ಯೆರೆಮೀಯ 36:6 - ಕನ್ನಡ ಸಮಕಾಲಿಕ ಅನುವಾದ6 ಆದ್ದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ, ನೀನು ಬರೆದು ಸುರುಳಿಯಲ್ಲಿ ಯೆಹೋವ ದೇವರ ಆಲಯದೊಳಗೆ ಉಪವಾಸದ ದಿವಸದಲ್ಲಿ ಯೆಹೋವ ದೇವರ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದುದರಿಂದ ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಈ ಸುರುಳಿಯಲ್ಲಿ ಬರೆದಿರುವ ಸರ್ವೇಶ್ವರನ ವಾಕ್ಯಗಳನ್ನು, ಉಪವಾಸದಿನದಂದು, ಸರ್ವೇಶ್ವರನ ಆಲಯದೊಳಗೆ ಕೂಡಿರುವ ಜನರಿಗೂ ಆಯಾಯ ಊರುಗಳಿಂದ ಬಂದಿರುವ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ಓದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ [ಯೆರೂಸಲೇವಿುನ] ಜನರಿಗೂ ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ನೀನು ಯೆಹೋವನ ಆಲಯಕ್ಕೆ ಉಪವಾಸದ ದಿನ ಹೋಗು ಮತ್ತು ಸುರುಳಿಯಲ್ಲಿ ಬರೆದದ್ದನ್ನು ಜನರ ಮುಂದೆ ಓದು. ನಾನು ಹೇಳುತ್ತಿದ್ದಂತೆಯೇ ನೀನು ಸುರುಳಿಯ ಮೇಲೆ ಬರೆದುಕೊಂಡ ಯೆಹೋವನ ಸಂದೇಶಗಳನ್ನು ಆ ಜನರ ಮುಂದೆ ಓದು. ತಾವು ವಾಸಮಾಡುವ ಸ್ಥಳಗಳಿಂದ ಜೆರುಸಲೇಮಿಗೆ ಬಂದಿರುವ ಎಲ್ಲಾ ಯೆಹೂದ್ಯರ ಮುಂದೆ ಆ ಸಂದೇಶಗಳನ್ನು ಓದು. ಅಧ್ಯಾಯವನ್ನು ನೋಡಿ |
“ಹೀಗಿರುವುದರಿಂದ ಈಗ ಯೆಹೂದದ ಮನುಷ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ. ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ. ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂದಿರುಗಿರಿ. ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ಒಳ್ಳೆಯದಾಗಿ ಮಾಡಿರಿ.