Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:18 - ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇನೆಂದರೆ: “ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ, ನಿನ್ನ ಸೇವಕರಿಗೂ, ಈ ಜನರಿಗೂ ವಿರೋಧವಾಗಿ ಏನು ಅಪರಾಧ ಮಾಡಿದ್ದೇನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ, “ನೀವು ನನ್ನನ್ನು ಸೆರೆಯಲ್ಲಿ ಹಾಕಿಸಿದ್ದಕ್ಕೆ ನಾನು ನಿನಗಾಗಲಿ, ನಿನ್ನ ಸೇವಕರಿಗಾಗಲಿ ಅಥವಾ ಈ ಜನರಿಗಾಗಲಿ ಯಾವ ಅಪರಾಧವನ್ನು ಮಾಡಿದೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಲ್ಲದೆ ಯೆರೆಮೀಯನು ಅರಸ ಚಿದ್ಕೀಯನಿಗೆ, “ನೀವು ನನ್ನನ್ನು ಸೆರೆಯಲ್ಲಿ ಹಾಕಿದ್ದಕ್ಕೆ ನಾನು ನಿಮಗಾಗಲಿ, ನಿಮ್ಮ ಸೇವಕರಿಗಾಗಲಿ, ಇಲ್ಲಿಯ ಜನರಿಗಾಗಲಿ ಮಾಡಿದ ಅಪರಾಧವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ - ನೀವು ನನ್ನನ್ನು ಸೆರೆಯಲ್ಲಿ ಹಾಕಿಸಿದ್ದಕ್ಕೆ ನಾನು ನಿನಗಾಗಲಿ ನಿನ್ನ ಸೇವಕರಿಗಾಗಲಿ ಈ ಜನರಿಗಾಗಲಿ ಯಾವ ಅಪರಾಧವನ್ನು ಮಾಡಿದೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಮೇಲೆ ಯೆರೆಮೀಯನು ರಾಜನಾದ ಚಿದ್ಕೀಯನನ್ನು ಹೀಗೆ ಕೇಳಿದನು, “ನಾನು ಏನು ತಪ್ಪು ಮಾಡಿದ್ದೇನೆ? ನಾನು ನಿನ್ನ ವಿರುದ್ಧ ಅಥವಾ ನಿನ್ನ ಅಧಿಕಾರಿಗಳ ವಿರುದ್ಧ ಅಥವಾ ಜೆರುಸಲೇಮಿನ ಜನರ ವಿರುದ್ಧ ಯಾವ ಅಪರಾಧವನ್ನು ಮಾಡಿದ್ದೇನೆ? ನೀನು ನನ್ನನ್ನು ಸೆರೆಮನೆಯಲ್ಲಿ ಏಕೆ ಹಾಕಿರುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:18
15 ತಿಳಿವುಗಳ ಹೋಲಿಕೆ  

ಆಗ ಪೌಲನು ತನ್ನ ಪ್ರತಿವಾದವನ್ನು ಮುಂದಿಟ್ಟು: “ನಾನು ಯೆಹೂದ್ಯರ ನಿಯಮಕ್ಕೆ ವಿರೋಧವಾಗಲಿ, ದೇವಾಲಯಕ್ಕೆ ವಿರೋಧವಾಗಲಿ, ಕೈಸರನ ವಿರೋಧವಾಗಲಿ ಯಾವ ತಪ್ಪನ್ನೂ ಮಾಡಿಲ್ಲ,” ಎಂದನು.


ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ನಾನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕಾರ್ಯಕ್ಕಾಗಿ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದರು.


ಇವನು ಮರಣದಂಡನೆಗೆ ಯೋಗ್ಯವಾದ ಯಾವುದೇ ಅಪರಾಧ ಮಾಡಿಲ್ಲ ಎಂದು ನಾನು ಕಂಡುಕೊಂಡಿದ್ದೇನೆ. ಆದರೆ ಇವನು ನೇರವಾಗಿ ಚಕ್ರವರ್ತಿಗೇ ತನ್ನ ಬೇಡಿಕೆ ಸಲ್ಲಿಸಿದ್ದರಿಂದ ಇವನನ್ನು ರೋಮ್ ನಗರಕ್ಕೆ ಕಳುಹಿಸಲು ತೀರ್ಮಾನಿಸಿದ್ದೇನೆ.


