ಯೆರೆಮೀಯ 34:9 - ಕನ್ನಡ ಸಮಕಾಲಿಕ ಅನುವಾದ9 ಪ್ರತಿಯೊಬ್ಬರೂ ತಮ್ಮ ಗಂಡು ಮತ್ತು ಹೆಣ್ಣು ಹಿಬ್ರಿಯ ಗುಲಾಮರನ್ನು ಇಬ್ಬರನ್ನೂ ಮುಕ್ತಗೊಳಿಸಬೇಕು. ಯೆಹೂದ್ಯರಾದ ಸಹೋದರ ಸಹೋದರಿಯರನ್ನು ಯಾರೂ ಬಂಧನದಲ್ಲಿ ಇಟ್ಟುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ನಮ್ಮಲ್ಲಿ ಪ್ರತಿಯೊಬ್ಬನು ತನ್ನ ದಾಸ ದಾಸಿಯರೊಳಗೆ ಇಬ್ರಿಯರನ್ನು ಬಿಡುಗಡೆಮಾಡುವನು; ಯಾರೂ ತನ್ನ ಸಹೋದರನಾದ ಯೆಹೂದ್ಯನಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ” ಎಂದು ಅವರಿಗೆ ವಿಮೋಚನೆಯನ್ನು ಪ್ರಕಟಿಸುವ ಒಡಂಬಡಿಕೆಯನ್ನು ಮಾಡಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದರ ಪ್ರಕಾರ ಅವರಲ್ಲಿ ಪ್ರತಿ ಒಬ್ಬನು ತನ್ನ ಜೀತದಾರರಲ್ಲಿ ಹಿಬ್ರಿಯರಾದವರನ್ನು ಬಿಡುಗಡೆಮಾಡಬೇಕಿತ್ತು. ಯೆಹೂದ್ಯರಾದ ಸಹೋದರ ಸಹೋದರಿಯರನ್ನು ಯಾರೂ ಇನ್ನು ಮುಂದೆ ಜೀತದಾರರನ್ನಾಗಿ ಇರಿಸಿಕೊಳ್ಳದೆ ಅವರಿಗೆ ವಿಮೋಚನೆಯನ್ನು ಪ್ರಕಟಿಸಬೇಕೆಂಬುದು ಆ ಒಪ್ಪಂದವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಮ್ಮಲ್ಲಿ ಪ್ರತಿಯೊಬ್ಬನು ತನ್ನ ದಾಸದಾಸಿಯರೊಳಗೆ ಇಬ್ರಿಯರನ್ನು ಬಿಡುಗಡೆಮಾಡುವನು; ಯಾರೂ ತನ್ನ ಸಹೋದರನಾದ ಯೆಹೂದ್ಯನಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವದಿಲ್ಲ ಎಂದು ಅವರಿಗೆ ವಿಮೋಚನೆಯನ್ನು ಪ್ರಕಟಿಸುವ ಒಡಂಬಡಿಕೆಯನ್ನು ಮಾಡಿಕೊಂಡಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಪ್ರತಿಯೊಬ್ಬ ವ್ಯಕ್ತಿಯು ತನ್ನ ಇಬ್ರಿಯ ದಾಸದಾಸಿಯರನ್ನು ಬಿಡುಗಡೆ ಮಾಡಬೇಕಾಗಿತ್ತು. ಯೆಹೂದದ ಕುಲದ ಯಾರನ್ನೂ ಗುಲಾಮರನ್ನಾಗಿ ಇಟ್ಟುಕೊಳ್ಳುವಂತಿರಲಿಲ್ಲ. ಅಧ್ಯಾಯವನ್ನು ನೋಡಿ |
“ಇಸ್ರಾಯೇಲರ ಹಿರಿಯರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಜನರ ಹಿರಿಯರ ಸಹಿತವಾಗಿ ಈಜಿಪ್ಟಿನ ಅರಸನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾಗಿರುವ ಯೆಹೋವ ದೇವರು ನಮಗೆ ಪ್ರತ್ಯಕ್ಷನಾಗಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞಮಾಡಬೇಕಾಗಿದೆ. ಅದಕ್ಕಾಗಿ ನಮ್ಮನ್ನು ಬಿಡು ಎಂದು ಬೇಡಿಕೊಳ್ಳುತ್ತೇವೆ,’ ಎಂದು ಹೇಳಬೇಕು.