17 ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, ಅರಮನೆಗೆ ಕರೆತಂದನು, “ಯೆಹೋವ ದೇವರಿಂದ ಮಾತು ಉಂಟೋ,” ಎಂದು ಹೇಳಿದನು. ಯೆರೆಮೀಯನು, “ಹೌದು, ಉಂಟು. ನೀನು ಬಾಬಿಲೋನಿನ ಅರಸನ ಕೈಗೆಸಿಕ್ಕಿಬೀಳುವೆ,” ಎಂದನು.
17 ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು.
17 ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, “ದೇವರಿಂದ ಯಾವುದಾದರು ಸಂದೇಶ ದೊರೆಯಿತೊ?” ಎಂದು ಮನೆಯಲ್ಲಿ ಗುಟ್ಟಾಗಿ ವಿಚಾರಿಸಿದನು. ಯೆರೆಮೀಯನು, “ಹೌದು, ದೊರೆಯಿತು. ತಾವು ಬಾಬಿಲೋನಿನ ಅರಸನ ಕೈಗೆ ಸಿಕ್ಕಿಬೀಳುವಿರಿ,” ಎಂದನು.
17 ಅರಸನಾದ ಚಿದ್ಕೀಯನು ಅವನನ್ನು ಕರತರಿಸಿ ಯೆಹೋವನಿಂದ ದೈವೋಕ್ತಿಯು ದೊರೆಯಿತೋ ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು - ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿ ಬೀಳುವಿ ಅಂದನು.
17 ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ತನ್ನ ಅರಮನೆಗೆ ಕರೆತರಿಸಿದನು. ಚಿದ್ಕೀಯನು ಯೆರೆಮೀಯನೊಂದಿಗೆ ರಹಸ್ಯವಾಗಿ ಮಾತನಾಡಿ, “ಯೆಹೋವನಿಂದ ಏನಾದರೂ ಸಂದೇಶವಿದೆಯೊ?” ಎಂದು ಕೇಳಿದನು. “ಹೌದು, ಯೆಹೋವನಿಂದ ಒಂದು ಸಂದೇಶವಿದೆ. ಚಿದ್ಕೀಯನೇ, ನಿನ್ನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು” ಎಂದು ಯೆರೆಮೀಯನು ಉತ್ತರಿಸಿದನು.
ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’
ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ, ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ, ಪ್ರವಾದಿಯಾದ ಯೆರೆಮೀಯನ ಬಳಿಗೆ ಕಳುಹಿಸಿ, “ನಮಗೋಸ್ಕರ ನಮ್ಮ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸು,” ಎಂದು ಹೇಳಿಸಿದನು.
“ ‘ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ, ಈಜಿಪ್ಟ್ ದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ.
ಏಕೆಂದರೆ, ಯೋಹಾನನು ನೀತಿವಂತನು ಮತ್ತು ಪವಿತ್ರ ಮನುಷ್ಯನು ಎಂದು ತಿಳಿದು ಹೆರೋದನು ಭಯಪಟ್ಟು ಅವನನ್ನು ಸುರಕ್ಷಿತವಾಗಿಟ್ಟಿದ್ದನು. ಯೋಹಾನನು ಹೇಳಿದ್ದನ್ನು ಹೆರೋದನು ಕೇಳಿದಾಗಲೆಲ್ಲಾ ಅವನಿಗೆ ಗಲಿಬಿಲಿಯಾಗುತ್ತಿತ್ತು. ಆದರೂ ಅವನ ಮಾತನ್ನು ಕೇಳಲು ಇಷ್ಟಪಡುತ್ತಿದ್ದನು.
ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. ಆಗ ಅವನು, “ಹೋಗಿ ಜಯ ಹೊಂದಿರಿ. ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು.
ಕೇಡಿನ ಮೇಲೆ ಕೇಡು ಬರುವುದು, ಸುದ್ದಿಯ ಮೇಲೆ ಸುದ್ದಿ ಬರುವುದು, ಅವರು ಪ್ರವಾದಿಯಿಂದ ದರ್ಶನವನ್ನು ಹುಡುಕುವರು. ಆದರೆ ಯಾಜಕರಿಂದ ನಿಯಮ ಬೋಧನೆಯು ಅಡಗಿಹೋಗುವುದು, ಹಿರಿಯರಿಂದ ಸಮಾಲೋಚನೆಯು ಇಲ್ಲವಾಗುವುದು.