ಆದರೂ ಮರಣಶಿಕ್ಷೆಗೆ ಯೋಗ್ಯವಾದದ್ದೇನಾದರೂ ಮಾಡಿದ ಅಪರಾಧಿ ನಾನಾಗಿದ್ದರೆ, ಸಾಯಲಿಕ್ಕೂ ನಾನು ಹಿಂಜರಿಯುವುದಿಲ್ಲ. ಆದರೆ ಯೆಹೂದ್ಯರು ನನ್ನ ವಿರೋಧವಾಗಿ ತಂದಿರುವ ಆಪಾದನೆಗಳು ಸುಳ್ಳಾದವುಗಳಾದದ್ದರಿಂದ, ನನ್ನನ್ನು ಅವರಿಗೆ ಒಪ್ಪಿಸಲು ಯಾರಿಗೂ ಅಧಿಕಾರವಿಲ್ಲ. ನಾನು ನೇರವಾಗಿ ಕೈಸರನಿಗೇ ಮನವಿ ಮಾಡಿಕೊಳ್ಳುತ್ತೇನೆ,” ಎಂದು ಉತ್ತರಕೊಟ್ಟನು.


ನನ್ನ ದೇವರು ತಮ್ಮ ದೂತನನ್ನು ಕಳುಹಿಸಿ, ನನಗೆ ಯಾವ ಹಾನಿಯೂ ಆಗದಂತೆ ಸಿಂಹಗಳ ಬಾಯಿಗಳನ್ನು ಮುಚ್ಚಿಹಾಕಿದ್ದಾರೆ. ಏಕೆಂದರೆ ಅವರ ಮುಂದೆ ನಾನು ಯಥಾರ್ಥನೆಂದು ಗೋಚರವಾಗಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ತಪ್ಪನ್ನು ಮಾಡಲಿಲ್ಲ,” ಎಂದು ಹೇಳಿದನು.


ಹೀಗಿರಲಾಗಿ ಸತ್ಯವನ್ನು ಹೇಳಿದ್ದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೋ?


ಅವರು ಅಲ್ಲಿಂದ ಹೊರಗೆ ಬಂದು, ಒಬ್ಬರೊಂದಿಗೊಬ್ಬರು ಮಾತನಾಡುತ್ತಾ, “ಮರಣದಂಡನೆಗಾಗಲಿ, ಸೆರೆಮನೆ ವಾಸಕ್ಕಾಗಲಿ ಯೋಗ್ಯವಾದ ಏನನ್ನೂ ಈ ಮನುಷ್ಯನು ಮಾಡಿಲ್ಲ,” ಎಂದರು.


ಆದ್ದರಿಂದ ದೇವರ ಮುಂದೆಯೂ ಜನರ ಮುಂದೆಯೂ ನನ್ನ ಮನಸ್ಸಾಕ್ಷಿಯನ್ನು ಯಾವಾಗಲೂ ಶುದ್ಧವಾಗಿಟ್ಟುಕೊಂಡಿರಲು ಪರಿಶ್ರಮಿಸುತ್ತಿದ್ದೇನೆ.


ಪೌಲನು ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ನನ್ನ ಸಹೋದರರೇ, ಇಂದಿನವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ನಾನು ದೇವರ ಮುಂದೆ ನಡೆದುಕೊಂಡಿದ್ದೇನೆ,” ಎಂದನು.


ಯೆಹೂದದ ಅರಸನಾದ ಹಿಜ್ಕೀಯನೂ, ಎಲ್ಲಾ ಯೆಹೂದ್ಯರೂ ಅವನನ್ನು ಕೊಂದು ಹಾಕಿದರೋ? ಇಲ್ಲವೇ ಇಲ್ಲ. ಅವನು ಯೆಹೋವ ದೇವರಿಗೆ ಭಯಪಟ್ಟು, ಯೆಹೋವ ದೇವರ ಸಮ್ಮುಖದಲ್ಲಿ ಮೊರೆಯಿಟ್ಟನಲ್ಲವೋ? ಆಮೇಲೆ ಯೆಹೋವ ದೇವರು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು!” ಎಂದರು.


ನೀತಿವಂತನಿಗೆ ದಂಡ ವಿಧಿಸುವುದು ಒಳ್ಳೆಯದಲ್ಲದಿದ್ದರೆ, ಖಂಡಿತವಾಗಿಯೂ ಪ್ರಾಮಾಣಿಕ ಅಧಿಕಾರಿಗಳನ್ನು ಹೊಡೆಯುವುದು ಸರಿಯಲ್ಲ.


ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆಯಿಂದ ಕೇಡು ತೊಲಗುವುದೇ ಇಲ್ಲ.


ಆಗ ಯಾಕೋಬನು ಕೋಪಗೊಂಡು ಲಾಬಾನನೊಂದಿಗೆ ವಾದಿಸಿದನು. ಯಾಕೋಬನು ಉತ್ತರವಾಗಿ ಲಾಬಾನನಿಗೆ, “ನೀನು ನನ್ನನ್ನು ಬೆನ್ನಟ್ಟಿ ಬರುವುದಕ್ಕೆ ನನ್ನ ಅಪರಾಧವೇನು?” ನನ್ನ ಪಾಪವೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು