Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:13 - ಕನ್ನಡ ಸಮಕಾಲಿಕ ಅನುವಾದ

13 ಆಗ ಅವನು ಬೆನ್ಯಾಮೀನನ ಬಾಗಿಲಲ್ಲಿ ಇರುವಾಗ, ಅಲ್ಲಿ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನಾದ ಇರೀಯನೆಂಬ ಪಹರೆಯ ನಾಯಕನು ಇದ್ದನು. ಇವನು ಪ್ರವಾದಿಯಾದ ಯೆರೆಮೀಯನನ್ನು, “ನೀನು ಕಸ್ದೀಯರ ಪಕ್ಷಕ್ಕೆ ಸೇರುತ್ತೀ,” ಎಂದು ಹೇಳಿ ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನು ಬೆನ್ಯಾಮೀನಿನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆಯ ವಿಚಾರಕನಾಗಿದ್ದು ಪ್ರವಾದಿಯಾದ ಯೆರೆಮೀಯನನ್ನು ಹಿಡಿದು, “ನೀನು ಕಸ್ದೀಯರಲ್ಲಿ ಮೊರೆಹೋಗಲು ಹೋಗುತ್ತಿದ್ದಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬೆನ್ಯಾಮೀನನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆ ಕುಳಿತಿದ್ದನು. ಅವನು ಪ್ರವಾದಿ ಯೆರೆಮೀಯನನ್ನು, “ನೀನು ಬಾಬಿಲೋನಿಯರನ್ನು ಮರೆಹೋಗಲು ಹೋಗುತ್ತಿರುವೆ,” ಎಂದು ಹೇಳಿ ಅವನನ್ನು ಬಂಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬೆನ್ಯಾಮೀನಿನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆಕೊಡುತ್ತಿದ್ದು ಪ್ರವಾದಿಯಾದ ಆ ಯೆರೆಮೀಯನನ್ನು ಹಿಡಿದು ನೀನು ಕಸ್ದೀಯರನ್ನು ಮರೆಹೊಗಲು ಹೋಗುತ್ತಿದ್ದೀ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಯೆರೆಮೀಯನು ಜೆರುಸಲೇಮಿನ ಬೆನ್ಯಾಮೀನ್ ಹೆಬ್ಬಾಗಿಲಿನ ಹತ್ತಿರ ಹೋದಾಗ ಪಹರೆದಾರರ ಮುಖ್ಯಸ್ಥನು ಅವನನ್ನು ಹಿಡಿದುಕೊಂಡನು. ಆ ಮುಖ್ಯಸ್ಥನ ಹೆಸರು ಇರೀಯ. ಇರೀಯನು ಶೆಲೆಮ್ಯನ ಮಗನು; ಶೆಲೆಮ್ಯನು ಹನನ್ಯನ ಮಗನು. ಮುಖ್ಯಸ್ಥನಾದ ಇರೀಯನು ಯೆರೆಮೀಯನನ್ನು ಹಿಡಿದುಕೊಂಡು, “ಯೆರೆಮೀಯನೇ, ನೀನು ಬಾಬಿಲೋನಿನ ಕಡೆ ಸೇರಿಕೊಳ್ಳುವದಕ್ಕಾಗಿ ನಮ್ಮನ್ನು ಬಿಟ್ಟುಹೋಗುತ್ತಿರುವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:13
20 ತಿಳಿವುಗಳ ಹೋಲಿಕೆ  

ಗೆಬ ಮೊದಲುಗೊಂಡು ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೂ ದೇಶವೆಲ್ಲಾ ಅರಾಬಾದ ಹಾಗೆ ಮಾರ್ಪಡುವುದು. ಯೆರೂಸಲೇಮ್ ತನ್ನ ಸ್ಥಳದಲ್ಲಿ ಬೆನ್ಯಾಮೀನನ ಬಾಗಿಲು ಮೊದಲುಗೊಂಡು, ಮೊದಲನೆಯ ಬಾಗಿಲಿನ ಸ್ಥಳದವರೆಗೂ, ಮೂಲೆ ಬಾಗಿಲಿನವರೆಗೂ, ಹನನೇಲನ ಗೋಪುರ ಮೊದಲುಗೊಂಡು ಅರಸನ ದ್ರಾಕ್ಷಿ ಆಲೆಗಳವರೆಗೂ ಎತ್ತರದಲ್ಲಿ ನಿವಾಸವಾಗುವುದು.


