುದಕ್ಕೆ ಯೋಚಿಸಿದ ಪ್ರಕಾರವೇ ಅವನಿಗೆ ಶಿಕ್ಷೆ ಕೊಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.


ಗುಲಾಮರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಅರಸನಾದ ಚಿದ್ಕೀಯನು ಯೆರೂಸಲೇಮಿನ ಎಲ್ಲಾ ಜನರೊಂದಿಗೆ ಒಡಂಬಡಿಕೆಯನ್ನು ಮಾಡಿದ ನಂತರ ಯೆಹೋವ ದೇವರಿಂದ ಯೆರೆಮೀಯನಿಗೆ ಈ ಮಾತು ಬಂದಿತು.


“ಯೆಹೋವ ದೇವರು ಹೀಗೆನ್ನುತ್ತಾರೆ: ‘ನಗರದಲ್ಲಿ ನಿಲ್ಲುವವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವರು. ನಗರವನ್ನು ಬಿಟ್ಟು ಹೋಗಿ, ಬಾಬಿಲೋನಿಯರನ್ನು ಮೊರೆಹೋಗುವವರು ಬದುಕುವರು. ತಮ್ಮ ಪ್ರಾಣದೊಂದಿಗೆ ತಪ್ಪಿಸಿಕೊಂಡವರು, ಬದುಕುವರು.


ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ಅವರಲ್ಲಿ ಖಡ್ಗವನ್ನೂ ಕ್ಷಾಮವನ್ನೂ ವ್ಯಾಧಿಯನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿರುವುದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರಗಳ ಹಾಗೆ ಮಾಡುವೆನು.


ಆದರೂ ಓ ಸಾರ್ವಭೌಮ ಯೆಹೋವ ದೇವರೇ, ನೀನು ನನಗೆ, ‘ಹೊಲವನ್ನು ಹಣಕ್ಕೆ ಕೊಂಡುಕೋ, ಸಾಕ್ಷಿಗಳನ್ನು ಇಡು,’ ಎಂದು ಹೇಳಿದ್ದೀ. ಆದರೂ ಪಟ್ಟಣವು ಬಾಬಿಲೋನಿಯರ ಕೈಯಲ್ಲಿ ಒಪ್ಪಿಸಲಾಗಿದೆಯಲ್ಲಾ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು