ಯೆರೆಮೀಯ 36:14 - ಕನ್ನಡ ಸಮಕಾಲಿಕ ಅನುವಾದ14 ಅಧಿಕಾರಿಗಳೆಲ್ಲರು ಸೇರಿ ನೆತನ್ಯನ ಮಗನೂ, ಶೆಲೆಮ್ಯನ ಮೊಮ್ಮಗನೂ, ಕೂಷಿಯ ಮರಿಮಗನೂ ಆದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿದನು. “ನೀನು ಜನರ ಮುಂದೆ ಓದಿದ ಸುರುಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ,” ಎಂದು ಹೇಳಿ ಕಳುಹಿಸಿದರು. ಅಂತೆಯೇ ನೇರೀಯನ ಮಗ ಬಾರೂಕನು ಸುರುಳಿಯನ್ನು ತನ್ನ ಕೈಯಲ್ಲೆ ತೆಗೆದುಕೊಂಡು ಅವರ ಬಳಿಗೆ ಕೂಡಲೇ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸಕಲ ಪ್ರಧಾನರು ಬಾರೂಕನಿಗೆ, “ನೀನು ಜನರ ಮುಂದೆ ಓದಿದ ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಬಾ” ಎಂದು ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಷಿಯ ಮರಿಮಗನೂ ಆದ ಯೆಹೂದಿಯ ಮೂಲಕ ಹೇಳಿ ಕಳುಹಿಸಿದರು. ಕೂಡಲೆ ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅಧಿಕಾರಿಗಳೆಲ್ಲರು ಸೇರಿ, ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಷಿಯ ಮರಿಮಗನೂ ಆದ ಯೆಹೂದಿಯನನ್ನು ಬಾರೂಕನ ಬಳಿಗೆ ಕಳಿಸಿದರು. ‘ನೀನು ಜನರ ಮುಂದೆ ಓದಿದ ಸುರುಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ’ ಎಂದು ಹೇಳಿ ಕಳಿಸಿದರು. ಅಂತೆಯೆ ನೇರೀಯನ ಮಗ ಬಾರೂಕನು ಸುರುಳಿಯನ್ನು ತನ್ನ ಕೈಯಲ್ಲೆ ತೆಗೆದುಕೊಂಡು ಅವರ ಬಳಿಗೆ ಕೂಡಲೇ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಸಕಲ ಪ್ರಧಾನರು ಬಾರೂಕನಿಗೆ - ನೀನು ಜನರ ಮುಂದೆ ಓದಿದ ಸುರಳಿಯನ್ನು ಕೈಯಲ್ಲಿ ತೆಗೆದುಕೊಂಡು ಬಾ ಎಂದು ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಷಿಯ ಮರಿಮಗನೂ ಆದ ಯೆಹೂದಿಯ ಮೂಲಕ ಹೇಳಿಕಳುಹಿಸಿದರು. ಕೂಡಲೆ ನೇರೀಯನ ಮಗನಾದ ಬಾರೂಕನು ಸುರಳಿಯನ್ನು ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ಆ ಅಧಿಕಾರಿಗಳೆಲ್ಲ ಯೆಹೂದಿ ಎಂಬುವನನ್ನು ಬಾರೂಕನಲ್ಲಿಗೆ ಕಳುಹಿಸಿಕೊಟ್ಟರು. ಯೆಹೂದಿಯು ಶೆಲೆಮ್ಯನ ಮಗನಾದ ನೆಥನ್ಯನ ಮಗ. ಶೆಲೆಮ್ಯನು ಕೂಷಿಯ ಮಗ. ಯೆಹೂದಿಯು ಬಾರೂಕನಿಗೆ, “ನೀನು ಓದಿದ ಸುರುಳಿಯನ್ನು ತೆಗೆದುಕೊಂಡು ನನ್ನ ಜೊತೆ ಬಾ” ಎಂದು ಕರೆದನು. ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ತೆಗೆದುಕೊಂಡು ಯೆಹೂದಿಯ ಸಂಗಡ ಆ ಅಧಿಕಾರಿಗಳ ಹತ್ತಿರಕ್ಕೆ ಹೋದನು. ಅಧ್ಯಾಯವನ್ನು ನೋಡಿ |
ಆಗ ಕಾರೇಹನ ಮಗನಾದ ಯೋಹಾನಾನನೂ, ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗ ಗೆದಲ್ಯನನ್ನು ಕೊಂದುಹಾಕಿದ ತರುವಾಯ, ತಪ್ಪಿಸಿಬಿಟ್ಟಿದ್ದ ಉಳಿದ ಜನರೆಲ್ಲರನ್ನು ಎಂದರೆ, ಗಿಬ್ಯೋನನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಕಂಚುಕಿಯರನ್ನೂ ಮಿಚ್ಪದಿಂದ ಕರೆದುಕೊಂಡು ಹೊರಟು,