ಯೆರೆಮೀಯ 36:30 - ಕನ್ನಡ ಸಮಕಾಲಿಕ ಅನುವಾದ30 ಆದ್ದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: ದಾವೀದನ ಸಿಂಹಾಸನದಲ್ಲಿ ಕುಳಿತುಕೊಳ್ಳುವವನು ಅವನಿಗೆ ಇರುವುದಿಲ್ಲ. ಅವನ ಹೆಣವು ಹಗಲಿನಲ್ಲಿ ಬಿಸಿಲಿಗೂ, ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ಇವನ ಸಂತಾನದಲ್ಲಿ ಯಾರೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ, ರಾತ್ರಿಯ ಚಳಿಗೂ ಈಡಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಈ ಕಾರಣ ಜುದೇಯದ ಅರಸ ಯೆಹೋಯಾಕೀಮನು ಆದ ನಿನ್ನ ವಿರುದ್ಧ ಸರ್ವೇಶ್ವರ ಹೀಗೆನ್ನುತ್ತಾರೆ - ಇವನ ಸಂತಾನದಲ್ಲಿ ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು. ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ ಇರುಳಿನ ಚಳಿಗೂ ಈಡಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ - ಇವನ ಸಂತಾನದಲ್ಲಿ ಯಾವನೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ ರಾತ್ರಿಯ ಚಳಿಗೂ ಈಡಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಇಗೋ ಯೆಹೂದದ ರಾಜನಾದ ಯೆಹೋಯಾಕೀಮನ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: ಯೆಹೋಯಾಕೀಮನ ಸಂತಾನದವರು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳಲಾಗದು. ಯೆಹೋಯಾಕೀಮನು ಸತ್ತರೆ ರಾಜ ಮರ್ಯಾದೆಯಿಂದ ಅವನ ಶವಸಂಸ್ಕಾರ ಮಾಡಲಾಗುವದಿಲ್ಲ. ಅವನ ಶವವನ್ನು ನೆಲದ ಮೇಲೆ ಎಸೆಯಲಾಗುವುದು. ಅವನ ಶವ ಹಗಲಿನ ತಾಪದಲ್ಲಿ ಮತ್ತು ರಾತ್ರಿಯ ಚಳಿಯಲ್ಲಿ ಹೊರಗೆ ಬಿದ್ದಿರುವದು. ಅಧ್ಯಾಯವನ್ನು ನೋಡಿ |