Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:19 - ಕನ್ನಡ ಸಮಕಾಲಿಕ ಅನುವಾದ

19 ಯೆಹೂದದ ಪ್ರಧಾನರನ್ನೂ, ಯೆರೂಸಲೇಮಿನ ಪ್ರಧಾನರನ್ನೂ, ಕಂಚುಕಿಯರನ್ನೂ, ಯಾಜಕರನ್ನೂ, ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ಒಡಂಬಡಿಕೆಯನ್ನು ಮೀರಿದ ಯೆಹೂದದ ಪ್ರಧಾನರು, ಯೆರೂಸಲೇಮಿನ ಪ್ರಧಾನರು, ಕಂಚುಕಿಗಳು, ಯಾಜಕರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಜುದೇಯದ ಹಾಗು ಜೆರುಸಲೇಮಿನ ರಾಜ್ಯಾಧಿಕಾರಿಗಳು, ಕಂಚುಕಿಗಳು, ಯಾಜಕರು, ಸೀಳಿದ ಕರುವಿನ ಹೋಳುಗ಼ಳ ನಡುವೆ ಹಾದು ನನ್ನ ಮುಂದೆ ಒಪ್ಪಂದಮಾಡಿದರು. ಆದರೆ ಆ ಒಪ್ಪಂದಕ್ಕೆ ತದ್ವಿರುದ್ಧವಾಗಿ ನಡೆದಿದ್ದಾರೆ ನಾಡಿನ ಎಲ್ಲ ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ಒಡಂಬಡಿಕೆಯನ್ನು ಮೀರಿದ ಯೆಹೂದದ ಪ್ರಧಾನರು, ಯೆರೂಸಲೇವಿುನ ಪ್ರಧಾನರು, ಕಂಚುಕಿಗಳು, ಯಾಜಕರು, ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೂದದ ಮತ್ತು ಜೆರುಸಲೇಮಿನ ನಾಯಕರು, ಪ್ರಮುಖ ಅಧಿಕಾರಿಗಳು, ಯಾಜಕರು ಮತ್ತು ದೇಶದ ಸಕಲ ಜನರು ಇವರೆಲ್ಲ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಾಗ ಕರುವಿನ ಶರೀರದ ಎರಡು ತುಂಡುಗಳ ಮಧ್ಯದಿಂದ ಹಾದುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:19
14 ತಿಳಿವುಗಳ ಹೋಲಿಕೆ  

ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ತಮ್ಮ ದಾಸದಾಸಿಯರನ್ನು ಬಿಡುಗಡೆ ಮಾಡುವುದಾಗಿ ಒಪ್ಪಿಕೊಂಡರು. ಇನ್ನು ಮುಂದೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಳ್ಳುವುದಿಲ್ಲ ಎಂದು ಅವರು ಒಪ್ಪಿದರು ಮತ್ತು ಅವರನ್ನು ಬಿಡುಗಡೆ ಮಾಡಿದರು.


ಅವರು ನಮಗೂ, ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾವು ಹೇಳಿದ ಮಾತುಗಳನ್ನು ನೆರವೇರಿಸಿ, ನಮ್ಮ ಮೇಲೆ ದೊಡ್ಡ ವಿನಾಶ ಬರುವ ಹಾಗೆ ಮಾಡಿದ್ದಾರೆ. ಯೆರೂಸಲೇಮಿನಲ್ಲಿ ನಡೆದ ಹಾಗೆ ಇಡೀ ಆಕಾಶದ ಕೆಳಗೆ ಎಲ್ಲೂ ನಡೆಯಲಿಲ್ಲ.


ನಿಮ್ಮ ಹೆಸರಿನಲ್ಲಿ ನಮ್ಮ ಅರಸರಿಗೂ, ನಮ್ಮ ರಾಜಕುಮಾರರಿಗೂ, ನಮ್ಮ ಪೂರ್ವಜರಿಗೂ ದೇಶದ ಎಲ್ಲಾ ಜನರಿಗೂ ಮಾತನಾಡಿದ ನಿಮ್ಮ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡಲಿಲ್ಲ.


ಆಗ ಅರಸನು ಮನೆಯಲ್ಲಿರುವ ಕಂಚುಕಿಯಾದ ಕೂಷ್ಯನಾದ ಎಬೆದ್ಮೆಲೆಕನು ಅವರು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದರೆಂದು ಕೇಳಿದಾಗ, ಅರಸನು ಬೆನ್ಯಾಮೀನನ ಬಾಗಿಲಲ್ಲಿ ಕೂತಿರಲಾಗಿ,


ಅರಸನಾದ ಯೆಕೊನ್ಯನೂ ರಾಜಮಾತೆಯೂ ಕಂಚುಕಿಗಳೂ ಯೆಹೂದದ ಯೆರೂಸಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ ಈ ಪತ್ರವನ್ನು ಬರೆದನು.


ನೆಬೂಕದ್ನೆಚ್ಚರನು ಯೆಹೋಯಾಖೀನನನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದನು. ಅರಸನ ತಾಯಿಯನ್ನೂ, ಅರಸನ ಹೆಂಡತಿಯರನ್ನೂ, ಅವನ ಅಧಿಕಾರಿಗಳನ್ನೂ, ದೇಶದ ಪ್ರತಿಷ್ಠಿತರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಯಾಗಿ ಒಯ್ದನು.


ಆಗ ಯೆಹೂದದ ಅರಸನಾದ ಯೆಹೋಯಾಖೀನನೂ, ಅವನ ತಾಯಿಯೂ, ಅವನ ಸೇವಕರೂ, ಅವನ ಪ್ರಧಾನರೂ, ಅವನ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಶರಣಾದರು. ಬಾಬಿಲೋನಿನ ಅರಸನು ತನ್ನ ಆಳಿಕೆಯ ಎಂಟನೆಯ ವರ್ಷದಲ್ಲಿ ಯೆಹೋಯಾಕೀನನನ್ನು ಸೆರೆಹಿಡಿದನು.


ಯೆಹೋವ ದೇವರೇ, ನಮ್ಮ ಅರಸರಿಗೂ ನಮ್ಮ ರಾಜಕುಮಾರರಿಗೂ, ನಮ್ಮ ಪೂರ್ವಜರಿಗೂ, ನಮಗೂ ನಾಚಿಕೆಯಾಗಿದೆ. ಏಕೆಂದರೆ ನಿಮಗೆ ವಿರುದ್ಧವಾಗಿ ನಾವು ಪಾಪಮಾಡಿದ್ದೇವೆ.


ಇದಾದ ಮೇಲೆ ಹೊತ್ತು ಮುಳುಗಿ ಕತ್ತಲಾಗುತ್ತಿರಲು, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು.


ಆ ಬಾಬಿಲೋನಿಯದ ಅರಸನು ಅಲ್ಲೇ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಯೆಹೂದದ ಎಲ್ಲಾ ಶ್ರೇಷ್ಠರನ್ನೂ ರಿಬ್ಲದಲ್ಲಿ ಕೊಲ್ಲಿಸಿದನು.


ಅದಕ್ಕೆ ಅವನು, “ಸಾರ್ವಭೌಮ ಯೆಹೋವ ದೇವರೇ ನಾನು ಅದನ್ನು ನನ್ನ ಸೊತ್ತಾಗಿ ಹೊಂದುವೆನೆಂದು ಯಾವುದರಿಂದ ತಿಳಿದುಕೊಳ್ಳಲಿ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು