ಯೆರೆಮೀಯ 34:2 - ಕನ್ನಡ ಸಮಕಾಲಿಕ ಅನುವಾದ2 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅದನ್ನು ಬೆಂಕಿಯಿಂದ ಸುಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, ‘ಯೆಹೋವನ ಮಾತನ್ನು ಆಲಿಸು, ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಇಸ್ರಯೇಲರ ದೇವರಾದ ಸರ್ವೇಶ್ವರನಾದ ನನ್ನ ನುಡಿ ಇದು: ನೀನು ಜುದೇಯದ ಅರಸ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆಂದು ಹೇಳು - ‘ಸರ್ವೇಶ್ವರನ ಮಾತನ್ನು ಆಲಿಸು: ಇಗೋ, ನಾನು ಈ ನಗರವನ್ನು ಬಾಬಿಲೋನಿನ ಅರಸನ ಕೈವಶಮಾಡುವೆನು. ಅವನು ಇದನ್ನು ಬೆಂಕಿಯಿಂದ ಸುಟ್ಟುಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು - ಯೆಹೋವನ ಮಾತನ್ನು ಆಲಿಸು - ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆ ಸಂದೇಶ ಹೀಗಿತ್ತು: “ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: ಯೆರೆಮೀಯನೇ, ಯೆಹೂದದ ರಾಜನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಈ ಸಂದೇಶವನ್ನು ತಿಳಿಸು. ‘ಚಿದ್ಕೀಯನೇ, ಯೆಹೋವನು ಹೀಗೆ ಹೇಳುತ್ತಾನೆ: ಅತಿ ಶೀಬ್ರದಲ್ಲಿ ನಾನು ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ; ಅವನು ಅದನ್ನು ಸುಟ್ಟುಬಿಡುತ್ತಾನೆ. ಅಧ್ಯಾಯವನ್ನು ನೋಡಿ |