ಆಗ ಅರಸನು ಮನೆಯಲ್ಲಿರುವ ಕಂಚುಕಿಯಾದ ಕೂಷ್ಯನಾದ ಎಬೆದ್ಮೆಲೆಕನು ಅವರು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದರೆಂದು ಕೇಳಿದಾಗ, ಅರಸನು ಬೆನ್ಯಾಮೀನನ ಬಾಗಿಲಲ್ಲಿ ಕೂತಿರಲಾಗಿ,


ಈಗ ಅವರು ನನ್ನ ಮೇಲೆ ಹೊರಿಸುತ್ತಿರುವ ಆಪಾದನೆಗಳನ್ನು ನಿಮ್ಮ ಮುಂದೆ ಅವರು ರುಜುಮಾಡಿ ತೋರಿಸಲಾರರು.


ಆಗ ಅವರು, “ಇವನು ಮೋಶೆಗೂ ದೇವರಿಗೂ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುವುದನ್ನು ನಾವು ಕೇಳಿದ್ದೇವೆ,” ಎಂದು ಕೆಲವರಿಗೆ ಲಂಚಕೊಟ್ಟು ಹೇಳುವಂತೆ ರಹಸ್ಯವಾಗಿ ಮನವೊಲಿಸಿದರು.


ಅವರು ಯೇಸುವಿನ ಮೇಲೆ ದೂರು ಹೇಳಲಾರಂಭಿಸಿ, “ಈ ನಮ್ಮ ಜನಾಂಗವು ದಂಗೆಯೇಳುವಂತೆಯೂ ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದೂ ಹೇಳಿ ಕೈಸರನಿಗೆ ತೆರಿಗೆ ಕೊಡದಂತೆ ಈತನು ಅಡ್ಡಿಮಾಡುತ್ತಿರುವುದನ್ನೂ ನಾವು ಕಂಡಿದ್ದೇವೆ,” ಎಂದರು.


ಮತ್ತಾನನ ಮಗ ಶೆಫಟ್ಯ, ಪಷ್ಹೂರನ ಮಗ ಗೆದಲ್ಯ, ಶೆಲೆಮ್ಯನ ಮಗ ಯೂಕಲ ಹಾಗೂ ಮಲ್ಕೀಯನ ಮಗ ಪಷ್ಹೂರ, ಇವರು ಯೆರೆಮೀಯನು ಜನರೆಲ್ಲರಿಗೆ ಹೇಳುತ್ತಿದ್ದುದನ್ನು ಕೇಳುತ್ತಿದ್ದರು.


ಈ ಪಟ್ಟಣದಲ್ಲಿ ನಿಲ್ಲುವವನು ಖಡ್ಗದಿಂದಲೂ, ಕ್ಷಾಮದಿಂದಲೂ, ವ್ಯಾಧಿಯಿಂದಲೂ ಸಾಯುವನು. ಆದರೆ ಹೊರಗೆ ಹೋಗಿ, ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರುವವನು ಬದುಕುವನು. ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.


ಏಕೆಂದರೆ ಅನೇಕರ ಚಾಡಿಯನ್ನು ಕೇಳಿದೆನು. “ಸುತ್ತಲೂ ಭಯವಿದೆ. ಅವನನ್ನು ಖಂಡಿಸಿರಿ! ಅವನನ್ನು ಖಂಡಿಸೋಣ!” ನನ್ನ ಆಪ್ತರೆಲ್ಲರೂ ನಾನು ಕುಂಟುವುದನ್ನು ನೋಡಿಕೊಳ್ಳುತ್ತಾ ಒಂದು ವೇಳೆ ಅವನು ಮೋಸಗೊಂಡಾನು. “ಆಗ ನಾವು ಅವನನ್ನು ಗೆದ್ದು, ಅವನಲ್ಲಿ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.”


ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.


ಮಾನ ಅವಮಾನಗಳಿಂದಲೂ ಕೀರ್ತಿ ಅಪಕೀರ್ತಿಗಳಿಂದಲೂ ಸತ್ಯವಂತರಾಗಿದ್ದರೂ ಮೋಸಗಾರರೂ ಎಂದೆಣಿಸಿಕೊಂಡವರಾಗಿದ್ದೇವೆ.


ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ ಕಳುಹಿಸಿ ಹೇಳಿದ್ದೇನೆಂದರೆ: “ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.


ಆಗ ಆ ಪ್ರಧಾನರು ಅರಸನಿಗೆ, “ಈ ಮನುಷ್ಯನು ಸಾಯಬೇಕು; ಇವನು ಅವರ ಸಂಗಡ ಇಂಥಾ ಮಾತುಗಳನ್ನು ಆಡಿ, ಈ ಪಟ್ಟಣದಲ್ಲಿ ಉಳಿದ ಎಲ್ಲಾ ಸೈನಿಕರನ್ನೂ, ಎಲ್ಲಾ ಜನರನ್ನೂ ಎದೆಗುಂದುವಂತೆ ಮಾಡುತ್ತಿದ್ದಾನೆ. ಈ ಮನುಷ್ಯನು ಈ ಜನರ ಕ್ಷೇಮವನ್ನಲ್ಲ, ಅವರ ಹಾನಿಯನ್ನೇ ಹಾರೈಸುತ್ತಾನೆ,” ಎಂದು ಹೇಳಿದರು.


ಅಲ್ಲಿ ಲೇಖಕ ಎಲೀಷಾಮನು, ಶೆಮಾಯನ ಮಗ ದೆಲಾಯನು, ಅಕ್ಬೋರನ ಮಗ ಎಲ್ನಾಥಾನನು, ಶಾಫಾನನ ಮಗ ಗೆಮರೀಯನು, ಹನನ್ಯನ ಮಗ ಚಿದ್ಕೀಯನು ಹೀಗೆ ರಾಜ್ಯಾಧಿಕಾರಿಗಳೆಲ್ಲರೂ ಕುಳಿತುಕೊಂಡಿದ್ದರು.


ಇಸ್ರಾಯೇಲರ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಡುವೆನು. ಅವರು ಅವನಿಗೆ ಸೇವೆಮಾಡುವರು; ಕಾಡುಮೃಗಗಳನ್ನು ಸಹ ಅವನಿಗೆ ಕೊಡುವೆನು.’ ”


ಈಗ ಈ ನಾಡುಗಳನ್ನೆಲ್ಲಾ ಬಾಬಿಲೋನಿಯದ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ.


ಆಗ ಪಷ್ಹೂರನು ಪ್ರವಾದಿಯಾದ ಯೆರೆಮೀಯನನ್ನು ಹೊಡೆದು, ಅವನನ್ನು ಯೆಹೋವ ದೇವರ ಆಲಯದ ಬಳಿಯಲ್ಲಿದ್ದ ಬೆನ್ಯಾಮೀನನ ಮೇಲ್ಭಾಗದಲ್ಲಿದ್ದ ಬಾಗಿಲಲ್ಲಿದ್ದ ಮರದ ಉಪಕರಣಕ್ಕೆ ಕಟ್ಟಿದರು.


ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಶತ್ರುಗಳು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ. ನಮ್ಮ ಅಂತ್ಯವು ಸಮೀಪಿಸಿತು, ನಮ್ಮ ದಿನಗಳು ತೀರಿದವು. ಏಕೆಂದರೆ ನಮ್ಮ ಅಂತ್ಯವು ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು