ಯೆರೆಮೀಯ 35:4 - ಕನ್ನಡ ಸಮಕಾಲಿಕ ಅನುವಾದ4 ಕರೆದುಕೊಂಡು ಯೆಹೋವ ದೇವರ ಆಲಯಕ್ಕೆ ದ್ವಾರಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ ಹಾನಾನನ ಪುತ್ರರ ಕೊಠಡಿಗೆ ತಂದು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ, ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ ಇರುವ ಕೋಣೆಯೊಳಕ್ಕೆ ಬರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇಗ್ದಲ್ಯನ ಮಗನೂ ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಪದಾಧಿಕಾರಿಗಳ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆಯಿರುವ ಕೋಣೆಯೊಳಕ್ಕೆ ಅವರೆಲ್ಲರನ್ನು ಬರಮಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅನಂತರ ನಾನು ರೇಕಾಬ ವಂಶದವರನ್ನು ಯೆಹೋವನ ಆಲಯದಲ್ಲಿ ಕರೆತಂದೆನು. ನಾವು ಹಾನಾನನ ಮಕ್ಕಳ ಕೋಣೆ ಎಂದು ಕರೆಯಲ್ಪಡುವ ಕೋಣೆಯೊಳಕ್ಕೆ ಹೋದೆವು. ಹಾನಾನನು ಇಗ್ದಲ್ಯನೆಂಬವನ ಮಗನು. ಹಾನಾನನು ದೇವರ ಮನುಷ್ಯ. ಈ ಕೋಣೆಯು ಯೆಹೂದದ ರಾಜಕುಮಾರರ ಕೋಣೆಯ ಪಕ್ಕದಲ್ಲಿತ್ತು. ಇದು ಶಲ್ಲೂಮನ ಮಗನಾದ ಮಾಸೇಯನ ಕೋಣೆಯ ಮೇಲ್ಗಡೆ ಇತ್ತು. ಮಾಸೇಯನು ಆಲಯದ ದ್ವಾರಪಾಲಕನಾಗಿದ್ದನು. ಅಧ್ಯಾಯವನ್ನು ನೋಡಿ |
ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ, ಅವರ ಸೇವೆಗೆ ಯಾಜಕ ವರ್ಗಗಳವರನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ, ಯಾಜಕರ ಮುಂದೆ ಸ್ತುತಿಸುವುದಕ್ಕೂ, ಸೇವೆ ಮಾಡುವುದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ, ಸೇವೆಯ ಬಾಗಿಲಲ್ಲಿ ತಮ್ಮ ವರ್ಗಗಳ ಸರದಿಯ ಪ್ರಕಾರವಾಗಿ ದ್ವಾರಪಾಲಕರನ್ನೂ ನೇಮಿಸಿದನು. ಏಕೆಂದರೆ ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.