Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:11 - ಕನ್ನಡ ಸಮಕಾಲಿಕ ಅನುವಾದ

11 ಶಾಫಾನನ ಮೊಮ್ಮಗನೂ, ಗೆಮರೀಯನ ಮಗನೂ ಆದ ಮೀಕಾಯನು ಸುರುಳಿಯಿಂದ ಓದಲಾದ ಯೆಹೋವ ದೇವರ ವಾಕ್ಯಗಳನ್ನು ಕೇಳಿದನು. ಅಲ್ಲಿಂದ ಅರಮನೆಯಲ್ಲಿದ್ದ ಲೇಖಕನ ಕೊಠಡಿಗೆ ಇಳಿದು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಶಾಫಾನನ ಮೊಮ್ಮಗನೂ ಗೆಮರ್ಯನ ಮಗನೂ ಆದ ಮೀಕಾಯನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನೆಲ್ಲಾ ಕೇಳಿ, ಅರಮನೆಯಲ್ಲಿ ಲೇಖಕನ ಕೋಣೆಗೆ ಇಳಿದುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಶಾಫಾನನ ಮೊಮ್ಮಗನೂ ಗೆಮರ್ಯನ ಮಗನೂ ಆದ ಮೀಕಾಯನು ಸುರುಳಿಯಿಂದ ಓದಲಾದ ಸರ್ವೇಶ್ವರನ ವಾಕ್ಯಗಳನ್ನು ಕೇಳಿದನು. ಅಲ್ಲಿಂದ ಅರಮನೆಯಲ್ಲಿದ್ದ ಲೇಖಕನ ಕೊಠಡಿಗೆ ಇಳಿದುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಶಾಫಾನನ ಮೊಮ್ಮಗನೂ ಗೆಮರ್ಯನ ಮಗನೂ ಆದ ಮೀಕಾಯನು ಸುರಳಿಯಲ್ಲಿನ ಯೆಹೋವನ ಮಾತುಗಳನ್ನೆಲ್ಲಾ ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬಾರೂಕನು ಓದಿದ ಎಲ್ಲಾ ಯೆಹೋವನ ಸಂದೇಶಗಳನ್ನು ಮೀಕಾಯನೆಂಬ ಒಬ್ಬ ಮನುಷ್ಯನು ಕೇಳಿಸಿಕೊಂಡನು. ಮೀಕಾಯನು ಶಾಫಾನನ ಮಗನಾದ ಗೆಮರ್ಯನ ಮಗನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:11
7 ತಿಳಿವುಗಳ ಹೋಲಿಕೆ  

ಆಗ ಬಾರೂಕನು ಪುಸ್ತಕದಿಂದ ಯೆರೆಮೀಯನ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಲೇಖಕನಾಗಿರುವ ಶಾಫಾನನ ಮಗನಾಗಿರುವ ಗೆಮರೀಯನ ಕೊಠಡಿಯಲ್ಲಿ ಮೇಲಿನ ಅಂಗಳದಲ್ಲಿ, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರು ಕೇಳುವಂತೆ ಓದಿ ಹೇಳಿದನು.


ಹಿಲ್ಕೀಯನಿಗೂ, ಶಾಫಾನನ ಮಗನಾದ ಅಹೀಕಾಮನಿಗೂ, ಮೀಕನ ಮಗನಾದ ಅಬ್ದೋನನಿಗೂ, ಕಾರ್ಯದರ್ಶಿಯಾದ ಶಾಫಾನನಿಗೂ, ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ,


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ, ಶಾಫಾನನ ಮೊಮ್ಮಗನೂ, ಅಹೀಕಾಮನ ಮಗನೂ ಆದ ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿದನು.


ಆಗ ಮೀಕಾಯನು ಅವರಿಗೆ ಬಾರೂಕನು ಆ ಪುಸ್ತಕವನ್ನು ಜನರಿಗೆ ಓದಿ ಹೇಳಿದಾಗ, ತಾನು ಕೇಳಿದ ವಾಕ್ಯಗಳನ್ನೆಲ್ಲಾ ತಿಳಿಸಿದನು.


ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಅರಸನು ಕಾರ್ಯದರ್ಶಿಯಾದ ಮೆಷುಲ್ಲಾಮನ ಮಗ, ಅಚಲ್ಯನ ಮಗನಾದ ಶಾಫಾನನನ್ನು ಯೆಹೋವ ದೇವರ ಆಲಯಕ್ಕೆ ಕಳುಹಿಸಿ,


ಇತ್ತ ಯಾಜಕರೂ, ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ, ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು