ಯೆರೆಮೀಯ 36:21 - ಕನ್ನಡ ಸಮಕಾಲಿಕ ಅನುವಾದ21 ಹೀಗೆ ಅರಸನು ಯೆಹೂದಿಯನ್ನು, ಆ ಸುರುಳಿಯನ್ನು ತೆಗೆದುಕೊಂಡು ಬರುವ ಹಾಗೆ ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು. ಯೆಹೂದಿಯು ಅದನ್ನು ಅರಸನಿಗೂ, ಅರಸನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನರಿಗೂ ಓದಿ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಕೂಡಲೆ ಅರಸನು ಸುರುಳಿಯನ್ನು ತರುವುದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವನು ಲೇಖಕ ಎಲೀಷಾಮನ ಕೊಠಡಿಯಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಎಲ್ಲ ರಾಜ್ಯಾಧಿಕಾರಿಗಳ ಮುಂದೆ ಓದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಕೂಡಲೇ ಅರಸನು ಸುರಳಿಯನ್ನು ತರುವದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ತರುವದಕ್ಕೆ ಯೆಹೂದಿಯನ್ನು ಕಳುಹಿಸಿದನು. ಯೆಹೂದಿಯು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಿಂದ ಆ ಸುರುಳಿಯನ್ನು ತಂದನು. ಬಳಿಕ ರಾಜನು ಮತ್ತು ಅವನ ಸುತ್ತಲು ನಿಂತ ಅಧಿಕಾರಿಗಳೆಲ್ಲ ಕೇಳುವಂತೆ ಯೆಹೂದಿಯು ಆ ಸುರಳಿಯನ್ನು ಓದಿದನು. ಅಧ್ಯಾಯವನ್ನು ನೋಡಿ |