Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:1 - ಕನ್ನಡ ಸಮಕಾಲಿಕ ಅನುವಾದ

1 ಯೋಷೀಯನ ಮಗನಾದ ಯೆಹೂದದ ಅರಸ ಯೆಹೋಯಾಕೀಮನ ಕಾಲದಲ್ಲಿ ಯೆರೆಮೀಯನಾದ ನನಗೆ ಯೆಹೋವ ದೇವರಿಂದ ಬಂದ ವಾಕ್ಯ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಕಾಲದಲ್ಲಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೋಷೀಯನ ಮಗನಾದ ಜುದೇಯದ ಅರಸ ಯೆಹೋಯಾಕೀಮನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ಯೆರೆಮೀಯನಾದ ನನಗೆ ದಯಪಾಲಿಸಿದ ವಾಕ್ಯ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಕಾಲದಲ್ಲಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋಯಾಕೀಮನು ಯೆಹೂದವನ್ನು ಆಳುತ್ತಿದ್ದ ಕಾಲದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಯೆಹೋವನ ಸಂದೇಶ ಹೀಗಿತ್ತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:1
14 ತಿಳಿವುಗಳ ಹೋಲಿಕೆ  

ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು.


ಅಲ್ಲದೆ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಕಾಲದ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆ ಹೋಗುವ ತನಕ ಯೆಹೋವ ದೇವರ ವಾಕ್ಯವು ಒದಗುತ್ತಿತ್ತು.


ಯೆಹೋಯಾಕೀಮನು ಬೆಳ್ಳಿಯನ್ನೂ, ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಅವನು ಬೆಳ್ಳಿಯನ್ನೂ, ಬಂಗಾರವನ್ನೂ ನೆಕೋ ಫರೋಹನಿಗೆ ಕೊಡಲು ದೇಶದ ಜನರಿಂದ ಪ್ರತಿಯೊಬ್ಬರ ತೆರಿಗೆಯನ್ನು ಬಲವಂತವಾಗಿ ತೆಗೆದುಕೊಂಡನು.


ಯೆಹೂದದ ಅರಸನಾದ ಯೆಹೋಯಾಕೀಮನ ಆಳಿಕೆಯ ಮೂರನೆಯ ವರ್ಷದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆರೂಸಲೇಮಿಗೆ ಬಂದು ಮುತ್ತಿಗೆಹಾಕಿದನು.


ಈಜಿಪ್ಟನ್ನು ಕುರಿತದ್ದು: ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೇಟೀಸ್ ನದಿಯ ಬಳಿಯಿರುವ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಆ ಸೈನ್ಯದ ಮೇಲೆ ದಾಳಿಮಾಡಿದ್ದರ ವಿಷಯ:


ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ, ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಹಾಳು ಮಾಡುವುದು ಖಂಡಿತ, ಎಂದು ಇದರಲ್ಲಿ ಏಕೆ ಬರೆದಿದ್ದೀ?” ಎಂದು ಹೇಳಿ ನೀನು ಈ ಸುರುಳಿಯನ್ನು ಸುಟ್ಟಿದ್ದೀ.


ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಐದನೆಯ ವರ್ಷದ ಒಂಬತ್ತನೆಯ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ, ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಯೆಹೋವ ದೇವರ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದನು.


ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವ ದೇವರಿಂದ ಈ ವಾಕ್ಯವು ಬಂದಿತು:


ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದೊರೆತನದ ಪ್ರಾರಂಭದಲ್ಲಿ ಈ ವಾಕ್ಯವು ಯೆಹೋವ ದೇವರಿಂದ ಉಂಟಾಯಿತು.


ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ಮಾಡಿ, ಅವನಿಗೆ ಯೆಹೋಯಾಕೀಮನೆಂಬ ಹೆಸರನ್ನಿಟ್ಟನು. ಯೆಹೋವಾಹಾಜನನ್ನು ತೆಗೆದುಕೊಂಡು ಈಜಿಪ್ಟಿಗೆ ಒಯ್ದನು. ಯೆಹೋವಾಹಾಜನು ಅಲ್ಲೇ ಮರಣಹೊಂದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು