ಯೆರೆಮೀಯ 36:32 - ಕನ್ನಡ ಸಮಕಾಲಿಕ ಅನುವಾದ32 ಆಗ ಯೆರೆಮೀಯನು ಮತ್ತೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗ ಲೇಖಕನಾದ ಬಾರೂಕನಿಗೆ ಕೊಟ್ಟನು. ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಸುರುಳಿಯ ವಾಕ್ಯಗಳನ್ನೆಲ್ಲಾ ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು. ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆಗ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾಗಿರುವ ಲೇಖಕನಾದ ಬಾರೂಕನಿಗೆ ಕೊಡಲು ಅವನು ಅದರಲ್ಲಿ ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲಾ ಮಾತುಗಳನ್ನಲ್ಲದೆ ಇನ್ನು ಇಂತಹ ಅನೇಕ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆಗ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾದ ಲೇಖಕ ಬಾರೂಕನಿಗೆ ಕೊಟ್ಟನು. ಅವನು ಅದರಲ್ಲಿ ಜುದೇಯದ ಅರಸ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲ ಮಾತುಗಳನ್ನು ಬರೆದನು. ಅದು ಮಾತ್ರವಲ್ಲ, ಅಂಥ ಅನೇಕ ಮಾತುಗಳನ್ನೂ ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆಗ ಯೆರೆಮೀಯನು ಇನ್ನೊಂದು ಸುರಳಿಯನ್ನು ತೆಗೆದುಕೊಂಡು ನೇರೀಯನ ಮಗನಾಗಿರುವ ಲೇಖಕನಾದ ಬಾರೂಕನಿಗೆ ಕೊಡಲು ಅವನು ಅದರಲ್ಲಿ ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲಾ ಮಾತುಗಳನ್ನಲ್ಲದೆ ಇನ್ನು ಇಂಥಾ ಅನೇಕ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಅನಂತರ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾದ ಲಿಪಿಕಾರ ಬಾರೂಕನಿಗೆ ಕೊಟ್ಟನು. ರಾಜ ಯೆಹೋಯಾಕೀಮನು ಸುಟ್ಟುಹಾಕಿದ ಸುರುಳಿಯಲ್ಲಿದ್ದ ಸಂದೇಶವನ್ನೇ ಯೆರೆಮೀಯನು ಹೇಳಿದಂತೆಲ್ಲ ಬಾರೂಕನು ಸುರುಳಿಯ ಮೇಲೆ ಬರೆದನು. ಬೇರೆ ಹಲವು ಸಂದೇಶಗಳನ್ನು ಎರಡನೇ ಸುರುಳಿಯಲ್ಲಿ ಸೇರಿಸಲಾಯಿತು. ಅಧ್ಯಾಯವನ್ನು ನೋಡಿ |